ಪುನೀತ್‌ ಹೆಸರಿನಲ್ಲಿ ಮ್ಯಾನ್‌ ಆಫ್‌ ಹ್ಯುಮಾನಿಟಿ ಪ್ರಶಸ್ತಿ ಪಡೆದ ತಮಿಳು ನಟ ಆರ್ಯ!

Published : Jul 21, 2022, 09:34 AM IST
ಪುನೀತ್‌ ಹೆಸರಿನಲ್ಲಿ ಮ್ಯಾನ್‌ ಆಫ್‌ ಹ್ಯುಮಾನಿಟಿ ಪ್ರಶಸ್ತಿ ಪಡೆದ ತಮಿಳು ನಟ ಆರ್ಯ!

ಸಾರಾಂಶ

ಮ್ಯಾನ್‌ ಆಫ್‌ ಹ್ಯುಮಾನಿಟಿ ಪ್ರಸಕ್ತ ಸಾಲಿನ ಪ್ರಶಸ್ತಿ ತಮಿಳು ನಟ ಆರ್ಯಗೆ ಪ್ರದಾನ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶ್ವಿನಿ ಪುನೀತ್.  

ಪ್ರತಿಷ್ಠಿತ ತೆಲುಗು ವೆಬ್‌ಸೈಟ್‌ ಸಂಸ್ಥೆ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಮ್ಯಾನ್‌ ಆಫ್‌ ಹ್ಯೂಮ್ಯಾನಿಟಿ ಪ್ರಶಸ್ತಿ ಸ್ಥಾಪಿಸಿದ್ದು, ಪ್ರಸಕ್ತ ಸಾಲಿನ ಪ್ರಶಸ್ತಿಯನ್ನು ತಮಿಳು ನಟ ಆರ್ಯ ಅವರಿಗೆ ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರಿಂದ ಆರ್ಯ ಪ್ರಶಸ್ತಿ ಸ್ವೀಕರಿಸಿದರು. ಪುನೀತ್‌ ಅವರ ಅಗಲಿಕೆಯ ನಂತರ ಇದೇ ಮೊದಲ ಬಾರಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಸಿನಿಮಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜತೆಗೆ ‘ಯುವರತ್ನ’ ಚಿತ್ರದಲ್ಲಿನ ನಟನೆಗಾಗಿ ಪುನೀತ್‌ ಪರವಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಆರ್ಯ, ‘ಪುನೀತ್‌ ರಾಜ್‌ಕುಮಾರ್‌ ಎಷ್ಟುಒಳ್ಳೆಯವರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಒಮ್ಮೆ ನಾನು ಅವರ ಮನೆಗೆ ಹೋಗಿದ್ದೆ. ಅಂದು ಭಾನುವಾರ ಆಗಿದ್ದರಿಂದ ಕೆಲಸದವರು ಯಾರೂ ಇರಲಿಲ್ಲ. ಅಪ್ಪು ಅವರೇ ಅಡುಗೆ ಮಾಡಿ ನನಗೆ ಬಡಿಸಿದರು. ತುಂಬಾ ಸರಳವಾಗಿ ಇದ್ದ ಗ್ರೇಟ್‌ ವ್ಯಕ್ತಿ. ಅವರನ್ನು ಕಳೆದುಕೊಂಡಿದ್ದು ತುಂಬಾ ನಷ್ಟವಾಗಿದೆ. ಅವರ ಹೆಸರಿನಲ್ಲಿ ಸ್ಥಾಪಿಸಿರುವ ಮ್ಯಾನ್‌ ಆಫ್‌ ಹ್ಯೂಮ್ಯಾನಿಟಿ ಪ್ರಶಸ್ತಿಯನ್ನು ಮೊದಲು ನಾನು ಸ್ವೀಕರಿಸುತ್ತಿದ್ದೇನೆ’ ಎಂದು ಭಾವುಕರಾದರು. ಗಲಾಟ ಡಾಟ್‌ ಕಾಂ ಸಂಸ್ಥೆ ಪ್ರತಿ ವರ್ಷ ಈ ಪ್ರಶಸ್ತಿಯನ್ನು ನೀಡಲಿದೆ.

ಬೆಂಗಳೂರಿನ ರಸ್ತೆಗೆ ಪುನೀತ್ ರಾಜ್‌ಕುಮಾರ್ ಹೆಸರು

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನ ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌ಆರ್ ರಮೇಶ್ ಸೇರಿದಂತೆ ಹಲವರು ಬಿಬಿಎಂಪಿ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದು, ಇದೀಗ ಈ ಮನವಿಗೆ ಬಿಬಿಎಂಪಿ ಅಧಿಕಾರಿಗಳು ಅನುಮೋದನೆ ನಾಡಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಮಾಲ್ ಜಂಕ್ಷನ್‌ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ರಸ್ತೆ' ಎಂದು ನಾಮಕರಣ ಮಾಡಲಾಗಿದೆ. ಅಷ್ಟೇ ಅಲ್ಲದೆ ಈಗ ಅದರ ನಾಮಫಲಕವನ್ನು ಅಳವಡಿಸುವ ಕಾರ್ಯವನ್ನು ಸಹ ಮಾಡಲಾಗ್ತಿದೆ. ಈ 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ ಮಾಡಿರುವುದು ಮಾತ್ರವಲ್ಲದೆ, ಪ್ರಮುಖ ಸ್ಥಳಗಳಾದ ಹೊಸಕೆರೆ ಹಳ್ಳಿ, ದೇವೆಗೌಡ ಪೆಟ್ರೋಲ್ ಬಂಕ್, ಕದಿರೇನಹಳ್ಳಿ ಪಾರ್ಕ್, ಸಾರಕ್ಕಿ ಸಿಗ್ನಲ್, ಜೆಪಿ ನಗರ ಹಾಗೂ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಜಂಕ್ಷನ್ ಗಳಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ರಸ್ತೆ ಎಂಬ ನಾಮಫಲಕವನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಪುನೀತ್ ರಾಜ್‌ಕುಮಾರ್ ಟ್ವಿಟ್ಟರ್ ಖಾತೆಯಿಂದ ಮಾಯವಾಗಿದ್ದ ಬ್ಲ್ಯೂ ಟಿಕ್ ಮತ್ತೆ ವಾಪಾಸ್: ಫ್ಯಾನ್ಸ್ ಖುಷ್

ಪರೀಕ್ಷೆಯಲ್ಲಿ ಪುನೀತ್ ಬಗ್ಗೆ ಪ್ರಶ್ನೆ

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಅಪ್ಪು ಅವರ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಲ್ಕನೇ ತರಗತಿ ಕನ್ನಡ ವಿಷಯದ ಪರೀಕ್ಷೆಯಲ್ಲಿ ಅಪ್ಪು ಬಗ್ಗೆ ಕೇಳಲಾಗಿದೆ. ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ಏನೆಂದು ಕರೆಯುತ್ತಿದ್ದರು, ಅವರ ತಂದೆಯ ಹೆಸರೇನು, ಪುನೀತ್ ಯಾವಾಗ ಜನಿಸಿದರು ಎನ್ನುವ ಪ್ರಶ್ನೆಗಳನ್ನು ಕೇಳಲಾಗಿದೆ. ಈ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಬೇಕಿದೆ. ಈ ಪ್ರಶ್ನೆಪತ್ರಿಕೆ ನೋಡಿದ ಅಭಿಮಾನಿಗಳು ಸಂತಸ ಹೊರಹಾಕುತ್ತಿದ್ದಾರೆ. ಶಾಲೆಗೆ ಧನ್ಯವಾದ ತಿಳಿಸುತ್ತಿದ್ದಾರೆ. ಮಕ್ಕಳ ಪಠ್ಯಪುಸ್ತಕದಲ್ಲಿ ಪುನೀತ್ ಬಗ್ಗೆ ಪಾಠ ಸೇರಿಸಬೇನ್ನುವ ಮಾತು ಸಹ ಕೇಳಿಬರುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?