ಕ್ರೂರ ವಿಧಿಯೆ ನಿನಗೆ ಧಿಕ್ಕಾರ: ಗಾಯಕ ನವೀನ್ ಸಜ್ಜು

By Suvarna News  |  First Published Nov 1, 2021, 1:55 PM IST

ಅಪ್ಪು ಸರ್ ಕಂಟೆಂಟ್‌ನಿಂದ ಹಿಡಿದು ಟೆಕ್ನಿಕಲಿಯಾಗಿಯೂ ಅವರು ಎಷ್ಟೊಂದು ತಿಳಿದುಕೊಂಡಿದ್ದರು ಎಂಬುದು ನೋಡಿ ಆಶ್ಚರ್ಯವಾಯಿತು. ಏಕೆಂದರೆ ಅವರು ಐದಾರು ಕ್ಯಾಮರಾಗಳ ಹೆಸರನ್ನು ಹೇಳಿ ಇಂತಹ ಶಾಟ್‌ಗೆ  ಇಂತಹ ಕ್ಯಾಮರಾ ಬಳಸಬೇಕು ಎಂದು ಹೇಳಿದ್ದರು.


ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಅಕಾಲಿಕ ಅಗಲಿಕೆ ಕನ್ನಡ ಚಿತ್ರರಂಗಕ್ಕೆ (Sandalwood) ಬರಸಿಡಿಲು ಬಡಿದಂತೆ ಮಾಡಿದೆ.  ಎಲ್ಲ ವರ್ಗದ ಜನರು ಸರಳ ಜೀವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಭಾರತೀಯ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಅಪ್ಪು ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಚಿತ್ರರಂಗದ ಗೆಳೆಯರು ಪುನೀತ್‌ರನ್ನು ನೆನಪಿಸಿಕೊಂಡಿದ್ದಾರೆ. ಅಪ್ಪು ಕೊನೆಯ ಭೇಟಿ ಬಗ್ಗೆ ಕನ್ನಡದ ಗಾಯಕ ನವೀನ್ ಸಜ್ಜು (Naveen Sajju) ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಬರಹವೊಂದನ್ನು ಹಂಚಿಕೊಂಡಿದ್ದಾರೆ.

I Love You ಚಿನ್ನ: ಜಗ್ಗೇಶ್ ಬಿಚ್ಚಿಟ್ಟ ಪುನೀತ್ ನೆನಪು

Tap to resize

Latest Videos

ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ (Instagram), 'ಮಲೆ ಮಹದೇಶ್ವರ ಸ್ವಾಮಿಯ (Male Mahadeshwara Swamy) ಕುರಿತ ಒಂದು ಆಲ್ಬಮ್ ಸಾಂಗ್ (Album Song) ಪಿಆರ್‌ಕೆ ಬ್ಯಾನರ್‌ನಲ್ಲಿ (PRK Banner) ಮಾಡಲು ಅಪ್ಪು ಸರ್ ಕೆಲ ತಿಂಗಳ ಹಿಂದೆ ಒಪ್ಪಿಕೊಂಡಿದ್ದರು. ಅದೇ ವಿಷಯವಾಗಿ ಮಾತನಾಡಲು ಕಳೆದ ಬುಧವಾರ ಸಂಜೆ ಅವರ ಮನೆಗೆ ಹೋಗಿದ್ದೆ. ಸುಮಾರು ಒಂದೂವರೆ ತಾಸು ಅವರೊಂದಿಗೆ ಮಾತನಾಡಿದ್ದೆ. ಅವರ ಸರಳತೆ, ಬೇರೆಯವರಿಗೆ ಕೊಡುತ್ತಿದ್ದ ಬೆಲೆ, ಹೇಳುತ್ತಿದ್ದ ಆತ್ಮವಿಶ್ವಾಸದ ಮಾತುಗಳ ಬಗ್ಗೆ ನಾನು ವಿಶೇಷವಾಗಿ ಹೇಳಬೇಕಾದ್ದಿಲ್ಲ. ಅದು ಎಲ್ಲರಿಗೂ ಗೊತ್ತಿರುವಂತಹದ್ದೆ.

ಸಂಪೂರ್ಣವಾಗಿ ಕಂಪೋಸಿಷನ್ ಮುಗಿದ ಹಾಡನ್ನು ಅವರಿಗೆ ಕೇಳಿಸಿದೆ. ಹಾಡು ಕೇಳಿ ಅವರು ಥ್ರಿಲ್ ಆಗಿದ್ದು, ಅವರ ಮಾತುಗಳಲ್ಲಿ ವ್ಯಕ್ತವಾಯಿತು. ಹಾಡನ್ನು ಹೇಗೆ ಶೂಟಿಂಗ್ ಮಾಡಬೇಕು, ಯಾವೆಲ್ಲ ಕ್ಯಾಮರಾ ಬಳಸಬೇಕು ಎಂಬುದನ್ನು ಪಿನ್ ಟು ಪಿನ್ ಹೇಳಿದರು. ಅದರ ಜೊತೆಗೆ ಐದಾರು ರೆಫ್ರರೆನ್ಸ್ ವಿಡಿಯೋಗಳನ್ನು ತೋರಿಸಿದರು. ಮಹದೇಶ್ವರ ಬೆಟ್ಟವನ್ನು ತೋರಿಸುವ ಅವರ ಕಲ್ಪನೆಯನ್ನು ನೋಡಿ ಬೆರಗಾಗಿದ್ದೆ. ಅಪ್ಪು ಸರ್ ಕಂಟೆಂಟ್‌ನಿಂದ ಹಿಡಿದು ಟೆಕ್ನಿಕಲಿಯಾಗಿಯೂ ಅವರು ಎಷ್ಟೊಂದು ತಿಳಿದುಕೊಂಡಿದ್ದರು ಎಂಬುದು ನೋಡಿ ಆಶ್ಚರ್ಯವಾಯಿತು. ಏಕೆಂದರೆ ಅವರು ಐದಾರು ಕ್ಯಾಮರಾಗಳ ಹೆಸರನ್ನು ಹೇಳಿ ಇಂತಹ ಶಾಟ್ ಗೆ ಇಂತಹ ಕ್ಯಾಮರಾ ಬಳಸಬೇಕು ಎಂದು ವಿವರವಾಗಿ ಹೇಳಿದ್ದರು.

undefined

13 ವರ್ಷಗಳ ನಂತರ ಡಿಪಿಗೆ ಪವರ್ ಫೋಟೋ ಹಾಕಿದ ಸುದೀಪ್

ಇದೇ ವಿಷಯವಾಗಿ ಮಾತನಾಡಲು ಸೋಮವಾರಬರಲು ಹೇಳಿದ್ದರು. ಬಹುಶಃ ಮುಂದಿನ ವಾರ ಮಲೆ‌ ಮಹದೇಶ್ವರ ಹಾಡಿಗೆ ನಾವಿಬ್ಬರು ರಾಗವಾಗಬೇಕಿತ್ತು, ನೃತ್ಯಕ್ಕೆ ಹೆಜ್ಜೆ ಹಾಕಬೇಕಿತ್ತು. ಆದರೆ ಅವರು ಇನ್ನು ಯಾರಿಗೂ ಸಿಗದ ಹಾಗೆ ಬಹುದೂರ ಹೋಗಿಬಿಟ್ಟರು. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ಎಂದಿಗೂ ಎಂದೆಂದಿಗೂ ಜನಮಾನಸದಲ್ಲಿ ಅಜರಾಮರ. ಅವರೊಂದಿಗೆ ಕೆಲವು ಸಮಯ ಕಳೆದಿದ್ದೆ ಎಂಬುದೇ ನನ್ನ ಸಾರ್ಥಕ ಗಳಿಕೆ. ಹೋಗಿ ಬನ್ನಿ ಸಾರ್. ಕ್ರೂರ ವಿಧಿಯೆ ನಿನಗೆ ಧಿಕ್ಕಾರ ಎಂದು ಅಪ್ಪು ಕೊನೆಯ ಭೇಟಿ ಬಗ್ಗೆ ನವೀನ್ ಸಜ್ಜು ಪೋಸ್ಟ್ ಮಾಡಿದ್ದಾರೆ.
 


ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಎರಡು ದಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್‌ ರಾಜ್‌ಕುಮಾರ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಭಾರತೀಯ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಅನೇಕ ಅಭಿಮಾನಿಗಳು ಪಾರ್ಥಿವ ಶರೀರದ ದರ್ಶನ ಪಡೆದರು. ಭಾನುವಾರ ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿ ತಾಯಿ ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. 

"

click me!