ಪುನೀತ್ 'ಜೇಮ್ಸ್' ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

Published : Jul 05, 2022, 12:02 PM ISTUpdated : Jul 05, 2022, 12:11 PM IST
ಪುನೀತ್ 'ಜೇಮ್ಸ್' ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

ಸಾರಾಂಶ

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟ್ರೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟ್ರೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಿಶೋರ್ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗತ್ತಿದೆ. ಕಿಶೋರ್ ಸ್ಥಿತಿ ಗಂಭೀರವಾಗಿದ್ದು ಕೋಮಾದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. 

ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿದ್ದರೆ ಮಾರಣಾಂತಿಕ ಸ್ಟ್ರೋಕ್ ಅಪಾಯ !

ಕಿಶೋರ್ ಪತ್ತಿಕೊಂಡ ಜೇಮ್ಸ್ ಸಿನಿಮಾ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಇದಾಗಿದೆ. ಅಪ್ಪು ನಿಧನದ ಬಳಿಕ ಈ ಸಿನಿಮಾ ರಿಲೀಸ್ ಆಗಿತ್ತು. ನಿರ್ದೇಶಕ ಚೇತನ್ ಕುಮಾರ್ ಸಾರಥ್ಯದಲ್ಲಿ ಬಂದ ಜೇಮ್ಸ್ 2022 ಮಾರ್ಚ್ 17ರಂದು ಜೇಮ್ಸ್ ಸಿನಿಮಾ ತೆರೆಗೆ ಬಂದಿತ್ತು. ಅಪ್ಪು ನಿಧನದ ಬಳಿಕ ಬಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನಿರ್ಮಾಪಕ ಕಿಶೋರ್ ಅವರಿಗೆ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆಗಿಂತ ಅಪ್ಪು ಇಲ್ಲ ಎನ್ನುವ ನೋವು ದೊಡ್ಡ ಮಟ್ಟದಲ್ಲಿ ಕಾಡಿತ್ತು. ಇದೀಗ ಕಿಶೋರ್ ಆಸ್ಪತ್ರೆ ಸೇರಿರುವುದು ಅವರ ಕುಟುಂಬದವರಿಗೆ ಆತಂಕ ಮನೆಮಾಡಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?