
ಬೆಂಗಳೂರು: ಮೇ. 24, ಕನ್ನಡ ಚಿತ್ರರಂಗದ 'ತುಪ್ಪದ ಬೆಡಗಿ' ಖ್ಯಾತಿಯ ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರಿಗೆ ಇಂದು (ಮೇ. 24) ಜನ್ಮದಿನದ ಸಂಭ್ರಮ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ, 'ಸರ್ಕಾರಿ ನ್ಯಾಯಬೆಲೆ ಅಂಗಡಿ'ಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹೌದು, ನಟಿ ರಾಗಿಣಿ ದ್ವಿವೇದಿ ಸದ್ಯ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 'ಸರ್ಕಾರಿ ನ್ಯಾಯಬೆಲೆ ಅಂಗಡಿ'ಯ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅವರದ್ದು.
ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರತಂಡದ ಜೊತೆಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ಇಂಥದ್ದೊಂದು ವಿಭಿನ್ನ ರೀತಿಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಅಂದಹಾಗೆ, ನಟಿ ರಾಗಿಣಿ ದ್ವಿವೇದಿ ಅವರು ಈಗ ಸಾಕಷ್ಟು ಚೂಸಿ ಆಗಿದ್ದಾರೆ. ಈ ಮೊದಲಿನಂತೆ ಅಗತ್ಯವಿದೆ ಎಂದು ಸಿಕ್ಕಸಿಕ್ಕ ಪಾತ್ರಗಳನ್ನು ಮಾಡುವುದಿಲ್ಲ. ತಮ್ಮ ವ್ಯಕ್ತಿತ್ವಕ್ಕೆ ಹೊಂದುವ, ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಪಾತ್ರಗಳನ್ನಷ್ಟೇ ಇತ್ತೀಚೆಗೆ ನಟಿ ರಾಗಿಣಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಅವರು ನಟನೆಯಲ್ಲಿ ಮೂಡಿ ಬರುತ್ತಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಪಾತ್ರ ಕೂಡ ತುಂಬಾ ಉತ್ತಮ ಸಂದೇಶ ನೀಡುವಂತಿದೆ ಎನ್ನಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.