
ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾವೊಂದು ಬರುತ್ತಿದ್ದು, ಮತ್ತೊಂದು ವಿನೂತನ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಚಿತ್ರಕ್ಕೆ 'ಕೆರೆಬೇಟೆ' ಎಂದು ಹೆಸರಿಡಲಾಗಿದೆ. ಗೌರಿ ಶಂಕರ್ ನಾಯಕನಾಗಿ ನಟಿಸಿದ್ದು, ಚಿತ್ರಕ್ಕೆ ರಾಜ್ ಗುರು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಟ ಗೌರಿಶಂಕರ್ ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ ಮೇಲಾಗಿದ್ದು, ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ರಾಜ್‌ಗುರು ಸಾರಥ್ಯದಲ್ಲಿ ಮೂಡಿಬಂದಿದ್ದು, ಇದವರ ಮೊದಲ ಚಿತ್ರ. ಕಳೆದೊಂದು ದಶಕದಿಂದ ಎ.ಆರ್ ಬಾಬು, ಪವನ್ ಒಡೆಯರ್ ಹಾಗೂ ಇತರೆ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಇವರಿಗಿದೆ.
ಕೆರೆಬೇಟೆ ಎಂದರೇನು?
ಮಲೆನಾಡು ಭಾಗದಲ್ಲಿ ವರ್ಷಕ್ಕೊಮ್ಮೆ ದೊಡ್ಡೆ ಕೆರೆಗಳಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಇದೇ ಈ ಸಿನಿಮಾದ ಮುಖ್ಯ ಎಳೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.
'ಕೆರೆಬೇಟೆ ಜನಮನ ಸಿನಿಮಾ ಸಂಸ್ಥೆಯ ಹೆಮ್ಮೆಯ ಕಾಣಿಕೆ. ಇದುವರೆಗೂ ನೋಡಿರದ ಒಂದು ಹಳ್ಳಿ ಸೊಗಡಿನ ಕಥೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು ಇದೇ 27ರಂದು ಶುಕ್ರವಾರ ಮಧ್ಯಾಹ್ನ 12.01 ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ' ಎನ್ನುತ್ತಾರೆ ನಾಯಕ ಗೌರಿ ಶಂಕರ್.
5 ವರ್ಷಗಳ ಬಳಿಕ ರಾಜಹಂಸ ಖ್ಯಾತಿಯ ಗೌರಿ ಶಂಕರ್ ರೀ-ಎಂಟ್ರಿ: ಅ.24ರಂದು ಚಿತ್ರದ ಶೀರ್ಷಿಕೆ ಬಿಡುಗಡೆ
ನಾಯಕ ಗೌರಿಶಂಕರ್ ಸಹೋದರ ಜೈಶಂಕರ್ ಪಟೇಲ್ ಹಾಗೂ ನಾಯಕ ಗೌರಿಶಂಕರ್ ಪಟೇಲ್ ಜನಮನ ಸಿನಿಮಾ ಬ್ಯಾನರ್‌ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರು ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಿಸಲಾಗಿದೆ. ಸದ್ಯ ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಮುಂದಿನ ವರ್ಷಾರಂಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.