ಸದ್ಯದಲ್ಲೇ ತಲೈವಾ-ಬಿಗ್‌ ಬಿ ಜೋಡಿ ಕಮಾಲ್‌; ಬಾಕ್ಸಾಫೀಸ್ ಬೇಟೆಗೆ 'ವೆಟ್ಟೈಯಾನ್' ಭರ್ಜರಿ ಎಂಟ್ರಿ!

Published : Apr 08, 2024, 12:46 PM ISTUpdated : Apr 08, 2024, 12:50 PM IST
ಸದ್ಯದಲ್ಲೇ ತಲೈವಾ-ಬಿಗ್‌ ಬಿ ಜೋಡಿ ಕಮಾಲ್‌; ಬಾಕ್ಸಾಫೀಸ್ ಬೇಟೆಗೆ 'ವೆಟ್ಟೈಯಾನ್' ಭರ್ಜರಿ ಎಂಟ್ರಿ!

ಸಾರಾಂಶ

ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ..

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

ಸೂರ್ಯ ನಟಿಸಿದ 'ಜೈ ಭೀಮ್' ಸಿನಿಮಾ ನಿರ್ದೇಶಿಸಿದ್ದ ಟಿ.ಎಸ್. ಜ್ಞಾನವೇಲ್ 'ವೆಟ್ಟೈಯಾನ್'ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.  ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ.

ನೆಪೋಟಿಸಂ ಅನುಕೂಲತೆಗಳನ್ನು ಒಪ್ಪಿಕೊಂಡ್ರೆ ಚರ್ಚೆಗಳು ನಿಲ್ಲುತ್ತವೆ; ಹೇಳೇ ಬಿಟ್ರು ಹಿತಾ ಚಂದ್ರಶೇಖರ್!

ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ. 

ನಾನು ಜಗಳವಾಡುತ್ತೇನೆ, ನನ್ನಿಂದಾನೇ ಆಗೋದು, ಬೇರೆಯವರಿಂದ ಅಲ್ಲ; ಸತೀಶ್ ನೀನಾಸಂ ಹೇಳಿಕೆ ವೈರಲ್!

'ವೆಟ್ಟೈಯಾನ್' ಚಿತ್ರದಲ್ಲಿ ರಜನಿಕಾಂತ್, ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ನಾನು ಬೆಳೆದ ಎರಡೂ ಧರ್ಮಗಳಲ್ಲಿ ನಂಬಿಕೆ ಹೊಂದಿದ್ದೇನೆ; ನಟಿ ಮೇಘನಾ ರಾಜ್ ಮಾತಿನ ಮರ್ಮವೇನಿದೆ?

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. 

25 ದಿನ ಪೂರೈಸಿದ ದೀಕ್ಷಿತ್ ಶೆಟ್ಟಿಯ 'ಬ್ಲಿಂಕ್' ಸಿನಿಮಾ; ಪ್ರೇಕ್ಷಕರು ಅಪ್ಪಿಕೊಂಡು ಗೆಲ್ಲಿಸಿದರು ಎಂದ ಟೀಮ್!

ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ ವೆಟ್ಟೈಯಾನ್ ಸಿನಿಮಾ ನಿರ್ಮಿಸುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಈ ಬಾರಿಯ ಬಿಗ್ ಬಾಸ್ ಇಷ್ಟೊಂದು ಪರ್ಸನಲ್‌ ಜಿದ್ದಾಜಿದ್ದಿಗೆ ಕಾರಣವಾಗಿದ್ದೇಕೆ? ಗುಟ್ಟು ರಟ್ಟಾಯ್ತು..!
ಆಧ್ಯಾತ್ಮದ ಬದುಕಿನ ದಾರಿ ಹಿಡಿದ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ನಾಯಕಿ! 'ಬ್ರೈನ್‌ ವಾಶ್' ಮಾಡಿದ್ದು ಯಾರು?