
ಪ್ಯಾನ್ ಇಂಡಿಯಾ ಸಿನಿಮಾವನ್ನು ಚಿತ್ರತಂಡ ಟೀಸರ್ ಮೂಲಕ ದೊಡ್ಡ ಮಟ್ಟದಲ್ಲಿ ಸಂಭ್ರಮಿಸಲು ಹೊರಟಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಹೀಗೆ ಐದು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗುತ್ತಿದೆ.
ನಾನು ನಾಯಿ ಪ್ರಿಯೆ, ಅದಕ್ಕೇ 777 ಚಾರ್ಲಿ ಆಡಿಶನ್‌ಗೆ ಹೋಗಿದ್ದೆ; ಸಂಗೀತಾ ಶೃಂಗೇರಿ ಜತೆ ಮಾತುಕತೆ
ಕಿರಣ್ ರಾಜ್ ನಿರ್ದೇಶನದ ಈ ಚಿತ್ರದ ಅಂತಿಮ ಭಾಗದ ಚಿತ್ರೀಕರಣ ಈ ವರ್ಷಾರಂಭ ಕಾಶ್ಮೀರದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಉಳಿದಂತೆ ಒಂದಿಷ್ಟು ದೃಶ್ಯಗಳ ಚಿತ್ರೀಕರಣ ಬಾಕಿ ಇದ್ದು, ಅದನ್ನು ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಪೋಸ್‌ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಬಹುತೇಕ ಮುಕ್ತಾಯ ಆಗಿದ್ದು, ಒಟ್ಟು 160 ದಿನಗಳ ಕಾಲ ಇಲ್ಲಿಯವರೆಗೂ ಶೂಟಿಂಗ್ ಮಾಡಲಾಗಿದೆ.
ರಕ್ಷಿತ್ ಶೆಟ್ಟಿಪಾತ್ರಕ್ಕೆ ಸ್ಫೂರ್ತಿಯಾಗುವ ರಾಯಲ್ ಕ್ಯಾರೆಕ್ಟರ್ ವಂಶಿನಾದನ್!
ಚಿತ್ರದ ನಾಯಕ ರಕ್ಷಿತ್ ಶೆಟ್ಟಿ ಜತೆಗೆ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಚಿತ್ರದ ಹೈಲೈಟ್‌ಗಳಲ್ಲಿ ಒಂದು. ಶ್ವಾನ ಪಾತ್ರದ ಚಿತ್ರೀಕರಣಕ್ಕಾಗಿಯೇ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಸಂಗೀತಾ ಶೃಂಗೇರಿ ನಾಯಕಿಯಾಗಿ ನಟಿಸಿದ್ದು, ತಮಿಳಿನ ಬಾಬಿ ಸಿಂಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.