ಬಕೆಟ್ ಅಲ್ಲಾ, ಟ್ಯಾಂಕರೇ ಹಿಡಿತೀನಿ; ನೆಟ್ಟಿಗರ ಮಾತಿಗೆ ರಕ್ಷಿತ್‌ ಶೆಟ್ಟಿ ತಿರುಗೇಟು

Published : Mar 11, 2023, 06:07 PM ISTUpdated : Mar 13, 2023, 12:42 PM IST
ಬಕೆಟ್ ಅಲ್ಲಾ, ಟ್ಯಾಂಕರೇ ಹಿಡಿತೀನಿ; ನೆಟ್ಟಿಗರ ಮಾತಿಗೆ ರಕ್ಷಿತ್‌ ಶೆಟ್ಟಿ ತಿರುಗೇಟು

ಸಾರಾಂಶ

ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೆ ಕಿಡಿ ಕಾರಿದ್ದಾರೆ. ನೆಟ್ಟಿಗರ ಮಾತಿಗೆ ಪ್ರತಿಕ್ರಿಯೆ ನೀಡಿದ ರಕ್ಷಿತ್ ಶೆಟ್ಟಿ ಬಕೆಟ್ ಅಲ್ಲ ಟ್ಯಾಂಕರೇಹಿಡಿತೀನಿ ಎಂದು ಹೇಳಿದ್ದಾರೆ. 

ಉಡುಪಿಯಲ್ಲಿರುವ ವಿಶ್ವಪ್ರಸಿದ್ಧ ಕೃಷ್ಣಮಠಕ್ಕೆ ಮುಸ್ಲಿಂರು ಭೂಮಿ ದಾನವಾಗಿ ನೀಡಿದ್ದರು ಎಂದು ಕೆಪಿಸಿಸಿ ಮುಖ್ಯ ಕಾರ್ಯದರ್ಶಿ ಮಿಥುನ್‌ ರೈ ಅವರ ಹೇಳಿಕೆಗೆ ಸ್ಯಾಂಡಲ್‌ವುಡ್‌ ಹೀರೋ, ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಕಿಡಿಕಿಡಿಯಾಗಿದ್ದಾರೆ. ಈ ಬಗ್ಗೆ ನಿಮಗೆ ಏನೂ ಗೊತ್ತಿಲ್ಲ ಎಂದ ಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಮೂರ್ಖತನದ ಮಾತನಾಡುವುದೇಕೆ? ಎಂದು ರಕ್ಷಿತ್ ಪ್ರಶ್ನೆ ಮಾಡಿದ್ದರು. ಮಿಥುನ್ ರೈ ಹೆಸರನ್ನು ಎಲ್ಲೂ ಬಳಸದೆ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ ಸರಿಯಾಗಿ ತಿರುಗೇಟು ನೀಡಿದ್ದರು. ರಕ್ಷಿತ್ ಶೆಟ್ಟಿ ಟ್ವೀಟ್‌ಗೆ ಪರ ವಿರೋಧ ಚರ್ಚೆಯಾಗುತ್ತಿದೆ. ಪ್ರತಿಕ್ರಿಯೆ ನೀಡಿದ ರಕ್ಷಿತ್ ಅವರಿಗೆ ಅನೇಕರು ಬೆಂಬಲ ನೀಡಿದ್ರೆ ಇನ್ನು ಕೆಲವರು ತರಾಟೆ ತೆಗೆದುಕೊಂಡಿದ್ದಾರೆ.  

ರಕ್ಷಿತ್ ಶೆಟ್ಟಿ ಟ್ವೀಟ್ 

'ದೇವನಗರಿ ಉಡುಪಿಯ ಇತಿಹಾಸ ಸಾವಿರಾರು ವರ್ಷಗಳ ಹಿಂದಿನದು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ನಿಮಗೆ ಏನೂ ಗೊತ್ತಿಲ್ಲ ಎಂದ ಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಮೂರ್ಖತನದ ಮಾತನಾಡುವುದೇಕೆ? ಎಂದು ಪ್ರಶ್ನೆ ಮಾಡಿ ಟ್ವೀಟ್‌ ಮಾಡಿದ್ದರು. 

ರಕ್ಷಿತ್‌ಗೆ ನೆಟ್ಟಿಗರ ತರಾಟೆ 

'ರಕ್ಷಿತ್ ಶೆಟ್ರೆ ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗ್ಬೇಡಿ ದೇವರು ಮೆಚ್ಚುವಂಥ ಕೆಲಸ ಮಾಡಿ ಅಷ್ಟು ಸಾಕು' ಎಂದು ನೆಟ್ಟಿರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇದಕ್ಕೆ ಸಿಂಪಲ್ ಸ್ಟಾರ್ ಪ್ರತಿಕ್ರಿಯೆ ನೀಡಿದ್ದಾರೆ. 

'ದೇವನಗರಿಯ ಬಗ್ಗೆ ಮೂರ್ಖರ ಹಾಗೆ ಮಾತನಾಡಬೇಡಿ..' ಕಾಂಗ್ರೆಸ್‌ ನಾಯಕ ಮಿಥುನ್‌ ರೈ ವಿರುದ್ಧ ರಕ್ಷಿತ್‌ ಶೆಟ್ಟಿ ಕಿಡಿ!

ರಕ್ಷಿತ್ ಶೆಟ್ಟಿ ತಿರುಗೇಟು 

1. 'ಉಡುಪಿ ನನ್ನ ಜನ್ಮಸ್ಥಳ... ಬಕೆಟ್ ಅಲ್ಲಾ, ಟ್ಯಾಂಕರ್ ಹಿಡಿತೀನಿ... 
2. ಅವರು ಯಾವ ಭೂಮಿಯ ಬಗ್ಗೆ ಮಾತನಾಡುತ್ತಿದ್ದಾರೆಂದು ಖಚಿತವಾಗಿಲ್ಲ ಆದರೆ ಕಾರ್ ಸ್ಟ್ರೀಟ್‌ನಲ್ಲಿರುವ ಜಮೀನು ಖಂಡಿತವಾಗಿಯೂ ಅಲ್ಲ... 
3. ಅನಂತೇಶ್ವರ ದೇವಸ್ಥಾನವು ಕೃಷ್ಣ ಮಠಕ್ಕಿಂತಲೂ ಹಳೆಯದು. ಚಂದ್ರಮೌಳೀಶ್ವರ ದೇವಸ್ಥಾನ ಇನ್ನೂ ಹಳೆಯದು...

'ಇನ್ನೂ ನನಗೆ ಕಲ್ಪನೆ ಇಲ್ಲದ ವಿಷಯದ ಬಗ್ಗೆ ನಾನು ಎಂದಿಗೂ ಕಾಮೆಂಟ್ ಮಾಡುವುದಿಲ್ಲ. ಇದು ನನ್ನ ಆಸಕ್ತಿಯ ಕ್ಷೇತ್ರವಾಗಿದೆ ಮತ್ತು ನಾನು ಏನು ಮಾತನಾಡುತ್ತಿದ್ದೇನೆಂದು ನನಗೆ ತಿಳಿದಿದೆ' ಎಂದು ರಕ್ಷಿತ್ ಶೆಟ್ಟಿ ಸರಿಯಾಗಿ ತಿರುಗೇಟು ನೀಡಿದ್ದಾರೆ.

ಕೃಷ್ಣಮಠಕ್ಕೆ ಭೂಮಿ ಕೊಟ್ಟವರು ಮುಸ್ಲಿಂ ಅರಸರು, ಮಿಥುನ್ ರೈ ಹೇಳಿಕೆಗೆ ಸಿಡಿದೆದ್ದ ಕರಾವಳಿ

ಮಿಥುನ್ ರೈ ಹೇಳಿದ್ದೇನು?

ಇತ್ತೀಚೆಗೆ ಮೂಡಬಿದಿರೆ ತಾಲೂಕಿನ ಪುತ್ತಿಗೆಯಲ್ಲಿ ನೂರಾನಿ ಮಸೀದಿ ವತಿಯಿಂದ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಎನ್ನುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಿಥುನ್‌ ರೈ, ಪ್ರಸ್ತುತ ಉಡುಪಿಯಲ್ಲಿರುವ ಕೃಷ್ಣಮಠಕ್ಕೆ ಭೂಮಿಯನ್ನು ದಾನ ಮಾಡಿದ್ದು ಮುಸ್ಲಿಂ ಅರಸರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಅವರ ಮಾತಿಗೆ ಕರಾವಳಿ ಭಾಗದಲ್ಲಿ ಹಾಗೂ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದ್ದು ರಕ್ಷಿತ್ ಶೆಟ್ಟಿ ಕಿಡಿ ಕಾರಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದೈವದ ಮಾತು ನಿಜವಾಯ್ತು, ಹರಕೆ ತೀರಿಸಲು ದಂಪತಿ ಸಮೇತ ಬಂದ ರಿಷಬ್ ಶೆಟ್ಟಿ
ಯಶ್- ರಾಧಿಕಾ ಪುತ್ರಿಗೆ 7 ವರ್ಷಗಳ ಸಂಭ್ರಮ: ಹುಟ್ಟುಹಬ್ಬದ ಕ್ಯೂಟ್​ ಫೋಟೋಗಳು ಇಲ್ಲಿವೆ