
1997ರಲ್ಲಿ ತೆರೆಕಂಡ ದಿನೇಶ್ ಬಾಬು (Dinesh Baboo) ನಿರ್ದೇಶನದ ನಟ ರಮೇಶ್ ಅರವಿಂದ್ (Ramesh Aravind) ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ 'ಅಮೃತವರ್ಷಿಣಿ' (Amruthavarshini) ಸಿನಿಮಾ ಬಿಡುಗಡೆಯಾಗಿ 25 ವರ್ಷ ಕಳೆದಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಅರವಿಂದ್ ಅವರು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಂತಸವನ್ನು ಹಂಚಿಕೊಂಡಿದ್ದಾರೆ. ಸುಹಾಸಿನಿ (Suhasini), ಶರತ್ ಬಾಬು, ನಿವೇದಿತಾ ಜೈನ್ ಅಭಿನಯಿಸಿದ್ದ ಈ ಚಿತ್ರ ಮ್ಯೂಸಿಕಲ್ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. 'ತುಂತುರು', 'ಭಲೇ ಭಲೇ ಚಂದದ ಚೆಂದುಳ್ಳಿ ಹೆಣ್ಣು ನೀನು', 'ಈ ಸುಂದರ ಬೆಳದಿಂದಳ' ಈ ಹಾಡುಗಳು ಈಗಲೂ ಬೆಂಬಿಡದೇ ಕಾಡುವಂತಹ ಹಾಡುಗಳಿವು. ಇವತ್ತಿಗೂ ಈ ಚಿತ್ರದ ಹಾಡುಗಳು ಅನೇಕರಿಗೆ ಫೇವರಿಟ್ ಆಗಿ ಉಳಿದಿದೆ.
'ಅಮೃತ ವರ್ಷಿಣಿ' ಚಿತ್ರಕ್ಕೆ 25 ವರ್ಷ ತುಂಬಿರುವ ಸಂತಸದಲ್ಲಿ ರಮೇಶ್ ಅರವಿಂದ್, 'ಅಮೃತವರ್ಷಿಣಿಗೆ ಇಂದು 25 ವರ್ಷ! ಜಯಶ್ರೀ ದೇವಿ, ದಿನೇಶ್ ಬಾಬು, ಸುಹಾಸಿನಿ, ಶರತ್ ಬಾಬು, ನಿವೇದಿತಾ, ದೇವಾ, ಕಲ್ಯಾಣ್, ಚಿತ್ರಾ ಮತ್ತು ನಮ್ಮ ಪ್ರೀತಿಯ ಎಸ್‌ಪಿಬಿ ಸರ್ ಅವರಿಗೆ ನಾನು ಋಣಿ. ಇಷ್ಟು ವರ್ಷ ನನ್ನ ಮೇಲೆ ಪ್ರೀತಿ ತೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳು' ಎಂದು ಹೇಳಿ ಬ್ಲ್ಯಾಕ್ ಅಂಡ್ ವೈಟ್ ಫೋಟೋ ಮೂಲಕ ತಮ್ಮ ಸಂತೋಷವನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿದ್ದಾರೆ. 1997ರಲ್ಲಿ ಬಿಡುಗಡೆಯಾದ 'ಅಮೃತವರ್ಷಿಣಿ' ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
Ramesh Aravind: ಹೊಸ ವರ್ಷಕ್ಕೆ ರಮೇಶ್ ಅರವಿಂದ್ ಸ್ಫೂರ್ತಿ ಮಾತುಕತೆ
ದಿನೇಶ್ ಬಾಬು ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದರು. ಭಾರತಿ ದೇವಿ ಅವರ ಚಿನ್ನಿ ಚಿತ್ರ ಬ್ಯಾನರ್ ಅಡಿ ಚಿತ್ರ ನಿರ್ಮಾಣವಾಗಿತ್ತು. ಚಿತ್ರಕ್ಕೆ ದೇವಾ ಅವರು ಹಿನ್ನೆಲೆ ಸಂಗೀತ ಸಂಯೋಜಿಸಿದ್ದು, ದಿನೇಶ್ ಬಾಬು ಛಾಯಾಗ್ರಹಣವಿತ್ತು. 'ಅಮೃತವರ್ಷಿಣಿ' ಚಿತ್ರದಲ್ಲಿ ರಮೇಶ್ ಅರವಿಂದ್ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದು, ಈ ಪಾತ್ರ ಅವರಿಗೆ ಹೆಚ್ಚು ಖ್ಯಾತಿಯನ್ನು ತಂದುಕೊಟ್ಟಿತ್ತು. ಈ ಚಿತ್ರವು ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. 'ಅಮೃತ ವರ್ಷಿಣಿ' ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತ್ತು.
ಇನ್ನು ರಮೇಶ್ ಅರವಿಂದ್ 'ಶಿವಾಜಿ ಸುರತ್ಕಲ್ 2' (Shivaji Surathkal 2) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕಾಶ್ ಶ್ರಿವತ್ಸ (Akash Srivatsa) ಅವರು ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. 'ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ' (The Mysterious Case of Mayavi) ಎಂಬ ಟ್ಯಾಗ್ಲೈನ್ ಇದೆ. ಹಲವು ಗೆಟಪ್ಗಳಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಳ್ಳಲಿದ್ದಾರೆ. ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರವನ್ನು ಮೇಘನಾ ಗಾಂವ್ಕರ್ (Meghana Gaonkar) ನಿಭಾಯಿಸಲಿದ್ದು, ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಡಿಸಿಪಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ.
'100' ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ
'ಮಗಳು ಜಾನಕಿ' ಧಾರಾವಾಹಿ ನಟ ರಾಕೇಶ್ ಮಯ್ಯ (Rakesh Mayya) ಟ್ರೇನಿಂಗ್ ಮುಗಿಸಿ ಕೆಲಸಕ್ಕೆ ಸೇರಿರುವ ಪೋಲೀಸ್ ಇನ್‌ಸ್ಪೆಕ್ಟರ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್‌ಗಳಿದ್ದು ಚಿತ್ರದುದ್ದಕ್ಕೂ ಪ್ರಾಮುಖ್ಯತೆ ವಹಿಸುವ ಪಾತ್ರವಾಗಿದೆ. ಮಾತ್ರವಲ್ಲದೇ ರಫ್ ಅ್ಯಂಡ್ ಟಫ್ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ವಿನಾಯಕ ಜೋಷಿ (Vinayak Joshi) ಅವರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ನಕುಲ್ ಭಯಂಕರ್ (Nakul Bhayankar) ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ರಾಧಿಕಾ ನಾರಾಯಣ್ (Radhika Narayan), ಎಂ ನಾಸರ್ (Nasser M), ರಾಘು ರಾಮನಕೊಪ್ಪ, ವಿದ್ಯಾಮೂರ್ತಿ ಸೇರಿದಂತೆ ಮುಂತಾದವರ ತಾರಾಬಳಗ ಚಿತ್ರಕ್ಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.