
ಬೆಂಗಳೂರು (ಜು.28) ನಟಿ ರಮ್ಯಾ ಹಾಗೂ ದರ್ಶನ್ ಅಭಿಮಾನಿಗಳ ಕಮೆಂಟ್ ಪ್ರಕರಣ ತಾರಕಕ್ಕೇರಿದೆ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಎಂಟ್ರಿಕೊಡುತ್ತದ್ದಂತೆ ಇದೀಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೀಗ ಮಹಿಳೆಯರ ಪರ ಧ್ವನಿ ಎತ್ತಿದ ನಟಿ ರಮ್ಯಾ ಇಂದು ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದರ್ಶನ್ ಅಭಿಮಾನಿಗಳ ವಿರುದ್ದ ದೂರು ನೀಡಿದ್ದಾರೆ. ನಟಿ ರಮ್ಯಾ ನೀಡಿದ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಮೋದ್ ಗೌಡ ಸೇರಿದಂತೆ 43 ಸೋಶಿಯಲ್ ಮೀಡಿಯಾ ಅಕೌಂಟ್ ವಿರುದ್ದ ಪ್ರಕರಣ ದಾಖಲಾಗಿದೆ.
ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ
ಕೇಂದ್ರ ವಿಭಾಗದ ಸೆನ್(ಸೈಬರ್ ಕ್ರೈಂ)ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಟಿ ಆಕ್ಟ್ ಹಾಗೂ ಬಿಎನ್ಎಸ್ 351(2), 351(3), 352, 75(1), 75(1)(IV) ,79 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಖಾತೆಗಳು ಮಾಡಿರುವ ಕಮೆಂಟ್ ಕುರಿತು ನಟಿ ರಮ್ಯಾ ನೀಡಿದ ಮಾಹಿತಿಯನ್ನು ಪರಿಶೀಲನೆ ನಡೆಸಿದ್ದಾರೆ.
ನನಗೆ ಈ ರೀತಿ ಕಮೆಂಟ್ ಮಾಡಿದರೆ ಬೇರೆಯವರ ಕತೆ ಏನು?
ನನಗೆ ಈ ರೀತಿ ಕಾಮೆಂಟ್ ಮಾಡುತ್ತಾರೆ ಎಂದರೆ ಬೇರೆಯವರ ಕತೆ ಏನು ಎಂದು ನಟಿ ರಮ್ಯಾ ಪ್ರಶ್ನಿಸಿದ್ದಾರೆ.ದೂರು ನೀಡಿದ ಬಳಿಕ ಮಾತನಾಡಿರ ರಮ್ಯಾ, ಈ ರೀತಿ ಕೆಟ್ಟ ಕಾಮೆಂಟ್ ಮಾಡುವವರಿಗೆ ತಕ್ಕ ಶಾಸ್ತಿಯಾಗಬೇಕು. ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಕಿರುಕುಳ, ದೌರ್ಜನ್ಯ ನಿಲ್ಲಬೇಕು ಎಂದು ನಟಿ ರಮ್ಯಾ ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವನ್ನು ನಾನು ಹಂಚಿಕೊಂಡಿದ್ದೆ. ಆದರೆ ಈ ಪೋಸ್ಟ್‌ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಅತ್ಯಂತ ಕೆಟ್ಟ ಪದಗಳು, ಫೋಟೋಗಳನ್ನು ಬಳಸಿಕೊಂಡು ಕಾಮೆಂಟ್ ಮಾಡಿದ್ದಾರೆ. ಈ ರೀತಿ ಯಾರಿಗೂ ಆಗಬಾರದು. ಹೀಗಾಗಿ ಹೆಣ್ಣುಮಕ್ಕಳ ಪರವಾಗಿ ದೂರು ನೀಡಿದ್ದೇನೆ ಎಂದು ರಮ್ಯಾ ಹೇಳಿದ್ದಾರೆ. ಹಲವು ಹೆಣ್ಣುಮಕ್ಕಳು ನನಗೆ ಬೆಂಬಲ ನೀಡಿದ್ದರೆ. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಅಂತ್ಯವಾಗಬೇಕು ಅನ್ನೋದು ನನ್ನ ಉದ್ದೇಶ. ಬೆದರಿಕೆಗಳು ಬರುತ್ತಿದೆ. ಇಂಡಸ್ಟ್ರಿಯ ಜನ ಧೈರ್ಯವಾಗಿ ಮುಂದೆ ಬರಬೇಕು ಎಂದು ನಟಿ ರಮ್ಯಾ ಕರೆ ನೀಡಿದ್ದಾರೆ.
ರೇಣುಕಾಸ್ವಾಮಿ ಬದಲು ನಿಮ್ಮನ್ನು ಹತ್ಯೆ ಮಾಡಬೇಕಿತ್ತು ಎಂದು ಕಾಮೆಂಟ್ ಮಾಡುತ್ತಿದ್ದಾರೆ. ನನ್ನ ಬಳಿ ದರ್ಶನ್ ನಂಬರ್ ಇಲ್ಲ, ಸಂಪರ್ಕವೂ ಇಲ್ಲ. ಎದುರಿಗೆ ಸಿಕ್ಕಾಗ ಮಾತಾನಾಡಿದ್ದೇನೆ. ನಟ ದರ್ಶನ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಸಂದೇಶ ನೀಡಬಹುದಿತ್ತು. ದರ್ಶನ್ ಸುಮ್ಮನಿರುವುದು ತಪ್ಪು. ಇದರಿಂದ ದರ್ಶನ್ ಅಭಿಮಾನಿಗಳು ಮತ್ತಷ್ಟು ಕಾಮೆಂಟ್ ಮಾಡುತ್ತಿದ್ದಾರೆ. ಯುವಜನತೆ ಹೀಗೆ ದಾರಿ ತಪ್ಪುತ್ತಿರುವುದು ಬೇಸರದ ವಿಚಾರ ಎಂದು ರಮ್ಯಾ ಹೇಳಿದ್ದಾರೆ. ಇದೇ ವೇಳೆ ನಟಿ ರಕ್ಷಿತಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನನ್ನ ಬಗ್ಗೆ ಮಾತನಾಡಿರುವುದು ತಿಳಿದಿಲ್ಲ. ಅವರೇನು ಮಾತನಾಡಿದ್ದಾರೆ ಅನ್ನೋದು ಗೊತ್ತಿಲ್ಲ ಎಂದು ರಮ್ಯಾ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.