
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್ ಪರ ಕೆಲವು ಸಿನಿಮಾ ಸೆಲೆಬ್ರಿಟಿಗಳು ಪ್ರಚಾರ ಮಾಡಿದ್ದರು. ಅವರಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಕೂಡ ಒಬ್ಬರು. ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರಿದ ಬಳಿಕ ಶಿವಣ್ಣ ಕೂಡ ಪ್ರಚಾರದಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್ ಅಭೂತಪೂರ್ವ ಗೆಲುವು ದಾಖಲಿಸಿ ಅಧಿಕಾರದ ಗದ್ದುಗೆ ಏರಿದ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಟ್‌ನಲ್ಲಿರುವ ಶಿವರಾಜ್ ಕುಮಾರ್ ಅವವರ ನಿವಾಸಕ್ಕೆ ಭೇಟಿ ನೀಡಿದ ಣದೀಪ್ ಸುರ್ಜೇವಾಲ ಕೆಲವು ಸಮಯ ಮಾತುಕತೆ ನಡೆಸಿದ್ದಾರೆ. ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಜೊತೆ ಸುರ್ಜೇವಾಲ ಮಾತುಕತೆ ನಡೆಸುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂದಹಾಗೆ ಸ್ವತಃ ಸುರ್ಜೇವಾಲ ಅವರೇ ಫೋಟೋಗಳನ್ನು ಹಂಚಿಕೊಂಡು ಸಂತಷ ವ್ಯಕ್ತಪಡಿಸಿದ್ದಾರೆ.
'ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರನ್ನು ಅವರ ನಿವಾಸದಲ್ಲೇ ಭೇಟಿ ಮಾಡಿದ್ದು ತುಂಬಾ ಸಂತೋಷ ಮತ್ತು ಗೌರವವಾಗಿದೆ. ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಅತ್ಯಂತ ಜನಪ್ರಿಯ ಕಲಾವಿದ ಮತ್ತು ಅದ್ಭುತ ವ್ಯಕ್ತಿಗೆ ಧನ್ಯವಾದಗಳು' ಎಂದು ಹೇಳಿದ್ದಾರೆ.
'ತಮ್ಮ ವಿಶಿಷ್ಟ ಪರಂಪರೆಯೊಂದಿಗೆ ಗೀತಾ ಶಿವರಾಜಕುಮಾರ್ ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಪ್ರತಿಜ್ಞೆಯ ಮೇಲೆ ಒಟ್ಟಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನಾನು ರಾಹುಲ್ ಗಾಂಧಿ ಫ್ಯಾನ್ ಎಂದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ !
ಈ ಬಾರಿಯ ಚುನಾವಣೆಯಲ್ಲಿ ಶಿವರಾಜ್ಕುಮಾರ್ ಕಾಂಗ್ರೆಸ್‌ನ ಕೆಲವು ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ಸೊರಬದ ಮಧು ಬಂಗಾರಪ್ಪ, ಶಿರಸಿಯ ಭೀಮಣ್ಣ ನಾಯ್ಕ್, ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಇನ್ನು ಕೆಲವರ ಪರ ಮತಯಾಚನೆ ಮಾಡಿದ್ದರು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ರಣದೀಪ್ ಅವರು ಶಿವರಾಜ್ಕುಮಾರ್ ಮನೆಗೆ ಭೇಟಿ ನೀಡಿ ಧನ್ಯವಾದ ತಿಳಿಸಿದ್ದಾರೆ.
Karnataka Election Results 2023: ಶಿವರಾಜ್ ಕುಮಾರ್ ಪ್ರಚಾರ ಮಾಡಿದವರಲ್ಲಿ ಗೆದ್ದವರು ಯಾರು, ಸೋತವರ್ಯಾರು?
ಶಿವರಾಜ್ಕುಮಾರ್ ಪ್ರಚಾರದ ಕಾರಣ ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಕಿದ್ದರು. ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಿನಿಮಾ ಕೆಲಸಕ್ಕೆ ಮರಳಿದ್ದು ‘ಘೋಸ್ಟ್’, ‘ಜೈಲರ್’, ‘ಕ್ಯಾಪ್ಟನ್ ಮಿಲ್ಲರ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಹ್ಯಾಟ್ರಿಕ್ ಹೀರೋ ಬ್ಯುಸಿಯಾಗಿದ್ದಾರೆ. ಮುಂದಿನ ಸಿನಿಮಾ ಯಾವುದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.