Rani Channamma University: ನಟ ರಮೇಶ್‌ ಸೇರಿ ಮೂವರಿಗೆ ಚನ್ನಮ್ಮ ವಿವಿ ಗೌರವ ಡಾಕ್ಟರೇಟ್‌

By Kannadaprabha News  |  First Published Sep 13, 2022, 10:51 AM IST

ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಆರ್‌ಸಿಯು ರಾಜ್ಯದಲ್ಲೇ ದೊಡ್ಡ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 


ಬೆಳಗಾವಿ(ಸೆ.13):  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೆ. 14ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಪಾಲ ಥಾವರಚಂದ ಗೆಹ್ಲೋತ್‌ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಉಪಸ್ಥಿತರಿರುವರು. ಆಂಧ್ರಪ್ರದೇಶ ವಿಜಯನಗರಂ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಪ್ರೊ. ಟಿ.ವಿ. ಕಟ್ಟಿಮನಿ ಘಟಿಕೋತ್ಸವ ಭಾಷಣ ಮಾಡುವರು.

ಈ ಘಟಿಕೋತ್ಸವದಲ್ಲಿ ಒಟ್ಟು 43607 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಇದರಲ್ಲಿ 11 ಸುವರ್ಣ ಪದಕಗಳು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. 48 ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಆರ್‌ಸಿಯು ರಾಜ್ಯದಲ್ಲೇ ದೊಡ್ಡ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ ಹೊತ್ತಿದೆ. 418 ಮಹಾವಿದ್ಯಾಲಯಗಳು ವಿಶ್ವವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿವೆ. ಸುಮಾರು 1.64 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂದರು.

Tap to resize

Latest Videos

Ravichandran: ಕ್ರೇಜಿಸ್ಟಾರ್‌ ರವಿಚಂದ್ರನ್‌ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ವಿಜಯಪುರ ಮತ್ತು ಜಮಖಂಡಿಯಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಗಳನ್ನು ವಿಶ್ವವಿದ್ಯಾಲಯ ಹೊಂದಿವೆ. 48 ಕಾಲೇಜುಗಳಲ್ಲಿ ಸ್ನಾತಕೋತ್ತರ ಕೇಂದ್ರಗಳಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. 22 ವಿಷಯಗಳಲ್ಲಿ ಸ್ನಾತಕೋತ್ತರ ಕೋರ್ಸನಲ್ಲಿ 2500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಅಧ್ಯಯನ ನಡೆಸುತ್ತಿದ್ದಾರೆ. 4 ವಿಷಯಗಳಲಲ್ಲಿ ಪಿಜಿ ಡಿಪ್ಲೋಮಾ ಕೋರ್ಸ್‌ಗಳು ನಡೆಯುತ್ತಿವೆ. 530 ಸಂಶೋಧನಾ ವಿದ್ಯಾರ್ಥಿಗಳು ಹಲವಾರು ವಿಷಯಗಳಲ್ಲಿ ಪಿಎಚ್‌ಡಿ ಸಂಶೋಧನೆಯಲ್ಲಿ ನಿರತರಾಗಿದ್ದಾರೆ ಎಂದರು.

ವಿಶ್ವವಿದ್ಯಾಲಯವು ಬಿ ಪ್ಲಸ್‌ ಗ್ರೇಡ್‌ ನ್ಯಾಕ್‌ ಮನ್ನಣೆ ಪಡೆದಿದೆ. ಶೈಕ್ಷಣಿಕವಾಗಿ, ಆಡಳಿತಾತ್ಮಕವಾಗಿ, ಭೌತಿಕವಾಗಿ, ಬೌದ್ಧಿಕವಾಗಿ ಬೆಳೆಯುತ್ತಿದೆ. ಇ ಆಡಳಿತ ವ್ಯವಸ್ಥೆ ಜಾರಿಯಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಕಳೆದ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಅನುಷ್ಠಾನಗೊಳಿಸಲಾಗಿದೆ. ಸುಗಮವಾಗಿ ಹೊಸ ಶೈಕ್ಷಣಿಕ ಉಪಕ್ರಮಗಳು ನಡೆದಿವೆ ಎಂದರು.

ಭೂತರಾಮನಹಟ್ಟಿಯ ಬಳಿ ಇರುವ 169.02 ಎಕರೆ ಜಮೀನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಸ್ತಾಂತರವಾಗದೇ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಬಳಿ 126 ಎಕರೆ 27 ಗುಂಟೆ ಜಮೀನನ್ನು ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈಗಾಗಲೇ ಭೂಮಿ ಪೂಜೆ ಮತ್ತು ಕಂಪೌಂಡ್‌ ಗೋಡೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಳೆ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಆರ್‌ಸಿಯು ಹಣಕಾಸು ಅಧಿಕಾರಿ ಪ್ರೊ. ಡಿ.ಎನ್‌. ಪಾಟೀಲ, ಕುಲಸಚಿವರಾದ ಪ್ರೊ. ಶಿವಾನಂದ ಎಸ್‌. ಗೊರನಾಳೆ, ಪ್ರೊ. ಎಂ. ಹನುಮಂತಪ್ಪ, ಪ್ರೊ. ಗಂಗಾಧರಯ್ಯ ಉಪಸ್ಥಿತರಿದ್ದರು.

Honorary Doctorate to Murugesh Nirani: ಸಚಿವ ನಿರಾ​ಣಿಗೆ ಗೌರವ ಡಾಕ್ಟರೇಟ್‌ ಪ್ರದಾನ

ನಟ ರಮೇಶ್‌ ಸೇರಿ ಮೂವರಿಗೆ ಚನ್ನಮ್ಮ ವಿವಿ ಗೌರವ ಡಾಕ್ಟರೇಟ್‌

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಖ್ಯಾತ ಕನ್ನಡ ಚಿತ್ರ ನಟ, ನಿರ್ದೇಶಕ, ನಿರ್ಮಾಪಕ ರಮೇಶ್‌ ಅರವಿಂದ್‌ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ ನೀಡಲು ತೀರ್ಮಾನಿಸಿದೆ. ಸೆ.14ರಂದು ಸುವರ್ಣ ವಿಧಾನಸೌಧದಲ್ಲಿ ನಡೆಯುವ ಆರ್‌ಸಿಯು 10ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ ತಿಳಿಸಿದರು. 

ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕ ವಿ.ರವಿಚಂದರ್‌, ಬೀದರ್‌ನ ಬಸವತತ್ವ ಪ್ರಚಾರಕಿ ಮಾತೆ ಅನ್ನಪೂರ್ಣ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು ಎಂದರು. ಗೌರವ ಡಾಕ್ಟರೇಟ್‌ಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸಾಧಕರ ಪರವಾಗಿ ಬೇರೆಯವರೂ ಶಿಫಾರಸು ಅರ್ಜಿ ಸಲ್ಲಿಸಬಹುದಾಗಿತ್ತು. ಈ ಬಾರಿ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾದವರೆಲ್ಲರೂ ಅವರಾಗಿ ಅರ್ಜಿ ಹಾಕಿಲ್ಲ, ಇವರ ಪರ ಶಿಫಾರಸು ಅರ್ಜಿ ಸಲ್ಲಿಸಲಾಗಿತ್ತು ಎಂದರು.
 

click me!