'ಕಬ್ಜ' ತಂಡದಿಂದ ಸಿಕ್ತು ಭರ್ಜರಿ ಸುದ್ದಿ; ವಿಶೇಷ ದಿನದಂದು ರಿಲೀಸ್ ಆಗ್ತಿದೆ ರಿಯಲ್ ಸ್ಟಾರ್ ಸಿನಿಮಾ

By Shruthi Krishna  |  First Published Jan 24, 2023, 2:27 PM IST

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷೆಯ ಕಬ್ಜ ಸಿನಿಮಾ ಮಾರ್ಚ್ 17ಕ್ಕೆ ರಿಲೀಸ್ ಆಗುತ್ತಿದೆ. 


ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹು ನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಭಾರತದ ನಿರೀಕ್ಷೆಯ ಸಿನಿಮಾಗಳಲ್ಲಿ ಲಿಸ್ಟ್ ನಲ್ಲಿರುವ ಕಬ್ಜ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಕಬ್ಜ ಸಿನಿಮಾ ಪ್ರಪಂಚದಾದ್ಯಂತ ತೆರೆಗೆ ಬರುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ. ಇತ್ತೀಚಿಗಷ್ಟೆ ಸಿನಿಮಾತಂಡ ಬಿಗ್ ಅಪ್ ಡೇಟ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ಏನಿರಬಹುದು ಎಂದು ಅಭಿಮಾನಿಗಳ ಕುತೂಹಲ ಹೆಚ್ಚಾಗಿತ್ತು. ಇದೀಗ ಸಿನಿಮಾತಂಡ ಅಪ್‌ಡೇಟ್ ನೀಡುವ ಮೂಲಕ ಕುತೂಹಲಕ್ಕೆ  ತೆರೆಎಳೆಯಲಾಗಿದೆ. 

 ಬಹುನಿರೀಕ್ಷೆ ಕಬ್ಜ ಸಿನಿಮಾದ ರಿಲೀಸ್ ಡೇಟ್ ಬಹಿರಂಗ ಪಡಿಸಿಸಿದೆ ಸಿನಿಮಾತಂಡ. ಈ ಸಿನಿಮಾ ಮಾರ್ಚ್ 17ಕ್ಕೆ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಕೂಡ ಇದೆ. ಅದೇ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತರುವುದು ಅಭಿಮಾನಿಗಳ ಖುಷಿ ಡಬಲ್ ಆಗಿದೆ. ಇನ್ನೂ ವಿಶೇಷ ಎಂದರೆ ಅದೇ ಸಮಯಕ್ಕೆ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ.

Tap to resize

Latest Videos

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಈ ಚಿತ್ರಕ್ಕೆ  ಆರ್ ಚಂದ್ರು ಆಕ್ಷನ್ ಕಟ್ ಹೇಳಿದ್ದಾರೆ.  ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. 'ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಕಬ್ಬ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ' ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಬಹಿರಂಗ ಪಡಿಸಿದೆ. 

ಉಪೇಂದ್ರ 'ಕಬ್ಜ' ಚಿತ್ರದಿಂದ ಬರ್ತಿದೆ ಬಿಗ್ ಅಪ್‌ಡೇಟ್; ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ಸು ಕಂಡಿತ್ತು.  ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ ಕಬ್ಜ ಆಗಿದೆ.

Here's the much awaited Release date of the next big thing in the Indian Cinema. hitting the silver screen From March 17th, 2023. @shriya_saran1109 @anandpanditmotionpictures @kabzaamovieofficial pic.twitter.com/CWXrhwAjnD

— Upendra (@nimmaupendra)

ಐಎಂಡಿಬಿ ಪಟ್ಟಿಯಲ್ಲಿ ಸ್ಥಾನ ಪಡೆದ 'ಕಬ್ಜ': ಕನ್ನಡಿಗರು ಸಿಟ್ಟಾಗಿದ್ದು ಯಾಕೆ?

ಈಗಾಗಲೇ ಫಸ್ಟ್ ಲುಕ್, ಟೀಸರ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕಬ್ಜ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಈ ಸಿನಿಮಾವನ್ನು ತೆರೆಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. 

click me!