ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಶೂಗಳು ವಿಜಯಲಕ್ಷ್ಮೀ ಮನೆಯಲ್ಲಿ ಸಿಕ್ಕ ಹಿನ್ನೆಲೆಯಲ್ಲಿ ಅವರಿಗೂ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದ್ದಾರೆ.
ಬೆಂಗಳೂರು (ಜೂ.19): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳು ಕಳೆದಿವೆ. ಆದರೆ, ಆತನ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಶೂ ಸಿಕ್ಕಿದ್ದರಿಂದ ಪೊಲೀಸರು ಅವರಿಗೂ ನೋಟೀಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬುಧವಾರ ಹಾಜರಾಗಿದ್ದಾರೆ.
ವಿಜಯಲಕ್ಷ್ಮೀ ನೋಟಿಸ್ ನೀಡಿದ್ದ ಪೊಲೀಸರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಜಯಲಕ್ಷ್ಮಿ ಮನೆಯಲ್ಲಿ ಕೊಲೆ ಆರೋಪಿ ದರ್ಶನ್ ಅವರ ಶೂ ಪತ್ತೆಯಾದ ಬಗ್ಗೆ ಮಾಹಿತಿ ಪಡೆಯಲು ನೋಟಿಸ್ ನಿಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರ ನೋಟಿಸ್ ಹಿನ್ನೆಲೆ, ವಿಜಯಲಕ್ಷ್ಮಿ ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿ ಮುಂದೆ ಪ್ರಕರಣದ ಬಗ್ಗೆ ಹಾಗೂ ಶೂಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಸಲುಗೆ ಚಾಟ್ ಮಾಡಿ ರೇಣುಕಾಸ್ವಾಮಿಗೆ ಪವಿತ್ರಾಗೌಡ ಗಾಳ: ಏನಿದು ರೋಚಕ ಕತೆ...
ವಿಜಯಲಕ್ಷ್ಮಿಯನ್ನು ವಿಚಾರಣೆ ನಡೆಸಿದ ಪೊಲೀಸರು: ಇನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆಗಮಿಸಿದ ಬೆನ್ನಲ್ಲಿಯೇ ಎಚ್ಚೆತ್ತ ಪೊಲೀಸರು ಒಂದಿಷ್ಟು ವಿಚಾರಣೆಯನ್ನೂ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ನಂತರ ನಟ ದರ್ಶನ್ ಧರಿಸಿದ್ದ ಶೂಗಳನ್ನು ವಿಜಯಲಕ್ಷ್ಮೀ ಅವರ ಮನೆಯಲ್ಲಿ ಬಿಡಲಾಗಿತ್ತು. ಈ ಶೂಗಳನ್ನು ಪೊಲೀಸರು ಸ್ಥಳ ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಶೂ ಸಿಕ್ಕಿರುವ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನೂ ವಿಚಾರಣೆ ಮಾಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಎಸ್‌ಎಸ್‌ಎಲ್‌ಸಿ ಬಾಲಕ
ದರ್ಶನ್ ಬಂಧನವಾಗಿ 9 ದಿನ: ನಟಿ ಪವಿತ್ರಾಗೌಡ ಅವರಿಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಾರೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಸಿ ಕೊಲೆಗೈದ ಆರೋಪದಲ್ಲಿ ನಟ ದರ್ಶನ್ ಜೂ.11ರಂದು ಮಂಗಳವಾರ ಬಂಧನವಾಗಿದ್ದಾರೆ. ಈ ಕೇಸಿಗೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಕೊಲೆ ಆರೋಪದಲ್ಲಿ ಜೂ.11ರಂದು ಮೈಸೂರಿನಲ್ಲಿ ಬಂಧನವಾದ ನಂತರ ಕೋರ್ಟ್ ಮುಂದೆ ಹಾಜರುಪಡಿಸಿದ್ದಾಗ 6 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂ.16ರಂದು ಕೋರ್ಟ್‌ಗೆ ಹಾಜರುಪಡಿಸಿದಾಗ ಪುನಃ 5 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಒಟ್ಟು 9 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ನಾಳೆ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಈ ವೇಳೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗಂಡನನ್ನು ನೋಡಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.