ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದಿಂದ ಎಚ್ಚರಿಕೆ ನೀಡಲಾಗಿದೆ. ಜಗತ್ತಿನಲ್ಲಿ ಶತ್ರುಗಳಿದ್ದು, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೈವವು ಹೇಳಿದೆ.
ಮಂಗಳೂರು (ಏ.07): 'ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.
ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದ ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿ, ಪಂಜುರ್ಲಿ ನೇಮಕ್ಕೆ ಬೇಡಿಕೊಂಡಿದ್ದಾರೆ. ಇದೇ ವೇಳೆ ಬೆಳಗಿನ ಜಾವದವರೆಗೂ ದೈವದ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ದೈವದಲ್ಲಿ ರಿಷಬ್ ಶೆಟ್ಟಿ ಕಷ್ಟವನ್ನು ಹೇಳಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ಕಷ್ಟವನ್ನು ಆಲಿಸಿದ ಪಂಜುರ್ಲಿ ದೈವದಿಂದ 'ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ' ಎಂದು ಶತ್ರುಗಳ ಕಾಟದ ಬಗ್ಗೆ ದೈವವು ಎಚ್ಚರಿಕೆ ನೀಡಿದೆ. ಮುಂದುವರೆದು, 'ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಮುಂದಿನ 5 ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ದೈವದಿಂದ ಅಭಯವನ್ನು ನಿಡಲಾಗಿದೆ. ಆಗ ರಿಷಬ್ ಶೆಟ್ಟಿ ದಂಪತಿ ವಾರಾಹಿ ಪಂಜುರ್ಲಿ ದೈವದ ಅಭಯದಿಂದ ಮನಸ್ಸಿಗೆ ಸ್ವಲ್ಪ ನೆಮ್ಮದಿ ತಂದುಕೊಂಡಿದ್ದಾರೆ. ನಟ ರಿಷಬ್ ಶೆಟ್ಟಿ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದಲೇ ದೈವದ ಉತ್ಸವಕ್ಕೆ ಹೋಗಿದ್ದರು.
ಇದನ್ನೂ ಓದಿ: ವಿಜಯಲಕ್ಷ್ಮಿ ದರ್ಶನ್ ಈಗ ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ, ಅಕ್ಕಪಕ್ಕದವರೇ ನಗುವ ಕಾಲವಿದು: ಕಾರುಣ್ಯ ರಾಮ್