5 ರಿಂದ 50 ಕೋಟಿ ರೂಪಾಯಿ; ಕಾಂತಾರ ಪಾರ್ಟ್‌-2ಗೆ ರಿಷಬ್ ಶೆಟ್ಟಿ ಸಂಭಾವನೆ ಕೇಳಿದ್ರೆ ಅಚ್ಚರಿ ಪಡ್ತೀರಾ!

Published : Mar 24, 2023, 10:46 AM ISTUpdated : Mar 25, 2023, 01:38 PM IST
5 ರಿಂದ 50 ಕೋಟಿ ರೂಪಾಯಿ; ಕಾಂತಾರ ಪಾರ್ಟ್‌-2ಗೆ ರಿಷಬ್ ಶೆಟ್ಟಿ ಸಂಭಾವನೆ ಕೇಳಿದ್ರೆ ಅಚ್ಚರಿ ಪಡ್ತೀರಾ!

ಸಾರಾಂಶ

ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಪಾರ್ಟ್-2ಗೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

ಸ್ಯಾಂಡಲ್ ವುಡ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ಕಾಂತಾರ-2 ನಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸೂಪರ್ ಸಕ್ಸಸ್  ಬಳಿಕ ರಿಷಬ್ ಶೆಟ್ಟಿ ಪಾರ್ಟ್-2ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗಷ್ಟೆ ಅಂದರೆ ಯುಗಾದಿ ಹಬ್ಬಕ್ಕೆ ಕಾಂತಾರ ಬರವಣಿಗೆ ಪ್ರಾರಂಭಿಸುತ್ತಿರುವುದಾಗಿ ಹೇಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು ರಿಷಬ್. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡ ಬಳಿಕ ಪಾರ್ಟ್-2 ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಮೊದಲ ಭಾಗ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಮಾಯಿ ಮಾಡಿತ್ತು. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಕೋಟಿ ಕೋಟಿ ಕಮಾಯಿ ಮಾಡಿದ್ದ ಕಾಂತಾರ ಇದೀಗ ಪಾರ್ಟ್-2 ಮೂಲಕ ಮೋಡಿ ಮಾಡಲು ಸಜ್ಜಾಗುತ್ತಿದೆ. 

ಕಾಂತಾರ ಪಾರ್ಟ್ 2 ಅನೌನ್ಸ್ ಆಗುತ್ತಿದ್ದಂತೆ ಸಂಭಾವನೆ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಹಜವಾಗಿಯೇ ಪಾರ್ಟ್-2ಗೆ ಸಂಭಾವನೆ ಜಾಸ್ತಿ ಆಗಲಿದೆ. ಅದರಂತೆ ರಿಷಬ್ ಶೆಟ್ಟಿ ಪಡೆಯುತ್ತಿರುವ ಸಂಭಾವನೆ ಕೇಳಿದ್ರೆ ನಿಜಕ್ಕೂ ಅಚ್ಚರಿ ಪಡುತ್ತೀರಿ. ಹೌದು ಕಂತಾರ-2ಗೆ ರಿಷಬ್ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ರಿಷಬ್ ಶೆಟ್ಟಿ ಬರೊಬ್ಬರಿ 50 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. 

ಪಾರ್ಟ್-1ಕ್ಕೆ ರಿಷಬ್ ಸಂಭಾವನೆ ಕೇವಲ 5 ಕೋಟಿ ರೂಪಾಯಿ ಪಡೆದುಕೊಂಡಿದ್ದ ರಿಷಬ್ ಪಾರ್ಟ್-2ಗೆ 50 ಕೋಟಿಗೆ ಏರಿಸಿಕೊಂಡಿದ್ದಾರೆ. ಮೊದಲ ಭಾಗ 15 ಕೋಟಿ ರೂಪಾಯಿಯಲ್ಲಿ ತಯಾರಾದ ಸಿನಿಮಾ. ಬಾಕ್ಸ್ ಆಫೀಸ್ ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಸೂಪರ್ ಸಕ್ಸಸ್ ಬಳಿಕ ರಿಷಬ್‌ ಮತ್ತು ತಂಡಕ್ಕೆ ಹೊಂಬಾಳೆ ಸಂಸ್ಥೆ ಮತ್ತೊಮ್ಮೆ ಹಣ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಎಷ್ಟು ಎಂದು ರಿವೀಲ್ ಮಾಡಿಲ್ಲ. 



ಮುದ್ದಿನ ಮಗಳು ರಾಧ್ಯ ಹುಟ್ಟುಹಬ್ಬ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ ..!

ಇದೀಗ 2ನೇ ಭಾಗವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಲು ಸಿನಿಮಾತಂಡ ಸಿದ್ಧತೆ ನಡೆಸಿದೆ. ಸಂಭಾವನೆ ವಿಚಾರದಲ್ಲೇ ಕಾಂತಾರ-2 ಎಲ್ಲರ ಗಮನ ಸೆಳೆಯುತ್ತಿದೆ. ರಿಷಬ್ 50 ಕೋಟಿ ಪಡೆಯುತ್ತಿರುವುದು ಕೇವಲ ಹೀರೋ ಆಗಿ ಮಾತ್ರವಲ್ಲದೇ ನಿರ್ದೇಶನಕ್ಕೂ ಪಡೆಯುತ್ತಿದ್ದಾರೆ. ಆದರೆ ಈ ಬಗ್ಗೆ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಸ್ಯಾಂಡಲ್ ವುಡ್ ಹೀರೋ ಇಷ್ಟು ದೊಡ್ಡ ಮಟ್ಟದಲ್ಲಿ ಸಂಭಾವನೆ ಪಡೆಯುತ್ತಿರುವುದು ನಿಜಕ್ಕೂ ಖುಷಿಯ ವಿಚಾರವಾಗಿದೆ. 

Kantara; ಇಟಾಲಿಯನ್, ಸ್ಪ್ಯಾನಿಷ್ ಭಾಷೆಯಲ್ಲೂ ರಿಷಬ್ ಹವಾ; ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡ ಹೊಂಬಾಳೆ

ಪಾರ್ಟ್-2 ಸೆಟ್ಟೇರುವ ಮೊದಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಾಗಾಗಿ ಸಿನಿಮಾದ ಮೇಲೆ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಕಾಂತಾರ-2 ನಲ್ಲಿ ರಿಷಬ್ ಯಾವ ವಿಚಾರವನ್ನು ಹೇಳಲಿದ್ದಾರೆ, ಯಾರೆಲ್ಲ ಕಲಾವಿದರು ನಟಿಸುತ್ತಾರೆ ಎನ್ನುವುದು ಸದ್ಯದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.  

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ
‘ನೀನಾದೆ ನಾ’ ಹಾಡು 100 Million Views ದಾಟಿದ ಖುಷಿಯಲ್ಲಿ ‘ಯುವರತ್ನ’ ನಾಯಕಿ ಸಯ್ಯೇಷಾ ಸೈಗಲ್