ರಿಷಬ್ ಶೆಟ್ಟಿ 'ಕಾಂತಾರ 2' ಮುಹೂರ್ತಕ್ಕೆ ದಿನಾಂಕ ಫಿಕ್ಸ್: ಎಲ್ಲಿ, ಯಾವಾಗ? ಇಲ್ಲಿದೆ ಸಂಪೂರ್ಣ ವಿವರ

Published : Jun 14, 2023, 11:13 AM ISTUpdated : Jun 15, 2023, 12:33 PM IST
ರಿಷಬ್ ಶೆಟ್ಟಿ 'ಕಾಂತಾರ 2' ಮುಹೂರ್ತಕ್ಕೆ ದಿನಾಂಕ ಫಿಕ್ಸ್: ಎಲ್ಲಿ, ಯಾವಾಗ? ಇಲ್ಲಿದೆ ಸಂಪೂರ್ಣ ವಿವರ

ಸಾರಾಂಶ

ರಿಷಬ್ ಶೆಟ್ಟಿಯ 'ಕಾಂತಾರ 2' ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದೆ. ಎಲ್ಲಿ, ಯಾವಾಗ ಎನ್ನುವ ಸಂಪೂರ್ಣ  ವಿವರ ಇಲ್ಲಿದೆ. 

ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ಕಾಂತಾರ-2 ನಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸೂಪರ್ ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಪಾರ್ಟ್-2ನಲ್ಲಿ ನಿರತರಾಗಿದ್ದಾರೆ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡ ಬಳಿಕ ಪಾರ್ಟ್-2 ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಮೊದಲ ಭಾಗ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಮಾಯಿ ಮಾಡಿತ್ತು. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಕೋಟಿ ಕೋಟಿ ಕಮಾಯಿ ಮಾಡಿದ್ದ ಕಾಂತಾರ ಇದೀಗ ಪಾರ್ಟ್-2 ಮೂಲಕ ಮೋಡಿ ಮಾಡಲು ಸಜ್ಜಾಗುತ್ತಿದೆ. 

ಆಗಸ್ಟ್‌ನಲ್ಲಿ ಮುಹೂರ್ತ 

ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿದ್ದ ರಿಷಬ್ ಶೆಟ್ಟಿ ಇದೀಗ ಪಾರ್ಟ್-2 ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಕಾಂತಾರ ಪ್ರಿಕ್ವೆಲ್ ಮುಹೂರ್ತ ಆಗಸ್ಟ್ ತಿಂಗಳಲ್ಲಿ ನಡೆಯುತ್ತಿದೆಯಂತೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಆಗಸ್ಟ್ 27ಕ್ಕೆ ಮುಹೂರ್ತಕ್ಕೆ ದಿನಾಂಕ ನಿಗಧಿಯಾಗಿದೆ ಎನ್ನಲಾಗಿದೆ. ಆಗಸ್ಟ್ 27ಕ್ಕೆ ಮುಹೂರ್ತ ನೆರವೇರುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. 

ಜೋಯಿಡಾದಲ್ಲಿ ಕೊಂಕಣಿ ಕಲಿತ ರಿಷಬ್‌ ಶೆಟ್ಟಿ: ಕುಣಬಿ ಜನರ ಜತೆ ಭಾಷಾಭ್ಯಾಸ

ಮುಹೂರ್ತ ಎಲ್ಲಿ 

ಕಾಂತಾರ 2 ಮುಹೂರ್ತ ಪಾರ್ಟ್-1 ಮುಹೂರ್ತ ನಡೆದ ಜಾಗದಲ್ಲೇ ನೆರವೇರಲಿದೆ ಎನ್ನಲಾಗಿದೆ. ಅಂದಹಾಗೆ ಪಾರ್ಟ್-1 ಮುಹೂರ್ತ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲಿ ನೆರವೇರಿತ್ತು. ಪಾರ್ಟ್-2 ಮುಹೂರ್ತ ಕೂಡ ಅದೇ ಜಾಗದಲ್ಲಿ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗಿದೆ. ಇನ್ನು ವಿಸೇಷ ಎಂದರೆ ಮೊದಲ ಭಾಗದ ಮುಹೂರ್ತ ಕೂಡ ಆಗಸ್ಟ್ ತಿಂಗಳಲ್ಲೇ ನೆರವೇರಿತ್ತು. ಇದೀಗ ಪ್ರಿಕ್ವೆಲ್ ಮುಹೂರ್ತವನ್ನು ಸಹ ಅದೇ ಜಾಗದಲ್ಲಿ, ಅದೇ ತಿಂಗಳಲ್ಲಿ ಮಾಡುತ್ತಿರುವುದು ವಿಶೇಷವಾಗಿದೆ. 

5 ರಿಂದ 50 ಕೋಟಿ ರೂಪಾಯಿ; ಕಾಂತಾರ ಪಾರ್ಟ್‌-2ಗೆ ರಿಷಬ್ ಶೆಟ್ಟಿ ಸಂಭಾವನೆ ಕೇಳಿದ್ರೆ ಅಚ್ಚರಿ ಪಡ್ತೀರಾ!

ಮೊದಲ ಭಾಗಕ್ಕಿಂತ 2ನೇ ಭಾಗವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಲು ಸಿನಿಮಾತಂಡ ಸಿದ್ಧತೆ ನಡೆಸಿದೆ. ಪಾರ್ಟ್-2 ಸೆಟ್ಟೇರುವ ಮೊದಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಾಗಾಗಿ ಸಿನಿಮಾದ ಮೇಲೆ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಕಾಂತಾರ-2 ನಲ್ಲಿ ರಿಷಬ್ ಯಾವ ವಿಚಾರವನ್ನು ಹೇಳಲಿದ್ದಾರೆ, ಯಾರೆಲ್ಲ ಕಲಾವಿದರು ನಟಿಸುತ್ತಾರೆ ಎನ್ನುವುದು ಸದ್ಯದಲ್ಲೇ ಬಹಿರಂಗವಾಗಬೇಕಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್