
ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯಿಂದನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರು ಮಾತ್ರವಲ್ಲದೇ ಪರಭಾಷೆಯ ಸಿನಿ ಸೆಲೆಬ್ರಿಟಿಗಳೂ ಸಹ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ. ಕಾಂತಾರ ಚಿತ್ರಕ್ಕೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ಬರ್ತಿದ್ದ ಹಾಗೆ ಬೇರೆ ಭಾಷೆಯಲ್ಲಿ ರಿಲೀಸ್ ಮಾಡಿಲ್ಲ ಎನ್ನುವ ಪ್ರಶ್ನೆ ಚಿತ್ರತಂಡಕ್ಕೆ ಎದುರಾಗಿತ್ತು. ಅದರಲ್ಲೂ ತುಳು ನಾಡಿನವರು ತುಳುವಿನಲ್ಲಿ ರಿಲೀಸ್ ಮಾಡಿ ಎಂದು ಕೇಳಿಕೊಂಡಿದ್ದರು. ಅವರ ಬೇಡಿಕೆಯಂತೆ ಈಗ ಕಾಂತಾರ ಸಿನಿಮಾ ತುಳು ಭಾಷೆಯಲ್ಲೂ ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಈಗಾಗಲೇ ಕಾಂತಾರ, ತಮಿಳು, ತೆಲುಗು, ಮಲಯಾಳಂ ಮತ್ತಿ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಟ್ರೈಲರ್ ಸಹ ರಿಲೀಸ್ ಮಾಡಲಾಗಿದೆ. ಇದೀಗ ತುಳು ಭಾಷೆಯಲ್ಲಿ ಬರುತ್ತಿರುವುದು ತುಳು ಮಂದಿಗೆ ಸಂತಸದ ವಿಚಾರವಾಗಿದೆ.
ಕಾಂತಾರ ಕ್ಲೈಮ್ಯಾಕ್ಸ್ ವೀಕ್ಷಿಸುವಾಗ ವ್ಯಕ್ತಿಯ ಮೈಮೇಲೆ ಬಂತಾ ದೈವ?
ಕರಾವಳಿಯ ಭಾಷೆ, ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದ ದೈವಾರಾಧನೆ, ಭೂತಕೋಲದ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಕರಾವಳಿಯ ದೈವದ ಕಥೆ ಕಾಂತಾರದಲ್ಲಿ ಹಿಂದುತ್ವ ತುಂಬಿದರಾ ರಿಷಬ್ ಶೆಟ್ಟಿ?
ಇನ್ನು ಕಾಂತಾರ ಬಗ್ಗೆ ಹೇಳುವುದಾದರೆ ಚಿತ್ರದಲ್ಲಿ ರಿಷಬ್ ಶೆಟ್ಟಿ ಮತ್ತು ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ. ಕನ್ನಡದಲ್ಲಿ ಗೆದ್ದು ಬೀಗುತ್ತಿರುವ ಕಾಂತಾರ ಬೇರೆ ಭಾಷೆಯಲ್ಲೂ ಗೆಲುವಿನ ನಗೆ ಬೀರುತ್ತಾ ಕಾದುನೋಡಬೇಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.