ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆ.
ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆ. 100 ಕೋಟಿ ಕ್ಲಬ್ ಸೇರಿ ಮುನ್ನುಗ್ಗುತ್ತಿದ್ದ ಕಾಂತಾರ ಈಗ 150 ಕೋಟಿ ಕ್ಲಬ್ ಸೇರಿದೆ ಎನ್ನಲಾಗಿದೆ. ಕಾಂತಾರ ಅಬ್ಬರ ಇನ್ನು ಮುಂದುವರೆದಿದ್ದು ಸದ್ಯದಲ್ಲೇ 200 ಕೋಟಿ ರೂಪಾಯಿ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಭಾಷೆಗಳಿಂದನೂ ಕಾಂತಾರಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ.
ಸೆಪ್ಟಂಬರ್ 30ರಂದು ತೆರೆಗೆ ಬಂದ ಕಾಂತಾರ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಉತ್ತರ ಭಾರತದಲ್ಲೂ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಂದಿಯಲ್ಲಿ ಕಾಂತಾರ 6ನೇ ದಿನವೂ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಹಿಂದಿಯಲ್ಲಿ ಕಾಂತಾರ ಕಲೆಕ್ಷನ್ 12 ಕೋಟಿ ದಾಟಿದೆ. ಕಾಂತಾರ ಅಬ್ಬರ ಅನೇಕ ಹಿಂದಿ ಸಿನಿಮಾಗಳ ಕಲೆಕ್ಷನ್ ಮೇಲೆ ಹೊಡೆತ ಬಿದ್ದಿದೆ. ಮೊದಲ ದಿನ ಹಿಂದಿಯಲ್ಲಿ ಕಾಂತಾರ 1.27 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 2.75 ಕೋಟಿ ರೂಪಾಯಿಗೆ ಏರಿಕೆ ಆಯಿತು. 3ನೇ ದಿನ 3.50 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ವೀಕೆಂಡ್ ನಲ್ಲಿ ಕಾಂತಾರ ಉತ್ತಮ ಕಮಾಯಿ ಮಾಡಿ ಬೀಗಿತ್ತು. 4ನೇ ದಿನ 1.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 5ನೇ ದಿನ 1.88 ರೂಪಾಯಿ ಕಲೆಕ್ಷನ್ ಮಾಡಿತ್ತು. 6ನೇ ದಿನ ದಿನ ಒಂದು ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.
ಎಲ್ಲಾ ಭಾಷೆಯಲ್ಲೂ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲೂ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದೆ.
3 ಕೋಟಿಗೆ Kantara ತೆಲುಗು ವಿತರಣೆ ಹಕ್ಕು ಖರೀದಿಸಿದ ಅಲ್ಲು ಅರ್ಜುನ್ ತಂದೆ ಅರವಿಂದ್?
ಅತೀ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾ
ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಮತ್ತು ಆರ್ ಆರ್ ಆರ್ ಸಿನಿಮಾವನ್ನು ಹಿಂದಿಕ್ಕಿದೆ ಕಾಂತಾರ. ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ. IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ ಕಾಂತಾರ. IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.
Kantara Collection; ಮುಂದುವರೆದ ರಿಷಬ್ ಶೆಟ್ಟಿ ಅಬ್ಬರ; 5ನೇ ದಿನ ಹಿಂದಿಯಲ್ಲಿ ಗಳಿಸಿದ್ದೆಷ್ಟು?
ಕಾಂತಾರ ಬಗ್ಗೆ
ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಪಾತ್ರ ಗಮನಾರ್ಹವಾಗಿದೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.