ಕಾಂತಾರ ಸಿನಿಮಾದ 'ವರಾಹ ರೂಪಂ' ಹಾಡಿಗೆ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಈ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಒಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿರಲಿದೆ.
ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ವಿವಾದಕ್ಕೆ ಸಿಲುಕಿತ್ತು. ಮಲಯಾಳಂ ತೈಕ್ಕುಡಂ ಬ್ರಿಡ್ಜ್‌ನವರು ತಮ್ಮ ನವರಸಂ ಹಾಡಿನ ಕೃತಿಚೌರ್ಯ ಮಾಡಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ 'ವರಾಹ ರೂಪಂ' ಹಾಡಿಗೆ ಕೇರಳದ ಸ್ಥಳಿಯ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಈ ಮೂಲಕ ವರಾಹ ರೂಪಮ್ ಹಾಡನ್ನು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಒಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿರಲಿದೆ. ಕೋರ್ಟ್‌ನಲ್ಲಿ ಕೇಸ್ ಗೆದ್ದಿರುವ ಕಾಂತಾರ ತಂಡ ಸಂತಸ ವ್ಯಕ್ತಪಡಿಸಿದೆ. ವರಾಹ ರೂಪಮ್ ಹಾಡು ಮತ್ತೆ ವಾಪಾಸ್ ಆಗಿರುವುದು ಅಭಿಮಾನಿಗಳಿಗೂ ಸಂಭ್ರಮದ ಕ್ಷಣವಾಗಿದೆ.
'ರಾಹ ರೂಪಂ ...’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ಫಾರ್ಮ್ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಚಿತ್ರತಂಡ, 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಯೂಟ್ಯೂಬ್ನ ಹೊಂಬಾಳೆ ಫಿಲಂಸ್ನ ಚಾನಲ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್ ಮಾಡಲಾಗಿತ್ತು. ಒಟಿಟಿಯಲ್ಲಿ 'ಕಾಂತಾರ' ಚಿತ್ರ ಬಿಡುಗಡೆಯಾದಾಗಲೂ ಬೇರೆ ಟ್ಯೂನ್ ಬಳಸಲಾಗಿತ್ತು. ಇದೀಗ ತಡೆಯಾಜ್ಞೆ ತೆರವಾಗಿದ್ದು ಹಾಡನ್ನು ಪುನಃ ಒಟಿಟಿ, ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲಾ ವೇದಿಕೆಗಳಲ್ಲೂ ಮೂಲ 'ವರಾಹ ರೂಪಂ' ಹಾಡು ಸಿಗಲಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿ ಸಂತಸ ಹಂಚಿಕೊಂಡಿದ್ದಾರೆ. ಕೋರ್ಟ್ ನ ಗೆಲುವು ದೈವಾನು ದೈವಗಳ ಆಶೀರ್ವಾದ ಎಂದು ರಿಷಬ್ ಹೇಳಿದ್ದಾರೆ.
Kantara ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಸಿದ್ಧಶ್ರೀ ಪ್ರಶಸ್ತಿ ಪ್ರದಾನ
'ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹ ರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ' ಎಂದು ಹೇಳಿದರು.
ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . https://t.co/STsNEyKmuT
— Rishab Shetty (@shetty_rishab)'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆಯಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದಾರೆ. ರಿಷಭ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಿಷಭ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರವಿಂದ್ ಅವರ ಛಾಯಾಗ್ರಾಹಣವಿದೆ. 'ಕಾಂತಾರ' ಚಿತ್ರ ಈಗಾಗಲೇ 50 ದಿನಗಳನ್ನು ಪೂರೈಸಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡಿರುವ ಕಾಂತಾರ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.