ಆನೆಗುಡ್ಡೆ ದೇವಸ್ಥಾನದಲ್ಲಿ 'ಕಾಂತಾರ' ಶಿವ; ಕುಟುಂಬ ಸಮೇತ ಭೇಟಿ ನೀಡಿದ ರಿಷಬ್ ಶೆಟ್ಟಿ

By Shruthi Krishna  |  First Published Dec 5, 2022, 3:28 PM IST

ಕಾಂತಾರ ಸಿನಿಮಾ ಸಕ್ಸಸ್ ಬಳಿಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. 


ಕಾಂತಾರ ಸಿನಿಮಾ ಮೂಲಕ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿದ್ದಾರೆ ನಟ ರಿಷಬ್ ಶೆಟ್ಟಿ. ಕಾಂತಾರ ಸಿನಿಮಾ ಇನ್ನೂ ಅನೇಕ ಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಒಟಿಟಿಯಲ್ಲೂ ರಿಲೀಸ್ ಆಗಿದೆ. ಆದರೂ ಚಿತ್ರಮಂದಿರಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿರುವ ರಿಷಬ್ ಶೆಟ್ಟಿ ಸದ್ಯ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ಸಕ್ಸಸ್ ಬಳಿಕ ರಿಷಬ್ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದ ರಿಷಬ್ ಇದೀಗ ಆನೆಗುಡ್ಡೆಗೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿದ ರಿಷಬ್ ವಿಶೇಷ ಪೂಜೆ ಸಲ್ಲಿಸಿದರು. 

ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕನ ದರ್ಶನ ಪಡೆದು ರಿಷಬ್ ಶೆಟ್ಟಿ ಧನ್ಯರಾದರು. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಕೂಡ ದೇವಸ್ಥಾನಕ್ಕೆ ತೆರಳಿದ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಂತೆ ದೇವಸ್ಥಾನದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು. ರಿಷಬ್ ಶೆಟ್ಟಿ ಆನೆಗುಡ್ಡೆ ದೇವಸ್ಥಾನದಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 

Kantara;'ವರಾಹ ರೂಪಂ‌' ಹಾಡು ಬಳಕೆಗೆ ಸಿಕ್ತು ಅನುಮತಿ; ಕೇಸ್ ಗೆದ್ದ ರಿಷಬ್ ಶೆಟ್ಟಿ ಹೇಳಿದ್ದೇನು?

Tap to resize

Latest Videos

ರಿಷಬ್ ಶೆಟ್ಟಿ ಸದ್ಯ ಕಾಂತಾರ ಸಕ್ಸಸ್ ನಲ್ಲಿದ್ದಾರೆ. ಈ ಸಿನಿಮಾದ ಬಳಿಕ ರಿಷಬ್ ಶೆಟ್ಟಿ ಇನ್ನೂ ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಸಕ್ಸಸ್‌ನ ಖುಷಿ ಎಂಜಾಯ್ ಮಾಡುತ್ತಿರುವ ರಿಷಬ್ ಸದ್ಯ ವಿಶ್ರಾಂತಿಯಲ್ಲಿ ಇರುವುದಾಗಿ ಹೇಳಿದ್ದಾರೆ. ರಿಷಬ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಅಂದಹಾಗೆ ರಿಷಬ್ ಈಗಾಗಲೇ ಬೆಲ್ ಬಾಟಮ್-2 ಸಿನಿಮಾ ಮಾಡಿದ್ದಾರೆ. ಇದೀಗ ಕಾಂತಾರ-2 ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಕಾಂತಾರ-2 ಯಾವಾಗ ಬರಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. 

'ಕಾಶ್ಮೀರ್ ಫೈಲ್ಸ್' ನಟ ಅನುಪಮ್ ಖೇರ್ ಜೊತೆ ರಿಷಬ್ ಶೆಟ್ಟಿ; 'ಕಾಂತಾರ' ಶಿವನ ನಗುವಿಗೆ ಅಭಿಮಾನಿಗಳು ಫಿದಾ

ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಸ್ಯಾಂಡಲ್ ವುಡ್‌ನಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಬೇರೆ ಬೇರೆ ಭಾಷೆಗಳಲ್ಲಿ ರಿಲೀಸ್ ಮಾಡುವಂತೆ ಒತ್ತಾಯ ಹೆಚ್ಚಾಯಿತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಯಿತು. ಎಲ್ಲಾ ಭಾಷೆಯಿಂದನೂ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದಿ ಪ್ರೇಕ್ಷಕರು ಸಹ ಕಾಂತಾರ ಚಿತ್ರಕ್ಕೆ ಫಿದಾ ಆಗಿದ್ದರು. ಸಿನಿಮಾ ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಗಣ್ಯರು ಸಹ ಕಾಂತಾರ ನೋಡಿ ಹಾಡಿಹೊಗಳಿದ್ದರು. ಸೂಪರ್ ಸ್ಟಾರ್ ರಜನಿಕಾಂತ್, ಕಾರ್ತಿ, ಧನುಷ್, ಪ್ರಭಾಸ್, ಅನುಷ್ಕಾ ಶೆಟ್ಟಿ, ನಾನಿ, ಶಿಲ್ಪಾ ಶೆಟ್ಟಿ, ಕಂಗನಾ, ಸುನಿಲ್ ಶೆಟ್ಟಿ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಕಾಂತಾರ ಸಿನಿಮಾವನ್ನು ಹಾಡಿಹೊಗಳಿದರು. ರಿಷಬ್ ಶೆಟ್ಟಿ ಅಭಿನಯಕ್ಕೆ ಫಿದಾ ಆಗಿದ್ದಾರೆ. 

click me!