
ಬೆಂಗಳೂರು ( ಜೂ. 1) ಕೊರೋನಾ ಸಂಕಷ್ಟದ ಸಂದರ್ಭ ಸಿನಿಮಾ ಕಲಾವಿದರ ನೆರವಿಗೆ ರಾಕಿಂಗ್ ಸ್ಟಾರ್ ಯಶ್ ನಿಂತಿದ್ದಾರೆ. ಬಡ ಕಲಾವಿದರು ಹಾಗೂ ಕಾರ್ಮಿಕರಿಗೆ ಸಹಾಯ ಮಾಡಲು ನಿಂತಿದ್ದಾರೆ.
"
ಸುಮಾರು 3 ಸಾವಿರಕ್ಕೂ ಹೆಚ್ಚಿನ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ.ಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಸೋಶಿಯಲ್ ಮೀಡಿಯಾ ಮುಖೇನ ಮಾಹಿತಿ ನೀಡಿದ್ದಾರೆ
ಸುಮಾರು 3 ಸಾವಿರಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ. ಗಳನ್ನು ತಮ್ಮ ಸಂಪಾದನೆಯಿಂದ ನೀಡುವುದಾಗಿ ಘೋಷಿಸಿದ್ದಾರೆ.
ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಡಿಮೆ ಬುಡಮೇಲು ಮಾಡಿದೆ. ಅದರಲ್ಲೂ ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಇದು ಬರೀ ಮಾತನಾಡುವ ಸಮಯವಲ್ಲ, ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ ಎಂದಿದ್ದಾರೆ.
ನಮ್ಮ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನ ಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ಸಾರ್ಥಕತೆ ಕಾಣಬೇಕು ಎಂದಿದ್ದಾರೆ. ಇನ್ನೊಂದು ಕಡೆ ಉಪೇಂದ್ರ ಸಹ ಯಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.