
ಬೀರ್‌ಬಲ್ ಸಿನಿಮಾದಲ್ಲಿ ಸಿಂಪಲ್ ಬ್ಯೂಟಿಯಾಗಿ ಕನ್ನಡ ಸಿನಿಮಾಕ್ಕೆ ಕಾಲಿಟ್ಟಿದ್ದ ರುಕ್ಮಿಣಿ ವಸಂತ್ ತಮ್ಮ ಕೆರಿಯರ್ ಗ್ರಾಫ್‌ನ ಅತಿದೊಡ್ಡ ಜಂಪ್ ಪಡೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಕಣ್ಣಿನ ಮೂಲಕವೇ ಮೋಡಿ ಮಾಡಿದ್ದ ರುಕ್ಮಿಣಿ ಇತ್ತೀಚೆಗೆ ತಮಿಳು ಚಿತ್ರರಂಗಕ್ಕೂ ಪರಿಚಯವಾಗಿದ್ದರು. ಕನ್ನಡ ಹಾಗೂ ತಮಿಳು ಸಿನಿಮಾದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿರುವ ರುಕ್ಮಿಣಿ ವಸಂತ್, ಇತ್ತೀಚೆಗೆ ವಿಜಯ್ ಸೇತುಪತಿ ನಟನೆಯ ಏಸ್ ಸಿನಿಮಾದಲ್ಲಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದರು. ಅದರೊಂದಿಗೆ ಮುಂದಿನ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿರುವ ಕಾಂತಾರ-ಚಾಪ್ಟರ್ 1ನಲ್ಲಿ ಕನಕವತಿಯಾಗಿ ರಿಷಭ್ ಶೆಟ್ಟಿ ಎದುರು ನಟಿಸಿರುವುದು ಖಚಿತವಾಗಿತ್ತು. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲ ಸಿದ್ಧವಾಗಿದೆ.
ಇದರೊಂದಿಗೆ ತಮಿಳಿನ ಶಿವಕಾರ್ತಿಕೇಯನ್ ಜೊತೆ ಹಾಗೂ ಜೂನಿಯರ್ ಎನ್‌ಟಿಆರ್ ಮುಖ್ಯ ಭೂಮಿಕೆಯಲ್ಲಿರುವ ಪ್ರಶಾಂತ್ ನೀಲ್ ಅವರ ಮುಂದಿನ ಸಿನಿಮಾದ ಆಫರ್‌ಗಳನ್ನೂ ರುಕ್ಮಿಣಿ ವಸಂತ್ ಪಡೆದುಕೊಂಡಿದ್ದಾರೆ.
ಇದೆಲ್ಲದರ ನಡುವೆ ರುಕ್ಮಿಣಿ ವಸಂತ್ ಕುರಿತಾಗಿ ಮತ್ತೊಂದು ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್'ನಲ್ಲೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ತನ್ನ ವೈವಿಧ್ಯಮಯ ತಾರಾಗಣದಿಂದ ಈಗಾಗಲೇ ಭಾರಿ ಕುತೂಹಲವನ್ನು ಹುಟ್ಟುಹಾಕಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರಂತಹ ನಟಿಯರು ಈಗಾಗಲೇ ಸಿನಿಮಾದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ಈ ಪವರ್‌ಫುಲ್ ಲೈನ್‌ಅಪ್‌ಗೆ ಕನ್ನಡ ನಾಯಕಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಟಾಕ್ಸಿಕ್ ಬಗ್ಗೆ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ರುಕ್ಮಿಣಿ ಈಗಾಗಲೇ ಈ ಯೋಜನೆಗಾಗಿ ಒಂದೆರಡು ಶೆಡ್ಯುಲ್‌ನ ಶೂಟಿಂಗ್ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಸಿದೆ. ಆದರೆ, ಸಿನಿಮಾ ತಂಡದಿಂದ ಇದರ ಅಧಿಕೃತ ಘೋಷಣೆ ಬಂದಿಲ್ಲ. ವೆಂಕಟ್ ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಚಿತ್ರೀಕರಿಸಲಾಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ, ಟಾಕ್ಸಿಕ್ ಚಿತ್ರವನ್ನು ರಾಜೀವ್ ರೈ ಛಾಯಾಗ್ರಹಣ ಮಾಡಿದ್ದಾರೆ ಮತ್ತು 2026 ಮಾರ್ಚ್ 19 ರಂದು ಬಿಡುಗಡೆಗೆ ಸಿದ್ಧವಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.