ನಿಮ್ಮ ದೇಹ ನಿಮ್ಮ ಆಸ್ತಿ ಎಂದು ಟಾಪ್‌ಲೆಸ್ ಆದ ಸಂಯುಕ್ತ ಹೆಗ್ಡೆ: ವಿಡಿಯೋ ನೋಡಿ ತಲೆಕೆಡಿಸಿಕೊಂಡ ನೆಟ್ಟಿಗರು

Published : Jul 07, 2023, 11:38 AM IST
ನಿಮ್ಮ ದೇಹ ನಿಮ್ಮ ಆಸ್ತಿ ಎಂದು ಟಾಪ್‌ಲೆಸ್ ಆದ ಸಂಯುಕ್ತ ಹೆಗ್ಡೆ: ವಿಡಿಯೋ ನೋಡಿ ತಲೆಕೆಡಿಸಿಕೊಂಡ ನೆಟ್ಟಿಗರು

ಸಾರಾಂಶ

ಕನ್ನಡ ಚಿತ್ರರಂಗದ ಬೋಲ್ಡ್‌ ಆಂಡ್ ಬ್ಯೂಟಿಫುಲ್ ನಟಿ ಸಂಯುಕ್ತಾ ಹೆಗ್ಡೆ ಶೇರ್ ಮಾಡಿರುವ ವರ್ಕೌಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಕನ್ನಡ ಚಿತ್ರರಂಗದ ಬೋಲ್ಡ್‌ ಆಂಡ್ ಬ್ಯೂಟಿಫುಲ್ ನಟಿ ಸಂಯುಕ್ತಾ ಹೆಗ್ಡೆ. ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಂಯುಕ್ತ ಹೆಗ್ಡೆ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ಸಂಯುಕ್ತ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಸದ್ಯ ಸಂಯುಕ್ತ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹಾಗಂತ ಸೈಲೆಂಟ್ ಆಗಿದ್ದಾರೆ ಅಂತಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಹಾಟ್ ಫೋಟೋಗಳನ್ನು ಶೇರ್ ಮಾಡಿದ್ದ ಬೋಲ್ಡ್ ನಟಿ ಇದಿಗ ಶೇರ್ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಂಯುಕ್ತ ವಿಡಿಯೋ ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಟಾಪ್ ಲೆಸ್ ಆಗಿ ತನ್ನ ದೇಹ ಪ್ರದರ್ಶಿಸಿದ ಸಂಯುಕ್ತ ನಿಮ್ಮ ದೇಹ ನಿಮ್ಮ ಆಸ್ತಿ ಎಂದು ಹೇಳಿದ್ದಾರೆ. ಅಂದಹಾಗೆ ಸಂಯುಕ್ತ ಟಾಪ್‌ಲೆಸ್ ಆಗಿ ಕಾಣಿಸಿಕೊಂಡಿದ್ದು ತನ್ನ ವರ್ಕೌಟ್ ದೇಹವನ್ನು ತೋರಿಸಲು. ಸಂಯುಕ್ತಾ ಫಿಟ್ನೆಸ್ ಫ್ರೀಕ್. ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಾರೆ. ಜಿಮ್‌ನಲ್ಲಿ ಬೆವರಿಳಿಸುತ್ತಾರೆ. ಇದೀಗ ವರ್ಕೌಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.  

ವಿಡಿಯೋ ಶೇರ್ ಮಾಡಿ ಸಂಯುಕ್ತ ದೀರ್ಘ ಸಾಲುಗಳನ್ನು ಹಂಚಿಕೊಂಡಿದ್ದಾರೆ. 'ನಿಮ್ಮ ದೇಹ ನಿಮ್ಮ ಆಸ್ತಿ. ನೀವು ಯಾವುದೇ ಸಾಮಾಜಿಕ ಮಾನದಂಡಗಳ ಮಾಲೀಕತ್ವವನ್ನು ಹೊಂದಿಲ್ಲ.
ಮತ್ತು ಮಹಿಳೆಯರು ನಾವು ಬಲವಾದ, ಸ್ವತಂತ್ರ ಮತ್ತು ಆತ್ಮವಿಶ್ವಾಸದಿಂದ ಇರಲು ಅವಕಾಶವಿದೆ. ಶಕ್ತಿ ಎನ್ನುವುದು ಪುರುಷ್ ಅಥವಾ ಸ್ತ್ರಿ ಎನ್ನುವುದಲ್ಲ' ಎಂದು ಬರೆದುಕೊಂಡಿದ್ದಾರೆ. ಸಂಯುಕ್ತ ವಿಡಿಯೋಗೆ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ನೇಕರು ಕಾಮೆಂಟ್ ಮಾಡಿ ಬೆಂಕಿ ಇಮೋಜಿ ಇರಿಸುತ್ತಿದ್ದಾರೆ.

ಮೇಜರ್ ಆಪರೇಷನ್‌ನಿಂದ ಚೇತರಿಸಿಕೊಂಡ ಸಂಯುಕ್ತಾ ಹೆಗ್ಡೆ; 5 ತಿಂಗಳ ನಂತರ ಕೆಲಸ ಶುರು

ಸಂಯುಕ್ತ ಕಳೆದ ಕೆಲವು ತಿಂಗಳ ಹಿಂದೆ ಕಾಲಿಗೆ ಏಟು ಮಾಡಿಕೊಂಡು ಫುಲ್ ಬೆಡ್ ರೆಸ್ಟ್‌ನಲ್ಲಿದ್ದರು. ಆದರೆ ಕೆಲವೇ ತಿಂಗಳಲ್ಲಿ ಚೇತರಿಸಿಕೊಂಡು ಮತ್ತೆ ಆಕ್ಟೀವ್ ಆಗಿದ್ದಾರೆ. ಸುಮಾರು 5 ತಿಂಗಳುಗಳ ಕಾಲ ರೆಸ್ಟ್‌ನಲ್ಲಿದ್ದರು. ಮತ್ತೆ ಚೇತರಿಸಿಕೊಂಡಿರುವ ಸಂಯುಕ್ತ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಜೊತೆಗೆ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ವೇಶ್ಯೆ ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ; ದಂಡುಪಾಳ್ಯ ಗ್ಯಾಂಗ್‌ ಕೊಲೆ ಮಾಡಿಲ್ಲ?

ಸಂಯುಕ್ತ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಮತ್ತೆ ಕನ್ನಡ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯದಾಗಿ ರಾಣಾ ಮತ್ತು ತುರ್ತು ನಿರ್ಗಮನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ರಾಣಾ ಸಿನಿಮಾದಲ್ಲಿ ಸಂಯುಕ್ತ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ಸದ್ಯ ಕ್ರೀಮ್ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆಪರೇಷನ್ ಅಲಮೇಲಮ್ಮ ಖ್ಯಾತಿಯ ನಟನ ಜೊತೆ ಕಾಣಿಸಿಕೊಂಡ ದುನಿಯಾ ವಿಜಯ್ ಪುತ್ರಿ: ಯಾಕೆ ಗೊತ್ತಾ?
ಲವ್ ಅಲ್ಲ, ಥ್ರಿಲ್ಲರ್ ಅಲ್ಲ.. ಇದು ಫ್ಯಾಂಟಸಿ + ಲಾಜಿಕ್: 45 ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?