ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ!

Published : May 27, 2024, 01:39 PM ISTUpdated : May 27, 2024, 02:11 PM IST
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ!

ಸಾರಾಂಶ

ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಖ್ಯಾತಿಯ ನಟ ದೃವ ಸರ್ಜಾ ಅವರ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ನಡು ರಸ್ತೆಯಲ್ಲಿಯೇ ಬೈಕ್‌ ಸವಾರರು ಬಂದು ಹಲ್ಲೆ ಮಾಡಿ ಹೋಗಿರುವ ಘಟನೆ ನಡೆದಿದೆ.

ಬೆಂಗಳೂರು (ಮೇ 27): ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಖ್ಯಾತಿಯ ನಟ ದೃವ ಸರ್ಜಾ ಅವರ ಜಿಮ್ ಟ್ರೈನರ್ ಮೇಲೆ ನಡು ರಸ್ತೆಯಲ್ಲಿಯೇ ಬೈಕ್ ಸವಾರರು ಬಂದು ಅಡ್ಡಗಟ್ಟಿ ಗಂಭೀರವಾಗಿ ಹಲ್ಲೆ ಮಾಡಿ ಹೋಗಿರುವ ಘಟನೆ ಬೆಂಗಳೂರಿನ ಕೆ.ಆರ್. ರಸ್ತೆಯಲ್ಲಿ ನಡೆದಿದೆ.

ಧೃವ ಸರ್ಜಾ ಅವರ ಜಿಮ್ ಟ್ರೈನರ್ ಆಗಿರುವ ಬನಶಂಕರಿ ಮೂಲದ ಪ್ರಶಾಂತ್ ಅವರ ಮೇಲೆ ಅಪರಿಚಿತರಿಂದ ಹಲ್ಲೆಯಾಗಿದೆ. ನಟ ಧೃವ ಸರ್ಜ ನಿವಾಸದ ರಸ್ತೆಯಲ್ಲಿ ಘಟನೆ ನಡೆದಿದೆ. ಬನಶಂಕರಿಯ ಕೆ.ಆರ್. ರಸ್ತೆಯಲ್ಲಿ ನಿನ್ನೆ ರಾತ್ರಿ 10.30ರ ಸುಮಾರಿಗೆ ಬೈಕ್‌ನಲ್ಲಿ ಬಂದು ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಹೋಗಿದ್ದಾರೆ. ಈ ಬಗ್ಗೆ ಜಿಮ್ ಟ್ರೈನರ್ ಪ್ರಶಾಂತ್ ಅವರು ಹತ್ತಿರದ ಬನಶಂಕರಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದರು. ಜೊತೆಗೆ, ಇಂದು ಠಾಣೆಗೆ ಬಂದು ಹಲ್ಲೆಯ ಬಗ್ಗೆ ವಿವರವಾಗಿ ದೂರು ದಾಖಲಿಸೊದಾಗಿ ತಿಳಿಸಿದ್ದರು. ಅವರು ಬಂದು ದೂರು ನೀಡಿದ ಬೆನ್ನಲ್ಲಿಯೇ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಕಂಠೀರವ ಸ್ಟುಡಿಯೋದಲ್ಲಿ ಮುದ್ದಾಡುವಾಗಲೇ ಮತ್ತೆ ಸಿಕ್ಕಿಬಿದ್ದ ಆಂಕರ್ ಅನುಶ್ರೀ..!

ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ : ಈ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಬಿ.ಜಗಲಾಸರ್ ಮಾತನಾಡಿ, ಬನಶಂಕರಿ ಠಾಣಾ ವ್ಯಾಪ್ತಿಯ 32 ವರ್ಷದ ಯುವಕ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ನಿನ್ನೆ ರಾತ್ರಿ 10.30 ರ ಸುಮಾರಿಗೆ ಮನೆಗೆ ಹೋಗುವಾಗ ಕೆ.ಆರ್ ರಸ್ತೆಯಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಸದ್ಯ ಯಾರು ಅನ್ನೋದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಯಾಕಾಗಿ ಹಲ್ಲೆ ನಡೆದಿದೆ ಎನ್ನುವ ಬಗ್ಗೆಯೂ ಸ್ಪಷ್ಟವಾದ ಮಾಹಿತಿಯಿಲ್ಲ. ಜಿಮ್ ಟ್ರೈನರ್ ಹಾಗೂ ಬೇರೊಂದು ಕಡೆ ಇವರು ಕೆಲಸ ಮಾಡುತ್ತಿದ್ದರು. ಘಟನೆ ಸಂಬಂಧ ಬನಶಂಕರಿ ಠಾಣೆಗೆ ದೂರು ಕೊಟ್ಟಿದ್ದಾರೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಕೆಜಿಎಫ್ ಸಿನಿಮಾದಿಂದ ಪ್ರೇರಣೆಗೊಂಡು ಕೊಲೆ ಮಾಡುತ್ತಿದ್ದ ಸೀರಿಯಲ್ ಕಿಲ್ಲರ್‌ಗೆ ಜೀವಾವಧಿ ಶಿಕ್ಷೆ

ಉಲ್ಟಾ ಹೊಡೆದ ಜಿಮ್ ಟ್ರೈನರ್: ಇನ್ನು ನಟ ಧೃವ ಸರ್ಜಾ ಅವರ ಜಿಮ್ ಟ್ರೈನರ್ ಪ್ರಶಾಂತ್ ಅವರು ಘಟನೆಯ ಬಗ್ಗೆ ಉಲ್ಟಾ ಹೊಡೆದಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನೊಂದಿಗೆ ಮಾತನಾಡಿ, ನನ್ನ ಮೇಲೆ ಹಲ್ಲೆ ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳದೇ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ ಎಂಬಂತೆ ಗೋಚರವಾಗುತ್ತಿದೆ. ಆದರೆ, ಹಲ್ಲೆಗೊಳಗಾದ ಪ್ರಶಾಂತ್ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಡಿಸಿಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ ಪ್ರಶಾಂತ್ ತಮ್ಮ ಮೇಲೆ ಹಲ್ಲೆಯಾಗಿಲ್ಲ ಎಂದು ಹೇಳುವುದರ ಹಿಂದೆ ಬೇರಾವ ಉದ್ದೇಶವಿದೆ ಎಂಬುದು ಮಾತ್ರ ತಿಳಿಯುತ್ತಿಲ್ಲ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕಳ್ಳಭಟ್ಟಿ ದಂಧೆ ನಡುವೆ ಅರಳುವ ಪ್ರೀತಿ: ಇಲ್ಲಿದೆ 'ಧರ್ಮಂ' ಸಿನಿಮಾ ವಿಮರ್ಶೆ
ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ