BREAKING ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ವಶಕ್ಕೆ 

By Mahmad Rafik  |  First Published Jun 11, 2024, 10:20 AM IST

ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 


ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ದರ್ಶನ್ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಪೊಲೀಸ್ ಆಯುಕ್ತ  ದಯಾನಂದ್ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್‌ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ. ನಿನ್ನೆ ಬೆಂಗಳೂರು ಪೊಲೀಸರು ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವ ಮಾಹಿತಿಯನ್ನು ಕುಟುಂಬಸ್ಥರಿಗೆ ನೀಡಲಾಗಿತ್ತು.

Tap to resize

Latest Videos

click me!