
ಬೆಂಗಳೂರು(ಜು.26): ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಂತಿ ಅವರ ನೇತ್ರದಾನ ಮಾಡಲಾಗಿದೆ. ಡಾ. ರಾಜ್ ಕುಮಾರ್ ಅವರ ಹಾಗೆ ಯೇ ನೇತ್ರದಾನ ಮಾಡಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿರೋ ಡಾ. ರಾಜ್ ಕುಮಾರ್ ಐ ಬ್ಯಾಂಕ್‌ಗೆ ಕಣ್ಣುಗಳನ್ನು ದಾನ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ನಟಿ ಜಯಂತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ!
ರಾತ್ರಿ ವೇಳೆ ಸಮಸ್ಯೆ ಉಲ್ಬಣಗೊಂಡು ನಟಿ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಯಾಂಡಲ್‌ವುಡ್‌ನ ಹಿರಿಯ ನಟಿಯ ಅಗಲಿಕೆಗೆ ತಾರಾಗಣ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಷ್ ಅವರು ಜಯಂತಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.