ಫಿಲಂ ಚೇಂಬರ್‌ಗೆ ನೋವಿನಿಂದ ಪತ್ರ ಬರೆದ ಕಿಚ್ಚ ಸುದೀಪ್: ಸಿನಿಮಾ ಜೀವನದ ಏರಿಳಿತಗಳ ಉಲ್ಲೇಖ

By Sathish Kumar KHFirst Published Jul 10, 2023, 9:02 PM IST
Highlights

ಕನ್ನಡ ಚಿತ್ರರಂಗದಲ್ಲಿ 27 ವರ್ಷ ಕೆಟ್ಟಹೆಸರು ಬರದಂತೆ ನಡೆದುಕೊಂಡ ನನ್ನ ಮೇಲೆ ನಿರ್ಮಾಪಕ ಆರೋಪ ಮಾಡಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳುತ್ತೇನೆ. 

ಬೆಂಗಳೂರು (ಜು.10): ಕನ್ನಡ ಚಿತ್ರರಂಗದಲ್ಲಿ ನಾನು ಕಳೆದ 27 ವರ್ಷಗಳಿಂದ ಯಾವುದೇ ಕೆಟ್ಟ ಹೆಸರು ಬರದಂತೆ ನಡೆದುಕೊಂಡಿದ್ದೀನಿ. ಈಗ ನನ್ನ ಮೇಲೆ ನಿರಾಧಾರವಾಗಿ ನಿರ್ಮಾಪಕ ಆರೋಪ ಮಾಡಿದ್ದಾರೆ. ಫಿಲಂ ಚೇಂಬರ್ ನಿಂದ ಪತ್ರಕ್ಕೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಇನ್ನುಮುಂದೆ ಕಾನೂನು ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇನೆ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ಮಾನವೀಯತೆಯ ದೃಷ್ಟಿಯಿಂದ ನಿರ್ಮಾಪಕರಿಗೆ ಸಹಾಯ ಮಾಡಲು ಕೂಡ ನಾನು ಮುಂದಾಗಿದ್ದೆನು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯ ಆಗಲಿಲ್ಲ. ಈಗ ನನ್ನ ಮೇಲೆಯೇ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾನು ಈ ವಿಚಾರವನ್ನು ಕಾನೂನಿನ ರೀತಿಯಲ್ಲಿ ಬಗೆಹರಿಸಲು ನಿರ್ಧರಿದ್ದೇನೆ. ಮಾತೃ ಸಂಸ್ಥೆ ಬಗ್ಗೆ ನನಗೆ ಬಹಳಷ್ಟು ಗೌರವ ಇದೆ. ಕುಮಾರ್ ಅವರ ವೈಯಕ್ತಿಕ ಸಮಸ್ಯೆಗಳಿಗೆ ನಾನು ಕಾರಣ ಅನ್ನೊದು ಸರಿಯಲ್ಲ. ಸೂಕ್ತ ದಾಖಲೆಗಳು ಇಲ್ಲದೆ ಕುಮಾರ್ ಅವರು ಆರೋಪ ಮಾಡುವುದು ಸರಿಯಲ್ಲ. ನಾನು ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಶಿರ ಬಾಗಿ ದಂಡ ಕಟ್ಟುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Latest Videos

ಸುದೀಪ್ - MN ಕುಮಾರ್​ ವಿವಾದ: ಕುಮಾರ್ ಭುಜದ ಮೇಲೆ ಗನ್ ಇಟ್ಟು ಹೊಡಿತ್ತಿದ್ದಾರೆ- ಜಾಕ್ ಮಂಜು ಕಿಡಿ

ಪತ್ರದಲ್ಲಿ ಬರೆದ ವಿವರಣೆ ಇಲ್ಲಿದೆ... 
ಎಲ್ಲರಿಗೂ ನಮಸ್ಕಾರ, ಕನ್ನಡ ಚಿತ್ರರಂಗ ಮಹಾನ್ ಸಾಧಕರಿಂದ ಬೆಳೆದು ನಿಂತಿದೆ. ಅವರೆಲ್ಲರ ಸಾಧನೆಯ ನಡುವೆ, ನನ್ನದೂ ಒಂದು ಅಳಿಲು ಸೇವೆ ಇದ. ಅಂತಹ ಮಹಾನ್ ಸಾಧಕರೆದುರು ನಾನು ತುಂಬಾ ಕಿರಿಯವ, ಈ ಕಳೆದ 27 ವರ್ಷಗಳಲ್ಲಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಕಲಾವಿದನಾಗಿ, ಬರಹಗಾರ, ಗಾಯಕ, ಇತ್ಯಾದಿ ಇತ್ಯಾದಿ ಆಗಿ ನಾನು ಈ ಪತ್ರವನ್ನು ನಿಮಗೆ ಬರೆಯುತ್ತಿಲ್ಲ. ಚಿತ್ರೋದ್ಯಮದಲ್ಲಿ ಆ 27 ವರ್ಷಗಳ ಕಾಲ ಕಾಪಾಡಿಕೊಂಡು ಬಂದ ಒಳ್ಳೆಯತನ ಮತ್ತು ಮಾನವೀಯತೆಯ ಆಧಾರದಲ್ಲಿ, ಈ ಮೇಲ್ಕಂಡ ಸಂಸ್ಥೆಗಳ ಮೇಲಿನ ಗೌರವಾಧಾರದ ಮೇಲೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದುದು ನಿಮ್ಮ ಕರ್ತವ್ಯ ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ, ನನಗೆ ಯಾವುದೂ ತಕರಾರು ಇರುವುದಿಲ್ಲ. ಆದರೂ, ಯಾವುದೇ ನಿರ್ಮಾಪಕರು, ಯಾರೇ ಕಲಾವಿದರ ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತ್ರ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆ ಇಂದ ಮನವಿ ಮಾಡುತ್ತೇನೆ. ಈ ಹಿಂದೆ ನೀವು ಇದನ್ನೆಲ್ಲ ಪರಿಶೀಲಿಸಲಿಲ್ಲವೆಂದಲ್ಲ. ಈ ಬಾರಿ ನನ್ನ ವಿಚಾರದಲ್ಲಿ ಅದೇಕೋ ನಡೆಯುತ್ತಿಲ್ಲ, ಕಾರಣವೂ ನನಗೆ ತಿಳಿಯುತ್ತಿಲ್ಲ. ಯಾಕೆ ನಿಮ್ಮ ಬಳಿ ಆಗ ಬರಲಿಲ್ಲವೆಂದರೆ, ಚಿತ್ರರಂಗದಲ್ಲಿ ಬಹುಪಾಲು ಸಂದರ್ಭಗಳಲ್ಲಿ ಬರಬೇಕಾದ ಹಣ ಬಂದಿಲ್ಲ. ಹಲವಾರು ಕಡೆ ಬಂದಿದೆ. ನಾನವರಿಗೆ ಋಣಿ ಆಗಿದ್ದೇನೆ. ಕೆಲವರು ತಲೆ ಮರೆಸಿಕೊಂಡಿದ್ದಾರೆ. ಕೆಲವರು ವದಂತಿಗಳನ್ನು ಹಬ್ಬಿಸುವುದರಲ್ಲಿ ಕಳೆದು ಹೋಗಿದ್ದಾರೆ. ಇಂತಹ ಎಲ್ಲ ಸಂದರ್ಭಗಳು ನಡೆದಿದ್ದು ಆ ನಂಬಿಕೆ ಇಂದಲೇ. ದಾಖಲೆಗಳಿದ್ದಲ್ಲಿ ತಮ್ಮ ಬಳಿ ನಾನೇ ಬರುತ್ತಿದ್ದ, ಇಂತಹ ಸಂದರ್ಭಗಳಲ್ಲಿ ಸ್ನೇಹ, ಅನುಕಂಪ, ಪ್ರೀತಿಗೆ ತಲೆ ಬಾಗಿದ್ದೇನೆ. ಹಲವು ಬಾರಿ ನನ್ನ ದಡ್ಡತನದಿಂದ ನಾನೇ ಪಾಠ ಕಲಿತಿದ್ದೇನೆ.

ಈಗಲೂ, ಈ ವಿಷಯದಲ್ಲಿ ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದು ಚಿತ್ರರಂಗದ ಮುಂದಿನ ಭವಿತವ್ಯಕ್ಕೆ ಕೆಟ್ಟ ಉದಾಹರಣೆಗಳು ದಕ್ಕ ಬಾರದು ಎಂದು. ಸಂಪೂರ್ಣ ಸಂಭಾವನೆ ಪಡೆದು ಸಿನಿಮಾ ಮಾಡಲಿಲ್ಲವೆಂಬ ದುಷ್ಕೃ ಸುಳ್ಳು, ಉದಾಹರಣೆಗೆ ನಾನು ಸಿಲುಕ ಬಾರದು. ಈ ಕಾರಣಕ್ಕೆ ಬೇರೆಲ್ಲರ ವಿಷಯದಲ್ಲಿ ಅತ್ಯಂತ ಮಾನವೀಯವಾಗಿ, ಪ್ರೀತಿಯಿಂದ ವರ್ತಿಸುವ ನಾನು ಕಠಿಣವಾಗಿದ್ದೇನೆ. ನನ್ನ ಮತ್ತು ನನ್ನ ಕುಟುಂಬದ ನಿಲುವಿಗೆ ಬದ್ಧನಾಗಿದ್ದೇನೆ.

ಒಂದು ಮಾತು ನಿಮ್ಮ ಪತ್ರಿಕಾ ಘೋಷ್ಠಿಯಲ್ಲಿ ಹೊರಬಂತು. ಅದು ನನಗೆ ತೀವು ನೋವು ಉಂಟು ಮಾಡಿತು. ದುಃಖ ಉಂಟು ಮಾಡಿತು. ಶ್ರೀಯುತ ಸುರೇಶ್ ನನಗೂ ಪರಿಚಿತರು. ಎದುರಾದಾಗ ಕುಶಲ ಕ್ಷೇಮ ಮಾತನಾಡುವಷ್ಟು ಸಲಿಗೆ ಉಳ್ಳವರು, ನಿರ್ಮಾಪಕರೂ ಆದ ಅವರು, ಓರ್ವ ನಿರ್ಮಾಪಕರ ಪರ ನಿಲ್ಲಬೇಕೆಂಬ ಸೀಮಿತವಾದ ಕಾರಣಕ್ಕೆ, ಕುಮಾರ್ ಅವರು ಮೂರ್ ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗೇನಾದರೂ ಅವರಿಗೆ ಪ್ರಾಣಾಪಾಯವಾದರೆ, ಸುದೀಪ್ ಹೊಣೆ ಅಂದದ್ದು, ನನಗಲ್ಲ, ಇಡೀ ಸಮಾಜಕ್ಕೆ ಕೊಟ್ಟ ಅಪಾಯಕಾರಿ ಸಂದೇಶ, ಯಾವಾಗಿನಿಂದ ಕನ್ನಡ ಚಿತ್ರರಂಗದಲ್ಲಿ ಈ ಕೆಟ್ಟ ಬೆಳವಣಿಗೆ ಆರಂಭವಾಯಿತು?

ದೈಹಿಕವಾಗಿ, ಮಾನಸಿಕವಾಗಿ, ಕುಮಾರ್ ಗಾಗಲಿ, ಯಾರಿಗೇ ಆಗಲಿ, ಹಲವಾರು ಸಮಸ್ಯೆಗಳು ಬರಬಹುದು, ಹಾಗೇನಾದರು ಅವರಿಗೆ ತೊಂದರೆ ಆದರೆ ಅದು ನನ್ನಿಂದ ಎಂಬ ಮಹಾಪರಾಧದ ಹೇಳಿಕೆ ನನಗೆ ತೀವು ನೋವು ತಂದಿದೆ. ನಾನು ಬದುಕಿನುದ್ದಕ್ಕೂ ಈ ನೋವನ್ನು ಅನುಭವಿಸಲೇ? ಇಂತಹ ಘಟನೆಗೆ ನಾನು ಸಾಕ್ಷಿ ಪುಜೆ ಆಗಲಾರ, ಹಾಗಾಗಿ ನ್ಯಾಯಾಲಯದ ಹೋರಾಟಕ್ಕೆ ಸುರೇಶವರನ್ನು ಭಾಗಿ ಮಾಡಿದ. ಅವರಿಗೂ ನೋಟೀಸ್ ಕಳಸಿದ ವಿನಃ ಕೋಪ ತಾಪ ಆಕ್ರೋಶದಿಂದಲ್ಲ, ನೋವಿನಿಂದ ಸುರೇಶ್ ಅವರ ವಿಚಾರದಲ್ಲಿ ಇನ್ನೂ ವಿವರಿಸುವುದಾದರೆ ನನ್ನ ತನಕ ಅಪರಿಚಿತರೋ, ಪರಿಚಿತರೋ, ಸಿನಿಮಾ ರಂಗದವರೋ ಅಲ್ಲವೋ, ಸಹಕಲಾವಿದರೋ, ತಂತ್ರಜ್ಞರೋ ಯಾರೇ ಬಂದು ಸಹಾಯ ಕೇಳಿದಾಗಲೂ ದೇವರು ಕೊಟ್ಟಿರುವ ಶಕ್ತಿಯಲ್ಲಿ ನನ್ನ ಕೈಲಾದಷ್ಟೂ ಸಹಾಯ ಮಾಡಿದ್ದೇನೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾದ ಕಿಚ್ಚ ಸುದೀಪ್‌

ಯಾರದೇ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ. ಎಲ್ಲ ನಿರ್ಮಾಪಕರ ಬಗ್ಗೆ ಗೌರವವಿಲ್ಲದೆ, ನಂಬಿಕೆ ಇಲ್ಲದೆ, ಇಷ್ಟರ ವರೆಗೆ ನಾನು ಚಿತ್ರರಂಗದಲ್ಲಿ ನೆಲೆನಿಂತೇನೆ? ನನ್ನ ಮನೆಯಲ್ಲೂ ವೃದ್ಧ ಪೋಷಕರಿದ್ದಾರೆ. ನಂಗೂ ಕಣ್ಣೀರಿದೆ, ದುಃಖ ದುಮ್ಮಾನಗಳಿವೆ. ನಮ್ಮಲ್ಲಿ ಯಾರಿಗೇ ತೊಂದರೆಯಾದರೂ, ಮಂಡಳಿಯೇ ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿ ಹೂಣೆಗಾರ ಎನ್ನಲಾದೀತೆ? ಎಂದಾದರೂ ಹಾಗೆ ನಡೆದುಕೊಂಡಿದ್ದೇನೆಯೇ?

ಇನ್ನು, ರಾಜರಾಜೇಶ್ವರಿ ನಗರದ ಮನೆಯ ವಿಷಯದಲ್ಲಿ ಒಂದು ಸ್ಪಷ್ಟನೆ ತಮಗೆ ವಯಕ್ತಿಕವಾಗಿ ನೀಡುತ್ತೇನೆ. ನಾನು ತುಂಬಾ ಆಸ್ತಿವಂತ ಅಲ್ಲದೆ ಇರಬಹುದು. ಆದರ ಸಂಪಾದಿಸಿದ ಆಸ್ತಿಯಲ್ಲಿ ನನ್ನ ಬೆವರಿದೆ, ಶ್ರಮವಿದೆ. 95% ಅಷ್ಟು ಬ್ಯಾಂಕ್ ಲೋನ್ ಪಡೆದು ಆ ಮನೆ ಖರೀದಿಸಿದ್ದೇನೆ. ಈ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ನೀಡಬಲ್ಲೆ ಎಂಬ ನೈತಿಕ ಶಕ್ತಿಯ ಮೇರೆಗೆ, ಈ ಕಠಿಣ ನಿಲುವು ಹೊಂದಿದ್ದೇನೆ. ಈ ಮೇಲ್ಕಂಡ ಕಾರಣಕ್ಕೆ ನಾನು ಎರಡು ವಿನಂತಿಗಳನ್ನು ತಮ್ಮಲ್ಲಿ ಮಾಡಿಕೊಳ್ಳುತ್ತೇನ. ಯಾರೇ ನಿಮ್ಮಲ್ಲಿ ದೂರಿಟ್ಟರೂ, ಯಾವುದೇ ಕಲಾವಿದರಿರ ಬಹುದು, ತಂತ್ರಜ್ಞರಿರ ಬಹುದು, ಯಾವುದೇ ವಿಭಾಗದವರಾಗಿರ ಬಹುದು, ಆ ದೂರಿನ ಕುರಿತಾದ ಸಾಕ್ಷಾ ಧಾರಗಳನ್ನು ಪರಿಶೀಲಿಸಿ ಮುಂದು ವರೆಯಿರಿ ಮತ್ತು ಈ ಕೆಟ್ಟ ಪರಂಪರೆಗೆ ನಾಂದಿ ಹೇಳುವುದಕ್ಕೆ ನಾವು ಯಾರು ಹೊಣೆಗಾರರಾಗುವುದು ಬೇಡ.

click me!