ಎರಡೂವರೆ ದಶಕಗಳ ಹಿಂದೆ ಬಂದಿದ್ದ 'ತಮ್ಮದೇ' ಚಿತ್ರಕ್ಕೆ ಚೀಫ್ ಗೆಸ್ಟ್‌ ಆದ ಕಿಚ್ಚ ಸುದೀಪ್!

Published : Jan 31, 2025, 03:16 PM ISTUpdated : Jan 31, 2025, 03:21 PM IST
ಎರಡೂವರೆ ದಶಕಗಳ ಹಿಂದೆ ಬಂದಿದ್ದ 'ತಮ್ಮದೇ' ಚಿತ್ರಕ್ಕೆ ಚೀಫ್ ಗೆಸ್ಟ್‌ ಆದ ಕಿಚ್ಚ ಸುದೀಪ್!

ಸಾರಾಂಶ

ಸುದೀಪ್‌ ಅವರ ಮೊದಲ ಚಿತ್ರದ ಹೆಸರಿನಲ್ಲೇ ಹೊಸ 'ತಾಯವ್ವ' ಚಿತ್ರ ತೆರೆಗೆ ಸಿದ್ಧವಾಗಿದೆ. ಗೀತಪ್ರಿಯ 'ತಾಯವ್ವ'ನಾಗಿ ನಟಿಸಿದ್ದು, ಚಿತ್ರದ ಜನಪದ ಗೀತೆಗಳಿಗೆ ಸ್ವತಃ ಧ್ವನಿಯಾಗಿದ್ದಾರೆ. ಸುದೀಪ್‌ ಆಡಿಯೋ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಭಾ.ಮ. ಹರೀಶ್‌ ಹೊಸ ಆಡಿಯೋ ಕಂಪನಿಯಿಂದ ಬಿಡುಗಡೆಯಾಗಿದೆ. ಹೆಣ್ಣುಮಕ್ಕಳ ಸಂದೇಶ ಸಾರುವ ಈ ಚಿತ್ರ ಗ್ರಾಮೀಣ ಸೊಗಡಿನಿಂದ ಕೂಡಿದೆ.

'ತಾಯವ್ವ' ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ ʼಕಿಚ್ಚʼ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ ʼತಾಯವ್ವʼ ಚಿತ್ರದಲ್ಲಿ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ʼತಾಯವ್ವʼನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 

ಈಗ ಅದೇ ʼತಾಯವ್ವʼ ಎಂಬ ಹೆಸರಿನಲ್ಲಿ, ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇನ್ನು ಈ ಬಾರಿ 'ತಾಯವ್ವ'ನಾಗಿ ಈ ಚಿತ್ರದಲ್ಲಿ ನವ ಪ್ರತಿಭೆ ಗೀತಪ್ರಿಯ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸದ್ದಿಲ್ಲದೆ ʼತಾಯವ್ವʼ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ʼತಾಯವ್ವʼ ಚಿತ್ರದ ಹಾಡುಗಳು ಬಿಡುಗಡೆಯಾಯಿತು. ಅನಂತ ಆರ್ಯನ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ 'ತಾಯವ್ವ' ಚಿತ್ರದ ಗೀತೆಗಳಿಗೆ ಸ್ವತಃ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ʼತಾಯವ್ವʼನಾಗಿ ಅಭಿನಯಿಸಿರುವ, ಗೀತಪ್ರಿಯ ಅವರೇ ಧ್ವನಿಯಾಗಿದ್ದಾರೆ. 

ರಜನಿಕಾಂತ್ ಅವರಿಗೆ ಸಿನಿಮಾ ಮಾಡೋ ಅಗತ್ಯವಿಲ್ಲ ಅಂತ ಹೇಳ್ಬೇಡಿ: ಕಿಚ್ಚ ಸುದೀಪ್

ಅಪ್ಪಟ ಕನ್ನಡದ ಗ್ರಾಮೀಣ ಸೊಗಡಿನ ಜನಪದ ಗೀತೆಗಳ ಗುಚ್ಚವನ್ನು 'ತಾಯವ್ವ' ಚಿತ್ರದಲ್ಲಿ ಹೊಸರೂಪದಲ್ಲಿ ತೆರೆಮೇಲೆ ತರಲಾಗುತ್ತಿರುವುದು ಮತ್ತೊಂದು ವಿಶೇಷ. ಬೆಂಗಳೂರಿನ 'ಜಿ. ಟಿ ವರ್ಲ್ಡ್‌ ಮಾಲ್‌' ನಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ʼಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್‌ ಮುಖ್ಯ ಅತಿಥಿಯಾಗಿ ಆಗಮಿಸಿ, 'ತಾಯವ್ವ' ಚಿತ್ರದ ಆಡಿಯೋವನ್ನು ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ನಟ ಕಿಚ್ಚ ಸುದೀಪ್‌, ʼನಾನು ಆಗಷ್ಟೇ ಕಾಲೇಜು ಮುಗಿಸುತ್ತಿರುವ ಸಂದರ್ಭದಲ್ಲಿ ʼತಾಯವ್ವʼ ಸಿನೆಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಮೊದಲ ಬಾರಿಗೆ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದ ಈ ಸಿನೆಮಾ ನನಗೆ ಸಾಕಷ್ಟು ವಿಷಯಗಳನ್ನು ಹೇಳಿಕೊಟ್ಟಿತ್ತು. ನನ್ನ ವೃತ್ತಿ ಜೀವನದಲ್ಲಿ ಈ ಸಿನೆಮಾ ಇಂದಿಗೂ ಒಂದು ಸುಮಧುರ ನೆನಪಾಗಿ ಉಳಿದಿದೆ. 

ಈಗ ಅದೇ ʼತಾಯವ್ವʼ ಹೆಸರಿನಲ್ಲಿ ಅಂಥದ್ದೇ ಮತ್ತೊಂದು ಸಿನೆಮಾ ತೆರೆಗೆ ಬರುತ್ತಿರುವುದು ಒಳ್ಳೆಯ ವಿಷಯ. ʼತಾಯವ್ವʼ ಎಂಬ ಹೆಸರಿನಲ್ಲೇ ಒಂದು ಭಾವನಾತ್ಮಕ ಸೆಳೆತವಿದೆ. ಈ ಸಿನೆಮಾದಲ್ಲೂ ಅದೇ ಅಂಶಗಳಿರಬಹುದು ಎಂಬ ನಿರೀಕ್ಷೆಯಿದೆ. ಚಿತ್ರಕ್ಕೆ ಒಳ್ಳೆಯದಾಗಲಿʼ ಎಂದು ಶುಭ ಹಾರೈಸಿದರು. 

ಕೊನೆಗೂ ಡಿವೋರ್ಸ್ ಗುಟ್ಟು ಬಿಚ್ಚಿಟ್ಟ ಕಿರಿಕ್ ಕೀರ್ತಿ; ಹೇಗಿದ್ಯಂತೆ ಈಗಿನ ಮನಸ್ಥಿತಿ.., ಪರಿಸ್ಥಿತಿ?

'ತಾಯವ್ವ' ಚಿತ್ರದ ಮೂಲಕ ಮೊದಲ ಬಾರಿಗೆ ನವ ಪ್ರತಿಭೆ ಗೀತಪ್ರಿಯ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. 'ಇದೊಂದು ಅಪ್ಪಟ ಗ್ರಾಮೀಣ ಸೊಗಡಿನ ಸಿನೆಮಾ. ಹೆಣ್ಣುಮಕ್ಕಳನ್ನು ಉಳಿಸಿ, ಬೆಳೆಸಿ ಎಂಬ ಸಂದೇಶವನ್ನು ಇಟ್ಟುಕೊಂಡು ಈ ಸಿನೆಮಾ ಮಾಡಲಾಗಿದೆ. ಇದರಲ್ಲಿ ನಾನು 'ತಾಯವ್ವ' ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನೆಮಾದಲ್ಲಿ ಒಂದು ಸಂದೇಶವಿದೆ. ಎಲ್ಲರಿಗೂ ತಲುಪುವಂಥ ವಿಷಯ ಈ ಸಿನೆಮಾದಲ್ಲಿದೆ. 

ಕಿಚ್ಚ ಸುದೀಪ್‌ ಅವರ ಮೊದಲ ಸಿನೆಮಾದ ಹೆಸರನ್ನೇ ನಮ್ಮ ಸಿನೆಮಾಕ್ಕೆ ಇಟ್ಟುಕೊಂಡು ತೆರೆಗೆ ತರುತ್ತಿದ್ದೇವೆ. ನಮ್ಮ ಸಿನೆಮಾಕ್ಕೆ ಬೆಂಬಲವಾಗಿ ಸುದೀಪ್‌ ನಿಂತಿರುವುದು ನಮಗೆ ದೊಡ್ಡ ಬಲ ತಂದಂತಾಗಿದೆ. ಈಗಾಗಲೇ ಸಿನೆಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಆದಷ್ಟು ಬೇಗ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆʼ ಎಂದರು. 

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್‌, ಮೊದಲ ಬಾರಿಗೆ 'ಭಾ. ಮ. ಹರೀಶ್‌ ಆಡಿಯೋ' ಹೆಸರಿನಲ್ಲಿ ಹೊಸ ಆಡಿಯೋ ಕಂಪೆನಿಯನ್ನು ಪ್ರಾರಂಭಿಸಿದ್ದು, ಈ ಕಂಪೆನಿಯ ಅಡಿಯಲ್ಲಿ 'ತಾಯವ್ವ' ಸಿನೆಮಾದ ಆಡಿಯೋ ಬಿಡುಗಡೆಯಾಗಿದೆ.

ರಾಜಮೌಳಿ-ಮಹೇಶ್ ಬಾಬು ಮಾಡ್ತಿರೋದು ಅಂತಿಂಥದ್ದಲ್ಲ, ಆಫ್ರಿಕಾದಲ್ಲೇ ಯಾಕೆ ಶೂಟ್? 
 
ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪದ್ಮಾವತಿ ಚಂದ್ರಶೇಖರ್‌, ನಿರ್ಮಾಪಕರಾದ ಭಾ. ಮ. ಹರೀಶ್‌, ಕರ್ನಾಟಕ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣಪ್ಪ, ಐಪ್ಲೆಕ್ಸ್‌ ಮುಖ್ಯಸ್ಥ ಗಿರೀಶ್‌, ಶಿಕ್ಷಣ ತಜ್ಞ ನಾಗಪಾಲ್‌ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಿದ್ದುಬಿದ್ದೂ ನಗುವಂತೆ 'ಆಭಾಸ' ಸೃಷ್ಟಿಸಿದ ತೆಲುಗು ಸಿನಿಮಾದಿಂದ ಕನ್ನಡಕ್ಕೆ 'ಡಬ್' ಆಗಿರೋ ಹಾಡು; ಏನ್ ಗುರೂ ಇದೂ..!?
ಕುಟುಂಬವೇ ಹೆಮ್ಮೆಪಡುವಂತೆ ಮಾಡಿದ Kiccha Sudeep ಮಗಳು ಸಾನ್ವಿ! ಇದಪ್ಪಾ..ಸಾಧನೆ ಅಂದ್ರೆ..!