
ಬೆಂಗಳೂರು(ಎ.17): ಸ್ಯಾಂಡಲ್‌ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಲಡಾಖ್‌ನಲ್ಲಿ ಸಿನಿಮಾ ಹಾಡಿನ ಶೂಟಿಂಗ್ ಮಾಡಿದ ನಟನಿಗೆ ಇದೀಗ ವಿವಾಹ ವಾರ್ಷಿಕೋತ್ಸವ ದಿನವೇ ಕೊರೋನಾ ಪಾಸಿಟಿವ್ ಬಂದಿದೆ.
"
ನಟ ಲೇಹ್-ಲಡಾಖ್‌ನಲ್ಲಿ ತಮ್ಮ ಸಿನಿಮಾದ ಹಾಡಿನ ಚಿತ್ರೀಕರಣ ಮಾಡುತ್ತಿದ್ದು ಅಲ್ಲಿಂದ ಬಹಳಷ್ಟು ಫೋಟೋ ವಿಡಿಯೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದೀಗ ಮಾಜಿ ಸಿಎಂ, ನಿಖಿಲ್ ಅವರ ತಂದೆ ಎಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ನಿಖಿಲ್ ಅವರಿಗೂ ಕೊರೋನಾ ದೃಢಪಟ್ಟಿದೆ.
ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಡಿಕೆಶಿಗೆ ಕೊರೋನಾ!
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.