ದೇವೇಗೌಡ್ರ ಮನೆಯಲ್ಲಿ ಮದುವೆ ಸಂಭ್ರಮ | ಲಾಕ್‌ಡೌನ್ ನಡುವೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ | ಕುಟುಂಬದ ಆಪ್ತರಷ್ಟೇ ಭಾಗಿ
ಬೆಂಗಳೂರು (ಏ. 17): ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ, ರೇವತಿ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
ನಿಖಿಲ್-ರೇವತಿ ಕಲ್ಯಾಣೋತ್ಸವಕ್ಕೆ ಯಾರೆಲ್ಲ ಬಂದಿದ್ದಾರೆ? ಚಿತ್ರಗಳಲ್ಲಿ
ಬಿಡದಿ ಸಮೀಪದ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಮದುವೆ ನಡೆಯುತ್ತಿದ್ದು ಶಾಸ್ತ್ರಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಪ್ರಾರಂಭಗೊಂಡಿವೆ. 9 ರಿಂದ 9.45 ರ ಶುಭ ಗಳಿಗೆಯಲ್ಲಿ ಮಾಂಗಲ್ಯ ಧಾರಣೆ ನಡೆದಿದೆ. ಇಂದು ಸಂಜೆಯೇ ಸೊಸೆಯನ್ನು ಮನೆ ತುಂಬಿಸಿಕೊಳ್ಳಲಿದೆ ಗೌಡ್ರ ಕುಟುಂಬ. ಕೊರೋನಾ ಹಿನ್ನಲೆಯಲ್ಲಿ ಕುಟುಂಬದ ಅಪ್ತರಷ್ಟೇ ಭಾಗಿಯಾಗಿದ್ದಾರೆ.