ಹಸು ಖರೀದಿ ವ್ಯವಹಾರ: ನಟ ನೀನಾಸಂ ಅಶ್ವತ್ಥ್​ ಬಂಧನ

Published : Jul 09, 2023, 05:00 PM IST
ಹಸು ಖರೀದಿ ವ್ಯವಹಾರ: ನಟ ನೀನಾಸಂ ಅಶ್ವತ್ಥ್​ ಬಂಧನ

ಸಾರಾಂಶ

ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ.  ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​  ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ  ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.

ಹಸು ಖರೀದಿ ವ್ಯವಹಾರ

ನಟ ನೀನಾಸಂ ಅಶ್ವತ್ಥ್​ ಅವರು ಹಾಸನದ ರೋಹಿತ್​ ಎಂಬುವವರಿಂದ ಹಸು ಖರೀದಿ ಮಾಡಿದ್ದರು. ಆಗ 1.5 ಲಕ್ಷ ರೂಪಾಯಿ ಮೌಲ್ಯದ ಚೆಕ್​ ನೀಡಿದ್ದರು. ಆದರೆ ಹಣ ಪಡೆಯಲು ರೋಹಿತ್​ ಅವರು ಬ್ಯಾಂಕ್​ಗೆ ಹೋದಾಗ ಚೆಕ್​ಬೌನ್ಸ್​ ಆಗಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹಾಸನದ ಜೆಎಮ್‌ಎಫ್‌ಸಿ‌ ಕೋರ್ಟ್‌ನಲ್ಲಿ‌ ರೋಹಿತ್​ ಅವರು ಕೇಸ್ ಹಾಕಿದ್ದರು. ಈ ಪ್ರಕರಣದಲ್ಲಿ ನೀನಾಸಂ ಅಶ್ವತ್ಥ್​ ಅವರು ಕೋರ್ಟ್​ಗೆ ಹಾಜರಾಗಿರಲಿಲ್ಲ. ಐದನೇ ಬಾರಿಗೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿತ್ತು.

ನಟ ನಿನಾಸಂ ಅಶ್ವತ್ಥ್ ವಿರುದ್ಧ ಎಫ್‌ಐಆರ್‌ ದಾಖಲು

ನ್ಯಾಯಾಲದ ಮುಂದೆ ಹಾಜರುಪಡಿಸಿದಾಗ ನೀನಾಸಂ ಅಶ್ವತ್ಥ್​ ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇಕಡ 25ರಷ್ಟು ಹಣವನ್ನು ನೀಡಿದ್ದಾರೆ. ಇನ್ನುಳಿದ ಮೊತ್ತ ಪಾವತಿ ಮಾಡಲು ಜಡ್ಜ್​ ಬಳಿ ಸಮಯಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ನೀನಾಸಂ ಅಶ್ವತ್ಥ್ ಅವರಿಗೆ ಜಾಮೀನು ನೀಡಲಾಗಿದೆ. ಅವರನ್ನು ಬಿಡುಗಡೆ ಮಾಡಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!
ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ: ನಟ ಕಿಶೋರ್‌ ಆಕ್ರೋಶ!