
ಪ್ರಿಯಾಂಕ ಉಪೇಂದ್ರ ಈಗ ಸರ್ಕಾರಿ ಶಾಲೆ ಉಳಿಸಲು ಹೊರಟಿದ್ದಾರೆ. ಅವರ ಈ ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಪ್ರಯತ್ನದ ಹೆಸರೇ ‘ಮಿಸ್ ನಂದಿನಿ’. ಗುರುದತ್ತ ಎಸ್ ಆರ್ ನಿರ್ದೇಶನದ ಈ ಸಿನಿಮಾ ಭಾರತದಲ್ಲಿರುವ ಅಷ್ಟೂ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ.
ಈ ಚಿತ್ರದ ಮುಹೂರ್ತ ಬೆಂಗಳೂರಿನ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ನಡೆಯಿತು. ಕನ್ನಡ ಚಿತ್ರರಂಗದ ಲಕ್ಕಿ ಹ್ಯಾಂಡ್ ಎಂದೇ ಕರೆಸಿಕೊಳ್ಳುವ ಕ್ರೇಜಿಸ್ಟಾರ್ ರವಿಚಂದ್ರನ್ ಬಂದು ಕ್ಲಾಪ್ ಮಾಡಿದರು. ಅಪ್ಪಣ್ಣ, ಸಿದ್ಲಿಂಗು ಶ್ರೀಧರ್, ಮೈಸೂರು ಬಾಲಣ್ಣ ಅಭಿನಯಿಸುತ್ತಿರುವ ಈ ಚಿತ್ರದ ಶೂಟಿಂಗ್ ಇದೇ ತಿಂಗಳಾಂತ್ಯಕ್ಕೆ ಶುರುವಾಗಲಿದೆ.
ಒಂದೇ ತಿಂಗಳಲ್ಲಿ ಸಿನಿಮಾ ಮುಗಿಸುವ ಇರಾದೆ ನಿರ್ದೇಶಕರಿಗೆ ಇದೆ. ಸರ್ವೇಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀರೇಶ್ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ. ಆರ್‌ಕೆ ಫಿಲಂಸ್‌ನ ರಾಮ್ ಕೆ. ಈ ಸಿನಿಮಾ ನಿರ್ಮಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.