ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ; ಸಿಎಂ ಜೊತೆ ಮಹತ್ವದ ಚರ್ಚೆ ನಡೆಸಿದ ನಟ

Published : Jul 05, 2026, 03:04 PM IST
DK Shivakumar Rishab Shetty

ಸಾರಾಂಶ

ಇತ್ತಿಚಿಗಷ್ಟೇ ಕರಾವಳಿ, ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿಯವರು ಸಿಎಂ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಕನ್ನಡದ ನಟ-ನಿರ್ದೇಶಕ, ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ (Rishab Shetty) ಅವರು ಇತ್ತಿಚಿಗಷ್ಟೇ ಕರಾವಳಿ, ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ವಿಷಯ ಗೊತ್ತೇ ಇದೆ. ಈ ವೇಳೆ ರಿಷಬ್ ಶೆಟ್ಟಿಯವರು ಕರಾವಳಿ, ಮಲೆನಾಡು ಪ್ರವಾಸೋದ್ಯಮ ನೀತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಜೊತೆ ಚರ್ಚೆ ನಡೆಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಭೇಟಿಯ ವೇಳೆಯಲ್ಲಿ ರಿಷಬ್‌ ಶೆಟ್ಟಿಯವರು ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ರಿಷಬ್ ಶೆಟ್ಟಿ, ಪ್ರವಾಸೋದ್ಯಮ ನೀತಿ ಹಾಗೂ ಜಾಗತಿಕ ಬ್ಯಾಂಡಿಂಗ್ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಕೆಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ದಿಕ್ಕಿನಲ್ಲಿ ರಿಷಬ್ ಶೆಟ್ಟಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ಆಗಿರುವ ಈ ಭೇಟಿ ತುಂಬಾ ಮಹತ್ವ ಪಡೆದುಕೊಂಡಿದೆ. ರಿಷಬ್ ಶೆಟ್ಟಿಯವರ ಜನಪ್ರಿಯತೆ ಮತ್ತು ಜಾಗತಿಕ ಮಟ್ಟದಲ್ಲಿ ಅವರ ಚಿತ್ರಗಳಿಗೆ ದೊರೆತ ಮೆಚ್ಚುಗೆಯಿಂದ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಸ ಗುರುತು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಭೇಟಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ದಿಕ್ಕು ನೀಡುವ ಚರ್ಚೆಯಾಗಿ ಪರಿಗಣಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಲವು ಮಹತ್ವದ ಯೋಜನೆಗಳು ಘೋಷಣೆಯಾಗುವ ಸಾಧ್ಯತೆಯಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅಣ್ಣ-ತಮ್ಮ ಜೋಡಿ.. ಪ್ರಣಮ್‌ ಚಿತ್ರದಲ್ಲಿ ಪ್ರಧಾನ ಪಾತ್ರಕ್ಕೆ ಎಂಟ್ರಿ ಕೊಟ್ಟ ಪ್ರಜ್ವಲ್ ದೇವರಾಜ್!
ಕಾಮಿಡಿಯಿಂದ ಮಾಸ್‌ಗೆ ಶಿಫ್ಟ್ ಆದ ಕೋಮಲ್: ಸಿಗಾರ್ ಹಿಡಿದ 'ರೋಲೆಕ್ಸ್'ನ ರಹಸ್ಯವೇನು?