ಸಾರಥಿ ಸಾರಥ್ಯದಲ್ಲಿ ಹೊಸ ವರ್ಷಕ್ಕೆ ಶಿವರಾಜ್‌ಕುಮಾರ್ ಹೊಸ ಸಿನಿಮಾ ಘೋಷಣೆ!

By Shriram Bhat  |  First Published Dec 31, 2023, 2:32 PM IST

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ. 


ಬಹುಭಾಷಾ ಸಿನಿಮಾ ಘೋಸ್ಟ್ ಬಳಿಕ ನಟ ಶಿವರಾಜ್‌ಕುಮಾರ್ ಅವರು ಇದೀಗ ಹೊಸ ಚಿತ್ರವೊಂನ್ನು ಒಪ್ಪಿಕೊಂಡಿದ್ದಾರೆ. ಯೋಗರಾಜ್ ಭಟ್ಟರ 'ಕರಟಕ ದಮನಕ' ಚಿತ್ರದಲ್ಲಿ ಶಿವಣ್ಣ ಹಾಗೂ ಪ್ರಭುದೇವ ನಟಿಸುತ್ತಿರುವುದು ಗೊತ್ತೇ ಇದೆ. ಮುಂದಿನ ವರ್ಷದ ಪ್ರಾರಂಭದಲ್ಲಿ ಶೂಟಿಂಗ್ ಆಗಲಿರುವ ಹೊಸ ಚಿತ್ರದ ಘೋಷಣೆಯಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. 

ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shiva Rajkumar) ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ (Dinakar Thoogudeepa) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಕಥೆ ವಿಭಿನ್ನವಾಗಿದ್ದು, ನಟ ಶಿವಣ್ಣ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಸದ್ಯ ಬಾಕಿ ಇರುವ ಶೂಟಿಂಗ್ ಮುಗಿಸಿ ಶಿವಣ್ಣ ದಿನಕರ್ ತೂಗುದೀಪ ನಿರ್ದೇಶನದ ಚಿತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 

Tap to resize

Latest Videos

ಡಂಕಿ ನಟಿ ತಾಪ್ಸಿ ಪನ್ನು ನಟ ಶಾರುಖ್ ಖಾನ್ ಬಗ್ಗೆ ಹೀಗೆ ಹೇಳಿದ್ರು; ಊಹಿಸಲೂ ಅಸಾಧ್ಯವಾದ ಮಾತುಗಳು!

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಡಿವೋರ್ಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ ಇಷಾ ಕೊಪ್ಪೀಕರ್; ಇಂದರ್ ಕುಮಾರ್ ನೆನಪು ಮರೆಯಾಗಿಲ್ಲವೇ?

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಮೊದಲ ಬಾರಿಗೆ ನಟ ಶಿವರಾಜ್‌ಕುಮಾರ್ ಅವರಿಗೆ ನಿರ್ದೇಶನ ಮಾಡುತ್ತಿರುವ ದಿನಕರ್ ತೂಗುದೀಪ, ಶಿವಣ್ಣ ಅವರಿಗೆ ಹೊಂದಿಕೆಯಾಗುವಂಥ ಕಥೆ ರೆಡಿಯಾಗಿದೆ ಎಂದಿದ್ದಾರೆ. 'ಸಾರಥಿ'ಯಂಥ ಸೂಪರ್ ಹಿಟ್ ಚಿತ್ರ ಮಾಡಿದ್ದ ದಿನಕರ್ ತೂಗುದೀಪ ಅವರ ಮೇಲೆ ಸ್ಯಾಂಡಲ್‌ವುಡ್ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆಯಂತೂ ಇದ್ದೇ ಇದೆ. 

ವಿಲನ್ ಪಾತ್ರ ಮಾಡಲಾರೆ ಅಂದಿದ್ರೂ ಒಪ್ಕೊಂಡ್ರಾ; ತಲೈವರ್ 171 ಚಿತ್ರಕ್ಕೆ ಸ್ಟಾರ್ ಹೀರೋನೇ ವಿಲನ್ನಾ!

click me!