ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏ.1ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಶಿವಣ್ಣ ದಾಖಲಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಪತ್ನಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಶಿವಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಾಡುತ್ತಿದ್ದರು. ಶಿವಮೊಗ್ಗ ಸುತ್ತಮುತ್ತ ಪ್ರಚಾರದ ಮೊದಲ ಹಂತ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟನಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಜನರಲ್ ಚೆಕಪ್‌ಗಾಗಿ ಬಂದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅಷ್ಟೇ ಅಲ್ಲ, ಸಂಜೆ ವೇಳೆಗೆ ಶಿವರಾಜ್‌ಕುಮಾರ್ ಆಸ್ಪತ್ರೆಯಿಂದ ನಿರ್ಗಮಿಸುವ ಸಾಧ್ಯತೆ ಇದೆ.
ಈ ವರ್ಷ ರಶ್ಮಿಕಾ ಮಂದಣ್ಣ ಹಸೆಮಣೆ ಏರೋದು ಹೌದಾ?