ಮಿಲ್ಕಿ ಬ್ಯೂಟಿ ತಮನ್ನಾ ಜೊತೆ 'ರೇಲ್ವೇ ಸ್ಟೇಷನ್'ನಲ್ಲಿ ಕಂಡ ಕನ್ನಡದ ನಟ ವಸಿಷ್ಠ ಸಿಂಹ

Published : Mar 04, 2024, 05:07 PM ISTUpdated : Mar 04, 2024, 05:11 PM IST
ಮಿಲ್ಕಿ ಬ್ಯೂಟಿ ತಮನ್ನಾ ಜೊತೆ 'ರೇಲ್ವೇ ಸ್ಟೇಷನ್'ನಲ್ಲಿ ಕಂಡ ಕನ್ನಡದ ನಟ ವಸಿಷ್ಠ ಸಿಂಹ

ಸಾರಾಂಶ

2022ರಲ್ಲಿ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದ 'ಓದೆಲಾ ರೈಲ್ವೆ ಸ್ಟೇಷನ್' ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಈ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಪಾತ್ರದಲ್ಲಿ ಅಭಿನಯ ಮಾಡಿದ್ದರು. ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಸ್ಯಾಂಡಲ್‌ವುಡ್‌ನ ಕಂಚಿನ ಕಂಠದ ನಟ ವಸಿಷ್ಠ ಸಿಂಹ (Vasista Simha) ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜತೆಗೆ ಪರಭಾಷೆಯಲ್ಲಿಯೂ ಮಿಂಚುತ್ತಿದ್ದಾರೆ. ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ 'ಓದೆಲಾ ರೈಲ್ವೆ ಸ್ಟೇಷನ್' ಸಿನಿಮಾ ಮೂಲಕ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜೊತೆಗೆ ಕಲಾ ಸೇವೆಯನ್ನೂ ಮುಂದುವರೆಸಲಿದ್ದಾರೆ. 

2022ರಲ್ಲಿ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದ 'ಓದೆಲಾ ರೈಲ್ವೆ ಸ್ಟೇಷನ್' ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಈ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಪಾತ್ರದಲ್ಲಿ ಅಭಿನಯ ಮಾಡಿದ್ದರು. ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಕಾಣಿಸಿದ್ದಾರೆ. ಇದೀಗ 'ಓದೆಲಾ ರೈಲ್ವೆ ಸ್ಟೇಷನ್‌ ಪಾರ್ಟ್ 2' ತಯಾರಾಗುತ್ತಿದೆ. 

ಭಾರತಿಗಿಂತ ಮೊದಲು ನಟ ವಿಷ್ಣುವರ್ಧನ್ ಬಾಳಲ್ಲಿ ಆ ಹುಡುಗಿ ಬಂದಿದ್ದರು; ಆದ್ರೆ ಯಾಕೆ ಮದುವೆಯಾಗಲಿಲ್ಲ?

ಅದರ ಭಾಗವಾಗಿ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ಮಿಲ್ಕ್​ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia), ವಸಿಷ್ಠ ಸಿಂಹ ಫೋಟೋಗೆ ಪೋಸ್ ಕೊಟ್ಟಿದ್ದು, ಇದರಲ್ಲಿ ಹರಿಪ್ರಿಯ ಕೂಡ ಇದ್ದಾರೆ. ಓದೆಲಾ ರೈಲ್ವೆ ಸ್ಟೇಷನ್ ಸೀಕ್ವೆಲ್​ನ ಶೂಟಿಂಗ್ ನಿನ್ನೆಯಿಂದಲೇ ಪ್ರಾರಂಭವಾಗಿದೆ. ಓದೆಲಾ ರೈಲ್ವೆ ಸ್ಟೇಷನ್ ಮೊದಲ ಭಾಗದಲ್ಲಿ ನಟಿ ಹೆಬಾ ಪಟೇಲ್ ಜೊತೆ ವಸಿಷ್ಠ ಸಿಂಹ ಅಭಿನಯಿಸಿದ್ದರು. ಆದರೆ ಎರಡನೇ ಭಾಗದಲ್ಲಿ  ಮಿಲ್ಕ್​​ ಬ್ಯೂಟಿ ತಮನ್ನಾ ಭಾಟಿಯಾ ಜೊತೆ ವಸಿಷ್ಠ ಸಿಂಹ ಹೆಜ್ಜೆ ಹಾಕಲಿದ್ದಾರೆ. ಹಾಗಂತ ಹೆಬಾ ಪಟೇಲ್ ಇಲ್ಲ ಅಂತಲ್ಲ, ಅವರು ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. 

ಹೆಂಡತಿ-ಮಗನ ಮುಂದೆ ಯಾಕೆ 'ಭಯ'ದ ಬಗ್ಗೆ ಮಾತನಾಡಿದ್ರು ನಟ ವಿಜಯ್ ಸೇತುಪತಿ?

ಮಧು ಕ್ರಿಯೇಷನ್ಸ್ ಮತ್ತು ಸಂಪತ್ ನಂದಿ ಟೀಂ ವರ್ಕ್ ಬ್ಯಾನರ್ ನಡಿ ಡಿ ಮಧು ಚಿತ್ರ ನಿರ್ಮಾಣ ಮಾಡುತ್ತಿದ್ದು, ಅಶೋಕ ತೇಜ ಓದೆಲಾ ರೈಲ್ವೆ ಸ್ಟೇಷನ್ ಸೀಕ್ವೆಲ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೌಂದರ್ ರಾಜನ್ ಎಸ್ ಛಾಯಾಗ್ರಹಣ, ಕಾಂತಾರ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.

ಮಹೇಶ್ ಬಾಬು ಮಗಳು ಸಿತಾರಾ ಪ್ರಶ್ನೆಗೆ ನಟಿ ರಶ್ಮಿಕಾ ಮಂದಣ್ಣ ಶಾಕ್ ಆಗಿ ಗಲಿಬಿಲಿಗೊಂಡ್ರಾ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?