ಹೊಸ ಹೆಜ್ಜೆ ಹಾಕಲಿರುವ 'ಪ್ರಾಣಸಖಿ' ಭಾವನಾ; ಸಾಥ್ ಕೊಡ್ತಾರಾ ಸಿದ್ದರಾಮಯ್ಯ-ಡಿಕೆಶಿ, ನಟ ದರ್ಶನ್‌!

Published : Jan 24, 2024, 05:20 PM ISTUpdated : Jan 24, 2024, 05:23 PM IST
ಹೊಸ ಹೆಜ್ಜೆ ಹಾಕಲಿರುವ 'ಪ್ರಾಣಸಖಿ' ಭಾವನಾ; ಸಾಥ್ ಕೊಡ್ತಾರಾ ಸಿದ್ದರಾಮಯ್ಯ-ಡಿಕೆಶಿ, ನಟ ದರ್ಶನ್‌!

ಸಾರಾಂಶ

ತಾವು ಚಿತ್ರರಂಗಕ್ಕೆ ಬರಲು ಕಾರಣರಾದವರನ್ನು ನೆನೆದು ಭಾವುಕರಾಗಿ ಮಾತು ಆರಂಭಿಸಿದ ಭಾವನ, ಹಿಂದೆ ತಮ್ಮ 'ಹೋಮ್ ಟೌನ್' ಬ್ಯಾನರ್ ನಲ್ಲಿ 'ನಿರುತ್ತರ' ಚಿತ್ರವನ್ನು ನಿರ್ಮಿಸಿದ್ದನ್ನು ನೆನಪಿಸಿಕೊಂಡರು. 

'ಚಂದ್ರಮುಖಿ ಪ್ರಾಣಸಖಿ' ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ (Bhavana Ramanna) ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ 'ಹಂಸಗೀತೆ'ಯನ್ನು  ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.

ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ತಾವು ಚಿತ್ರರಂಗಕ್ಕೆ ಬರಲು ಕಾರಣರಾದವರನ್ನು ನೆನೆದು ಭಾವುಕರಾಗಿ ಮಾತು ಆರಂಭಿಸಿದ ಭಾವನ, ಹಿಂದೆ ತಮ್ಮ 'ಹೋಮ್ ಟೌನ್' ಬ್ಯಾನರ್ ನಲ್ಲಿ 'ನಿರುತ್ತರ' ಚಿತ್ರವನ್ನು ನಿರ್ಮಿಸಿದ್ದನ್ನು ನೆನಪಿಸಿಕೊಂಡರು. ಮುಂದೆ ಕೂಡ ಚಿತ್ರ ನಿರ್ಮಿಸುವ ಆಸೆ ಇದೆ ಎಂದರು. 'ಹೂವು ಫೌಂಡೇಶನ್' ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವದಾಗಿಯೂ ಭಾವನ ಹೇಳಿದರು. 

ಮಾಜಿ ಭುವನ ಸುಂದರಿಗೆ ಮ್ಯಾಸಿವ್ ಹಾರ್ಟ್ ಅಟ್ಯಾಕ್; ಹೃದಯದಿಂದ ಬಂದವು ಗೋಲ್ಡನ್ ಟಿಪ್ಸ್!

ನಂತರ 'ಹಂಸಗೀತೆ' ನೃತ್ಯ ಕಾವ್ಯದ ಬಗ್ಗೆ ಭಾವನ ಮಾಹಿತಿ ನೀಡಿದರು.  ತ.ರಾ.ಸು ಅವರ 'ಹಂಸಗೀತೆ' ಯ ಬಗ್ಗೆ ಇವತ್ತಿನ ಪೀಳಿಗೆಗೆ ತಿಳಿಸಿಕೊಡಬೇಕು. ಹಾಗಾಗಿ ಈ ಪ್ರಯತ್ನ ಮಾಡುತ್ತಿದ್ದೇನೆ. ಜನವರಿ 30ರ ಸಂಜೆ 6.30ಕ್ಕೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವೀಣಾ ಮೂರ್ತಿ ಅವರ ನೃತ್ಯ ನಿರ್ದೇಶನದಲ್ಲಿ ಈ ನೃತ್ಯಕಾವ್ಯ ಮೂಡಿಬರಲಿದೆ.   

ದೇವತೆಯಂಥ ನಟಿ ಸುಧಾರಾಣಿ ಬಾಳಲ್ಲಿ ಯಾಕೆ ಬರಬೇಕಿತ್ತು ಅಂಥ ಭಯಾನಕ ಬಿರುಗಾಳಿ!

ಸ್ವತಃ ನಟಿ ಭಾವನಾರೇ ಒಂದುವರೆ ಗಂಟೆಗಳ ಕಾಲ ನಡೆಸಿಕೊಡುವ ಏಕ ವ್ಯಕ್ತಿ ಪ್ರದರ್ಶನದ ಈ ನೃತ್ಯ ಕಾವ್ಯದಲ್ಲಿ ಹಾಡು, ನೃತ್ಯ ಹಾಗೂ ಸಂಭಾಷಣೆಗಳು ಇರುತ್ತವೆ.  ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಮಂತ್ರಿಗಳಾದ ಡಾ ಜಿ ಪರಮೇಶ್ವರ್, ಎಚ್ ಸಿ ಮಹದೇವಪ್ಪ ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.

ದುಬೈನಿಂದ ಬೆಂಗಳೂರಿಗೆ ಬಂದ 'ಕೃಷ್ಣ ಸುಂದರಿ' ಮಾಲಾಶ್ರೀ ಮೀಟ್ ಆಗಿದ್ರು; ಮೂಡುತ್ತಿದ್ಯಾ 'ಹೊಸ ಬೆಳಕು'..!?

ಚಿತ್ರರಂಗದಿಂದ ಗುರುಗಳಾದ ಡಾ.ಬರಗೂರು ರಾಮಚಂದ್ರಪ್ಪ, ನಟ ದರ್ಶನ್ (Actor Darshan)ಹಾಗೂ ತಾರಾ ಅನುರಾಧ (Tara anuradha)ಅವರನ್ನೂ ಆಹ್ವಾನಿಸಿರುವುದಾಗಿ ಭಾವನಾ ರಾಮಣ್ಣ ತಿಳಿಸಿದ್ದಾರೆ. ಇದು ಮೊದಲ ಪ್ರಯತ್ನ. ಮುಂದೆ ಬೇರೆಬೇರೆ ಕಡೆಗಳಲ್ಲೂ ಈ ನೃತ್ಯಕಾವ್ಯವನ್ನು ಮಾಡುವ ಯೋಜನೆಯಿದೆ ಎನ್ನುತ್ತಾರೆ ಭಾವನಾ ರಾಮಣ್ಣ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕಳ್ಳಭಟ್ಟಿ ದಂಧೆ ನಡುವೆ ಅರಳುವ ಪ್ರೀತಿ: ಇಲ್ಲಿದೆ 'ಧರ್ಮಂ' ಸಿನಿಮಾ ವಿಮರ್ಶೆ
ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ