'ವೋಟ್ ನಮ್ಮ ಪವರ್' ರ್‍ಯಾಪ್ ಸಾಂಗ್ ಮೂಲಕ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು!

Published : Apr 25, 2024, 12:07 PM ISTUpdated : Apr 25, 2024, 12:11 PM IST
'ವೋಟ್ ನಮ್ಮ ಪವರ್' ರ್‍ಯಾಪ್ ಸಾಂಗ್ ಮೂಲಕ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು!

ಸಾರಾಂಶ

'ಮತದಾನದ ದಿನ‌ ರಜೆ ಇದೆ ಎಂದು  ಮನೆಯಲ್ಲಿ ಕೂರುವುದು, ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ' ಎನ್ನುವುದು 'ಬಿಗ್ ಬಾಸ್' ಖ್ಯಾತಿಯ ನೀತು ವನಜಾಕ್ಷಿ ಅವರ ಮಾತು. ಪ್ರಸ್ತುತ ಅವರೀಗ ಮತದಾನ ಜಾಗೃತಿ ರಾಯಭಾರಿಯೂ ಹೌದು.

2024ರ ಲೋಕಸಭೆ ಚುನಾವಣೆ ಹೊತ್ತಿನಲ್ಲಿ  ‘ಮಾಧ್ಯಮ ಅನೇಕ’ ಸಂಸ್ಥೆ 'Vote ನಮ್ಮ Power' Rap ಸಾಂಗ್‌ ಪ್ರಸ್ತುತಪಡಿಸುತ್ತಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ ಚುನಾವಣೆಯ ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳನ್ನು ಪ್ರತಿಪಾದಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನದೊಂದಿಗೆ ಭವ್ಯ ಭಾರತದ ಭವಿಷ್ಯ ನಿರ್ಧರಿಸುವುದು ನಮ್ಮೆಲ್ಲರ ಕೈಲಿದೆ. 

ಈ ಪ್ರಜಾಪ್ರಭುತ್ವದ ಹಬ್ಬವನ್ನು ಒಂದು ಸಂದೇಶಭರಿತ ಚೆಂದದ ರ್‍ಯಾಪ್ (Rap Song)ಮೂಲಕ ಸೆಲೆಬ್ರೇಟ್‌ ಮಾಡುವ ಆಶಯ ಹಾಗೂ ಆ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನಕ್ಕೆ ಅವರನ್ನು ಪ್ರೇರೇಪಿಸುವುದು ಉದ್ದೇಶ. ಈ ಮೂಲಕ ದೇಶದ ಉಜ್ವಲ ಭವಿಷ್ಯದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ ಇರಲಿ ಎನ್ನುವ ಸದ್ದುದ್ದೇಶ 'ಮಾಧ್ಯಮ ಅನೇಕ' ಸಂಸ್ಥೆಯದು. ಆ ನಿಟ್ಟಿನಲ್ಲಿ 'vote ನಮ್ಮ power'ಹಾಡು ಮೂಡಿಬಂದಿದೆ. ನಿನ್ನೆ ಈ ರ್‍ಯಾಪ್ ಸಾಂಗ್ ಬಿಡುಗಡೆ ಮತ್ತು ಪತ್ರಿಕಾಗೋಷ್ಠಿ ನಡೆಯಿತು.

ಮಾಲಾಶ್ರೀ 'ಮಾರಕಾಸ್ತ್ರ' ಮತ್ತೆ ಬಿಡುಗಡೆ; ತೆಲುಗಿನಲ್ಲೂ ಕಮಾಲ್ ಮಾಡಲಿದೆ 'ಮಾರಣಾಯಧಂ'..!

'ಮೊದಲ ಬಾರಿಗೆ ಮತದಾನ ಮಾಡುವವರಿಗೆ ಈ ರ್‍ಯಾಪ್ ಸಾಂಗ್ ಬಹಳ ಇಷ್ಟವಾಗಬಹುದು. ಯುವಜನತೆ ಹೆಚ್ಚಾಗಿ ಮತದಾನ ಮಾಡಬೇಕು' ಎಂದರು ಹಾಡಿಗೆ ದನಿಯಾಗಿರುವ ನಟ ರಾಕೇಶ್ ಅಡಿಗ. 'ಮತದಾನದ ಬಗ್ಗೆ ಸಂವಿದಾನದಲ್ಲಿರುವ ಕೆಲವು ವಿಷಯಗಳನ್ನು ತೆಗೆದುಕೊಂಡು ಈ ಹಾಡನ್ನು ಮಾಡಿದ್ದೇವೆ‌. ಈಗಿನ ಯುವಜನತೆ ಹೆಚ್ಚಾಗಿ ರ್‍ಯಾಪ್ ಸಾಂಗ್ ಗೆ ಅಭಿಮಾನಿಗಳು. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ' ಎಂದು ನಿರ್ದೇಶಕ ರಾಜ್ ಗೋಪಿ ತಿಳಿಸಿದರು.

ನೀವು ಕ್ರಿಕೆಟ್ ಪ್ರೇಮಿನಾ? ಕ್ರಿಕೆಟ್ ಆಡ್ಬೇಕಾ? ಇಲ್ಲಿದೆ ಅವಕಾಶ: ಟಿಪಿಎಲ್ ಆಯ್ತು ಈಗ IPT12 ಶುರು!

'ಮತದಾನದ ದಿನ‌ ರಜೆ ಇದೆ ಎಂದು  ಮನೆಯಲ್ಲಿ ಕೂರುವುದು, ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ' ಎನ್ನುವುದು 'ಬಿಗ್ ಬಾಸ್' ಖ್ಯಾತಿಯ ನೀತು ವನಜಾಕ್ಷಿ ಅವರ ಮಾತು. ಪ್ರಸ್ತುತ ಅವರೀಗ ಮತದಾನ ಜಾಗೃತಿ ರಾಯಭಾರಿಯೂ ಹೌದು.

ಹಾಡಿಗೆ ಹೆಜ್ಜೆ ಹಾಕಿರುವ ನಟಿ  ತೇಜಸ್ವಿನಿ ಶರ್ಮ, ನಟ ಸ್ಮೈಲ್ ಗುರು ರಕ್ಷಿತ್ ಹಾಗೂ ನೃತ್ಯ ನಿರ್ದೇಶನ ಮಾಡಿರುವ ನಟಿ ಅನನ್ಯ ಅಮರ್ ಮತದಾನದ ಮಹತ್ವವನ್ನು ತಿಳಿಸಿ, ಅವಕಾಶ ಮಾಡಿಕೊಟ್ಟ 'ಮಾಧ್ಯಮ ಅನೇಕ' ಸಂಸ್ಥೆಗೆ ಧನ್ಯವಾದ ತಿಳಿಸಿದರು. ಕಾರ್ಯಕ್ರಮದಲ್ಲಿ 'vote ನಮ್ಮ power' ಪ್ರಸ್ತುತಿಗೆ ಮುನ್ನ 'ಮಾಧ್ಯಮ ಅನೇಕ' ಸಂಸ್ಥೆಯ ಡಾ ನಮನ B N ಅವರು ಈ ರ್‍ಯಾಪ್ ಸಾಂಗ್ ನ ಆಶಯ -  ಉದ್ದೇಶದ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು.

ನಮ್ಮ ಮನೆಯಲ್ಲಿ ಅವರವರ ಕೋಣೆಯಲ್ಲಿ ಕುಳಿತು ಊಟ ಮಾಡುವ ಪದ್ಧತಿಯಿಲ್ಲ; ರಾಘವೇಂದ್ರ ರಾಜ್‌ಕುಮಾರ್

'ಮಾಧ್ಯಮ ಅನೇಕ' ಸಂಸ್ಥೆಯ 'ಅನೇಕ ಆಡಿಯೋ' ಮೂಲಕ ಈ ರ್‍ಯಾಪ್ ಸಾಂಗ್ ಬಿಡುಗಡೆಯಾಗಿದೆ. ಸಂಸ್ಥೆಯ ಮುಖ್ಯಸ್ಥರಾದ ಅರವಿಂದ್ ಮೋತಿ ಈ ಯೋಜನೆಯ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಅನು ಮೋತಿ ಬರೆದು, ಕಾರ್ತಿಕ್ ಶರ್ಮ ಸಂಗೀತ ನೀಡಿರುವ ಈ ಹಾಡನ್ನು ರಾಕೇಶ್ ಅಡಿಗ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಛಾಯಾಗ್ರಾಹಣ ಗಿರೀಶ್ ಅವರದು. ಪ್ರತಿಭಾವಂತ ಯುವ ತಾರೆಯರಾದ ತೇಜಸ್ವಿನಿ ಶರ್ಮ, smile guru ರಕ್ಷಿತ್‌, ಬೃಂದಾ ಪ್ರಭಾಕರ್‌, ಅಭಯ್‌ ಮತ್ತು ಅನನ್ಯ ಅಮರ್‌ ತಮ್ಮ ಎನೆರ್ಜೆಟಿಕ್ ಡಾನ್ಸ್‌ಗಳೊಂದಿಗೆ ಹಾಡನ್ನು ಪವರ್‌ಪುಲ್‌ ಆಗಿ ಪ್ರಸ್ತುತಪಡಿಸಿದ್ದಾರೆ. 

ಡಾ ರಾಜ್‌ಕುಮಾರ್‌ ಹುಟ್ಟುಹಬ್ಬದ ಸಂಭ್ರಮದಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದೇನು?

ಇವರಷ್ಟೇ ಅಲ್ಲದೆ ಟೀವಿ - ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳು ಹುಕ್ ಸ್ಟೆಪ್ಸ್‌ಗೆ ಹೆಜ್ಜೆ ಹಾಕುತ್ತಾ ಹಾಡಿನ ಆಕರ್ಷಣೆ ಹೆಚ್ಚಿಸಿದ್ದಾರೆ. ನವೀನ್‌ ಶಂಕರ್‌, ನೀತೂ ವನಜಾಕ್ಷಿ, ಕಾರ್ತೀಕ್‌ ಮಹೇಶ್‌, ತನಿಶಾ ಕುಪ್ಪಂಡ, ಸಾನಿಯಾ ಅಯ್ಯರ್‌, ಸಾಗರ್‌ ಪುರಾಣಿಕ್‌, ನಿರಂಜನ್‌ ದೇಶಪಾಂಡೆ, ಚಂದನಾ ಅನಂತಕೃಷ್ಣ ಮುಂತಾದವರು ರ್‍ಯಾಪ್ ಸಾಂಗ್‌ನಲ್ಲಿ ಅತಿಥಿಗಳಾಗಿ ಕಾಣಿಸಿಕೊಂಡು ಸದಾಶಯದ ಈ ಯೋಜನೆಗೆ ಕೈಜೋಡಿಸಿದ್ದಾರೆ.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಡಾ. ರಾಜ್‌ಕುಮಾರ್‌ ತಬ್ಬಿ, ಮುತ್ತಿಟ್ಟಿದ್ದೇಕೆ ಎಂಜಿಆರ್?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!
ಅಂದು ಕನ್ನಡಿಗರ ಕೆಣಕಿದ್ದ ಕರಾವಳಿ ಹುಡುಗಿ ಇಂದು ಮನೆಮಗಳು ಆಗಿದ್ದು ಹೇಗೆ? ಸೀಕ್ರೆಟ್ ಸ್ಟ್ರಾಟಜಿ ಏನು?