
ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸಂಭಾಷಣೆಕಾರ ಗುರು ಕಶ್ಯಪ್ (45) ಸೋಮವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರು ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.
ಸೋಮವಾರ ರಾತ್ರಿ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಗುರು ಕಶ್ಯಪ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರು ಎಳೆದಿದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಹೆಡ್‌ಬುಷ್ ಚಿತ್ರದಲ್ಲಿ ರವಿಚಂದ್ರನ್
ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ ‘ಪುಷ್ಪಕ ವಿಮಾನ’ ಹಾಗೂ ಬಿಡುಗಡೆ ಆಗಬೇಕಿರುವ ‘100’, ಪ್ರಿಯಾಂಕಾ ಉಪೇಂದ್ರ ಅಭಿನಯದ ‘ದೇವಕಿ’ ಮುಂತಾದ ಸಿನಿಮಾಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.
ಗುರು ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ‘ನಾನು ಕಂಡ ಅತ್ಯಂತ ಪ್ರತಿಭಾವಂತರಲ್ಲಿ ಗುರು ಕಶ್ಯಪ್ ಕೂಡ ಒಬ್ಬರು. ನನ್ನ ಪುಷ್ಪಕ ವಿಮಾನ, ಸುಂದರಾಂಗ ಜಾಣ ಹಾಗೂ 100 ಚಿತ್ರಗಳ ಸಂಭಾಷಣೆಗಾರ ಇವರು. ಸಂಜೆ ನಗುತ್ತಾ ಚೆನ್ನಾಗಿದ್ದವರು ರಾತ್ರಿ ಜೀವ ತೊರದಿದ್ದಾರೆ. ಒಬ್ಬ ಒಳ್ಳೆಯ ವ್ಯಕ್ತಿ, ಶ್ರೇಷ್ಠ ಬರಹಗಾರನನ್ನು ಕಳೆದು ಕೊಂಡಿದ್ದೇವೆ’ ಎಂದು ರಮೇಶ್ ಅರವಿಂದ್ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.