ಪ್ರೇಮ ಕಥನದ ಚಿತ್ರಗಳೆಂದರೇನೇ ಯಾವತ್ತಿಗೂ ಮುಸುಕಾಗದಂಥಾ ಮೋಹವೊಂದು ಪ್ರೇಕ್ಷಕರಲ್ಲಿರುತ್ತದೆ. ಕಿರುತೆರೆಯಲ್ಲಿ ಒಂದಷ್ಟು ಹೆಸರು ಮಾಡಿರುವ ಅಭಿದಾಸ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಶರಣ್ಯಾ ಶೆಟ್ಟಿ ನಾಯಕಿಯಾಗಿ ಜೊತೆಯಾಗಿದ್ದಾರೆ.
ವೆಂಕಟ್ ಭಾರದ್ವಾಜ್ ನಿರ್ದೇಶನದ ನಗುವಿನ ಹೂಗಳ ಮೇಲೆ ಚಿತ್ರ ಇದೇ ಫೆಬ್ರವರಿ ತಿಂಗಳ 9ರಂದು ತೆರೆಗಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ, ಒಟ್ಟಾರೆ ಕಥೆಯ ಒಂದಷ್ಟು ಸುಳಿವುಗಳ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಈ ಸಿನಿಮಾ ಟ್ರೈಲರ್ ಅನ್ನು ಇಂದು ಖ್ಯಾತ ನಿರ್ದೇಶಕ ಎ ಹರ್ಷ ಬಿಡುಗಡೆಗೊಳಿಸಿದ್ದಾರೆ.
ಎ ಹರ್ಷ ಅನಾವರಣಗೊಳಿಸಿರುವ ಈ ಟ್ರೈಲರ್ ಜೀ ಮ್ಯೂಸಿಕ್ ಮೂಲಕ ಪ್ರೇಕ್ಷಕರನ್ನು ತಲುಪಿದೆ. ಈಗಾಲೇ ಒಂದಷ್ಟು ಭಿನ್ನ ಸಿನಿಮಾಗಳ ಮೂಲಕ ನಿರ್ದೇಶಕರಾಗಿ ನೆಲೆ ಕಂಡುಕೊಂಡಿರುವವರು ವೆಂಕಟ್ ಭಾರದ್ವಾಜ್. ಅವರೀಗ ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ ಪರಿಶುದ್ಧವಾದ ಪ್ರೇಮಕಥಾನಕದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ.
ಮೊದಲ ಭೇಟಿಯಲ್ಲಿ ಪುನೀತ್ ರಾಜ್‌ಕುಮಾರ್ ಏನ್ ಮಾಡಿದ್ರು ಅಂತ ಹೇಳಿದ್ರು ಸಾಯಿ ಪಲ್ಲವಿ!
ಪ್ರೇಮ ಕಥನದ ಚಿತ್ರಗಳೆಂದರೇನೇ ಯಾವತ್ತಿಗೂ ಮುಸುಕಾಗದಂಥಾ ಮೋಹವೊಂದು ಪ್ರೇಕ್ಷಕರಲ್ಲಿರುತ್ತದೆ. ಅದನ್ನು ಮತ್ತಷ್ಟು ಮುದಗೊಳಿಸುವ ಲಕ್ಷಣಗಳಿರೋ ಈ ಸಿನಿಮಾ ಟ್ರೈಲರ್, ಒಂದಿಡೀ ಚಿತ್ರದ ಸಾರವನ್ನು ಪ್ರೇಕ್ಷಕರ ಮುಂದಿಟ್ಟಿದೆ. ಕಿರುತೆರೆಯಲ್ಲಿ ಒಂದಷ್ಟು ಹೆಸರು ಮಾಡಿರುವ ಅಭಿದಾಸ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಶರಣ್ಯಾ ಶೆಟ್ಟಿ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಲ್ಲ ವಯೋಮಾನದವರನ್ನೂ ತಾಕುವ ಗುಣ ಹೊಂದಿರುವ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧಾ ಮೋಹನ್ ನಿರ್ಮಾಣ ಮಾಡಿದ್ದಾರೆ.
ಬೇರೆ ಭಾಷೆ ಸಿನಿಮಾದಲ್ಲೂ ನಟಿಸಿದ್ರು ಡಾ ರಾಜ್‌ಕುಮಾರ್; ಬಳಿಕ ಮತ್ತೆಂದೂ ನಟಿಸಲ್ಲ ಅಂದ್ಬಿಟ್ರು!
ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ. ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಪ್ರಮೋದ್ ಭಾರತೀಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ ನಿರ್ದೇಶನ ಮತ್ತು ಚಂದನ್ ಪಿ ಸಂಕಲನ ಈ ಚಿತ್ರಕ್ಕಿದೆ.