ಶಿವಣ್ಣ ಜತೆ ಸಿನಿಮಾ ಮಾಡಲು ಸಜ್ಜಾಗಿ ಬಂದ್ರು ಹೇಮಂತ್‌ ರಾವ್; ವೈಶಾಖ್ ಗೌಡ ಕೊಟ್ರು ಗ್ರೀನ್ ಸಿಗ್ನಲ್!

Published : Feb 02, 2024, 03:40 PM IST
ಶಿವಣ್ಣ ಜತೆ ಸಿನಿಮಾ ಮಾಡಲು ಸಜ್ಜಾಗಿ ಬಂದ್ರು ಹೇಮಂತ್‌ ರಾವ್; ವೈಶಾಖ್ ಗೌಡ ಕೊಟ್ರು ಗ್ರೀನ್ ಸಿಗ್ನಲ್!

ಸಾರಾಂಶ

ಶಿವಣ್ಣನಿಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳ್ತಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಹರಿದಾಡ್ತಿತ್ತು. ಈ ಬಗ್ಗೆ ಇದೀಗ ಚಿತ್ರತಂಡವೇ ಅಧಿಕೃತ ಮುದ್ರೆ ಒತ್ತಿದೆ. ದೊಡ್ಮನೆ ದೊರೆಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ.

ಪ್ರಯೋಗಾತ್ಮಕ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತಂದು ನಿಲ್ಲಿಸುವ ನಿರ್ದೇಶಕರ ಸಾಲಿನಲ್ಲಿ ಪ್ರಮುಖರು ಹೇಮಂತ್ ಎಂ ರಾವ್. ಮನು ಸುರಭಿ ಹಾಗೂ ಪ್ರಿಯಾಳ ಪ್ರೇಮಕಥೆ ಹೇಳಿ ಗೆದ್ದಿದ್ದ 'ಸಪ್ತ ಸಾಗರದಾಚೆ ಎಲ್ಲೋ' ಸಾರಥಿ ಹೇಮಂತ್ ಈಗ ಹ್ಯಾಟ್ರಿಕ್ ಹೀರೋ ಜೊತೆ ಕೈ ಜೋಡಿಸಿದ್ದಾರೆ.  'ಗೋಧಿ ಬಣ್ಣ ಸಾಧಾರಣ ಮೈಕಟ್ಟು', 'ಕವಲುದಾರಿ' ಹಾಗೂ ಇತ್ತೀಚೆಗೆ  'ಸಪ್ತ ಸಾಗರದಾಚೆ ಎಲ್ಲೋ' ಮೂಲಕ ಹೊಸ ಅಲೆ ಸೃಷ್ಟಿಸಿರುವ ಹೇಮಂತ್‌ ರಾವ್ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

ಶಿವಣ್ಣನಿಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳ್ತಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಹರಿದಾಡ್ತಿತ್ತು. ಈ ಬಗ್ಗೆ ಇದೀಗ ಚಿತ್ರತಂಡವೇ ಅಧಿಕೃತ ಮುದ್ರೆ ಒತ್ತಿದೆ. ದೊಡ್ಮನೆ ದೊರೆಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಗೌಡ ಈ ಸಿನಿಮಾಗೆ ಹಣ ಹಾಕುತ್ತಿದ್ದಾರೆ. ತಮ್ಮದೇ ವೈಶಾಖ್ ಜೆ ಫಿಲಂಸ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಸಂಯುಕ್ತ ಹೆಗಡೆ 'ಕ್ರೀಮ್‌'ಗಾಗಿ ಜೀವವನ್ನೇ ಕೊಟ್ಬಿಟ್ಟಿದಾರೆ, ಅವರಿನ್ನೂ ಎತ್ತರಕ್ಕೆ ಹೋಗ್ತಾರೆ; ಅಗ್ನಿ ಶ್ರೀಧರ್

ಕಳೆದ ಆರು ತಿಂಗಳಿಂದ ಈ ಪ್ರಾಜೆಕ್ಟ್‌ ಬಗ್ಗೆ ಶಿವಣ್ಣ ಜೊತೆ ಚರ್ಚೆ ನಡೆಸಲಾಗುತ್ತಿದ್ದು, ಇದೀಗ ಹ್ಯಾಟ್ರಿಕ್ ಹೀರೋ ಹೇಮಂತ್ ರಾವ್ ನಿರ್ದೇಶನದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೇಮಂತ್ ರಾವ್ ನಿರ್ದೇಶನದ  ಸಿನಿಮಾಗಳ ಪೈಕಿ ಈ ಪ್ರಾಜೆಕ್ಟ್ ಬಹಳ ವಿಭಿನ್ನವಾಗಿದ್ದು, ಹಿಂದೆಂದೂ ನೋಡದ ಶಿವಣ್ಣ ಅವರನ್ನು ಈ ಚಿತ್ರದ ಮೂಲಕ ತೋರಿಸಲು ಅವರು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಶಂಕರ್‌ನಾಗ್ ಜತೆ ಡ್ಯೂಯೆಟ್ ಹಾಡಿದ್ದ ಗೀತಾ ನಟಿ ಈಗೆಲ್ಲಿದ್ದಾರೆ, ಏನ್ ಮಾಡ್ತಿದಾರೆ; ಅಕ್ಕ ನಿಮ್ಗೆಲ್ಲಾ ಗೊತ್ತಲ್ವಾ..!?

ಶಿವಣ್ಣನ ಅಪ್ಪಟ ಅಭಿಮಾನಿಯಾಗಿರುವ ನಿರ್ಮಾಪಕ ವೈಶಾಕ್ ತಮ್ಮ ಸಿನಿಮಾ ಜರ್ನಿಯನ್ನು ಶಿವಣ್ಣ ಅವರ ಜೊತೆ ಆರಂಭ ಮಾಡುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರದಲ್ಲೇ ಉಳಿದ ಸ್ಟಾರ್ ಕಾಸ್ಟ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.

ಸಿಂಪಲ್ ಸುನಿ-ವಿನಯ್ ರಾಜ್ ಜೋಡಿಗೆ ಸಾಥ್ ಕೊಟ್ಟ ರಮ್ಯಾ; ಸೂಫಿ ಶೈಲಿ ಗೀತೆಯ ಝಲಕ್ ಮೆರಗು!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!
ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep