KN Mohan Kumar Passes Away: ಸ್ಯಾಂಡಲ್‌ವುಡ್ ನಿರ್ದೇಶಕ ಕೆ.ಎನ್‌.ಮೋಹನ್‌ ಕುಮಾರ್‌ ವಿಧಿವಶ

Published : May 24, 2022, 03:00 AM IST
KN Mohan Kumar Passes Away: ಸ್ಯಾಂಡಲ್‌ವುಡ್ ನಿರ್ದೇಶಕ ಕೆ.ಎನ್‌.ಮೋಹನ್‌ ಕುಮಾರ್‌ ವಿಧಿವಶ

ಸಾರಾಂಶ

ಖ್ಯಾತ ಕಿರುತೆರೆ ಹಾಗೂ ಚಲನಚಿತ್ರ ನಿರ್ದೇಶಕ ಕೆ.ಎನ್‌.ಮೋಹನ್‌ ಕುಮಾರ್‌ (56) ಅವರು ತೀವ್ರ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಎನ್‌.ಆರ್‌.ಕಾಲೋನಿಯ ರಾಮಲೀಲಾ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಮೋಹನ್‌ ಅವರು, ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. 

ಬೆಂಗಳೂರು (ಮೇ.24): ಖ್ಯಾತ ಕಿರುತೆರೆ ಹಾಗೂ ಚಲನಚಿತ್ರ ನಿರ್ದೇಶಕ ಕೆ.ಎನ್‌.ಮೋಹನ್‌ ಕುಮಾರ್‌ (56) ಅವರು ತೀವ್ರ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಎನ್‌.ಆರ್‌.ಕಾಲೋನಿಯ ರಾಮಲೀಲಾ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಮೋಹನ್‌ ಅವರು, ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಸಮೀಪದ ರಂಗ ದೊರೈ ಆಸ್ಪತ್ರೆಗೆ ಕುಟುಂಬ ಸದಸ್ಯರು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತನ ಮೋಹನ್‌ ಕುಮಾರ್‌ ಅವರು ಖ್ಯಾತ ನಿರೂಪಕಿ ಹಾಗೂ ನಟಿ ವತ್ಸಲಾ ಮೋಹನ್‌ ಅವರ ಪತಿ. ಸಿನಿಮಾಟೋಗ್ರಾಫರ್‌ ಆಗಿಯೂ ಬಹಳ ಅಮೂಲ್ಯವಾದ ಕೆಲಸಗಳನ್ನು ಮಾಡುತ್ತಾ ಬಂದ ಮೋಹನ್‌ ಅವರು, ತಮ್ಮ ಮಕ್ಕಳ ಸಿನಿಮಾ ಬೊಂಬೆಯಾಟಕ್ಕೆ ಪ್ರಶಸ್ತಿಯನ್ನೂ ಪಡೆದಿದ್ದರು. ನಾಟಕ ರಂಗದಲ್ಲಿ ಮೋಹನ್‌ ಅವರದು ಬಹಳ ಸಕ್ರಿಯ ಪಾತ್ರ.

'ಅವನು ಒಬ್ಬನೇ ಬರೋನು..ಮಾನ್ ಸ್ಟರ್' ಡೈಲಾಗ್ ಹೊಡೆದು KGFನಲ್ಲಿ ಮಿಂಚಿದ್ದ ನಟ ಮೋಹನ್ ಜುನೇಜ ಇನ್ನಿಲ್ಲ

ಮೃತರು ಸಹೋದ್ಯೋಗಿಗಳು, ಅಭಿಮಾನಿಗಳು, ಸ್ನೇಹಿತರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಆನೇಕಲ್‌ ತಾಲೂಕಿನ ಸಮಂದೂರಿನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ಜಯನಗರ 3ನೇ ಬ್ಲಾಕ್‌ ಪೂರ್ವ 8ನೇ ಮುಖ್ಯರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 9ರಿಂದ 10ಗಂಟೆವರೆಗೆ ಆತ್ಮೀಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಿರ್ಮಾಪಕ ಆನೇಕಲ್ ಬಾಲರಾಜ್‌ ಇನ್ನಿಲ್ಲ: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್‌ ಅವರು ಇಂದು ಬೆಳಗ್ಗೆ ವಾಕಿಂಗ್‌ಗೆ ತೆರಳುವಾಗಿ ವಾಹನವೊಂದು ಹಿಂದಿನಿಂದ ತಾಕಿ ಪುಟ್‌ ಪಾತ್‌ಗೆ ತಲೆ ತಾಕಿದೆ. ತಕ್ಷಣವೇ ಹತ್ತಿರವಿದ್ದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ. 58 ವರ್ಷ ಆನೇಕಲ್ ಬಾಲರಾಜ್ ಅವರು ಜೆಪಿ ನಗರದಲ್ಲಿ ವಾಸವಿದ್ದರು. ದಿನ ಬೆಳಗ್ಗೆ ವಾಕಿಂಗ್ ಮಾಡುವ ಅಭ್ಯಾಸ ಇರುವುದರಿಂದ ಇಂದು ಕೂಡ ವಾಕಿಂಗ್‌ಗೆ ಹೋಗಿದರು. ಆದರೆ ಹಿಂದಿನಿಂದ ವಾಹನವೊಂದು ಡಿಕ್ಕೆ ಹೊಡೆದಿದೆ. ಬಾಲರಾಜ್‌ ಅವರು ಪುಟ್‌ ಪಾತ್‌ ಮೇಲೆ ಬಿದ್ದಿದ್ದಾರೆ, ತಲೆಗೆ ಪೆಟ್ಟು ಬಿದ್ದಿರುವ ಕಾರಣ ನಿಧನರಾಗಿದ್ದಾರೆ. 

Rajashekhar Mansoor Passed Away: ಪ್ರಸಿದ್ಧ ಹಿಂದೂಸ್ತಾನಿ ಗಾಯಕ ರಾಜಶೇಖರ್‌ ಮನ್ಸೂರ್‌ ನಿಧನ

ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಪಿ ಶಂಕರ್ ಪತ್ನಿ ಮಂಜುಳಾ ನಿಧನ: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ಮಾಪಕ ಎಂ.ಪಿ. ಶಂಕರ್ ಪತ್ನಿ ಮಂಜುಳಾ ಶಂಕರ್ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಂಜುಳಾ ಶಂಕರ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಮಂಜುಳಾ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆಗ ಅವರಿಗೆ ಅಂಜಿಯೋಗ್ರಾಮ್ ಮಾಡಿಸಲಾಗಿತ್ತು. ನಂತರ ಬೈಪಾಸ್ ಸರ್ಜರಿಯನ್ನೂ ಮಾಡಲಾಗಿತ್ತು ಎಂದು ಕುಟುಂಬ ಮೂಲಗಳು ಮಾಹಿತಿ ತಿಳಿಸಿವೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜುಳ ಮಂಗಳವಾರ (ಮೇ 10) ಕೊನೆಯುಸಿರೆಳೆದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?