
ಬೆಂಗಳೂರು(ಏ.24): ಲಾಕ್‌ಡೌನ್ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸರ ಕುರಿತು ಕಿರುಚಿತ್ರ ನಿರ್ಮಿಸಲು ಮುಂದಾಗಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.
ಈ ಹಿನ್ನೆಲೆಯಲ್ಲಿ ಯೋಗರಾಜ್ ಭಟ್ ಅವರ ತಂಡ ಗುರುವಾರ ಪುರಭವನದ ಬಳಿ ಚಿತ್ರೀಕರಣ ನಡೆಸಿದ್ದು, ಈ ವೇಳೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹಾಜರಿದ್ದರು.
ಬೆಲ್ ಬಾಟಮ್ ಚಿತ್ರದಲ್ಲಿ ಯೋಗರಾಜ್ ಭಟ್ ಮಾಜಿ ರೌಡಿ
ಈ ಸಂದರ್ಭದಲ್ಲಿ ಮಾತನಾಡಿದ ಭಾಸ್ಕರ್ ರಾವ್, ಯೋಗರಾಜ್ ಭಟ್ ಅವರ ಬಳಿ ಚರ್ಚೆ ವೇಳೆ ಇಂತಹೊಂದು ವಿಷಯ ಪ್ರಸ್ತಾಪವಾಯಿತು. ಅವರೇ ಖುದ್ದಾಗಿ ಮುತುವರ್ಜಿ ವಹಿಸಿ ಕಿರುಚಿತ್ರ ಮಾಡುತ್ತಿದ್ದಾರೆ. ಕೊರೋನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿಯೂ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಅವರ ಪರಿಸ್ಥಿತಿ ಹೇಗಿದೆ ಎಂಬುದನ್ನು ಜನರಿಗೆ ತೋರಿಸುವುದು ಇದರ ಉದ್ದೇಶವಾಗಿದೆ. ಬಜೆಟ್ ಸೇರಿದಂತೆ ಯಾವುದೇ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.