ಕನ್ನಡ ಚಿತ್ರರಂಗಕ್ಕೆ ಆಘಾತ: ಸಂಗೀತ ಲೋಕದ ಖ್ಯಾತ 'ಡ್ರಮ್ಮರ್' ದೇವ ಇನ್ನಿಲ್ಲ!

Published : Sep 26, 2026, 11:30 PM IST
Drummer Deva

ಸಾರಾಂಶ

ಕನ್ನಡ ಚಿತ್ರರಂಗ ಹಾಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದ ಖ್ಯಾತ ಡ್ರಮ್ಮರ್ ದೇವ ಅವರು 64ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗ ಹಾಗೂ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಖ್ಯಾತ ಡ್ರಮ್ಮರ್ ದೇವ (ಕನ್ನಡದ ಶಿವಮಣಿ) ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ದೇವ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿದ್ದ ದೇವ ಅವರ ಆರೋಗ್ಯ ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಹದಗೆಟ್ಟಿತ್ತು. ಇದಕ್ಕೂ ಮುನ್ನ ಗ್ಯಾಂಗ್ರೀನ್ ಸಮಸ್ಯೆಯಿಂದಾಗಿ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು. ಬಳಿಕ ಸ್ಟ್ರೋಕ್ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮನೆಯಲ್ಲಿ ನಿರಂತರ ಚಿಕಿತ್ಸೆ ಪಡೆಯುತ್ತಿದ್ದ ದೇವ ಅವರು, ಇಂದು ರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಡ್ರಮರ್ ಆಗಿ ಗುರುತಿಸಿಕೊಂಡಿದ್ದ ದೇವ, ತಮ್ಮ ವಿಶಿಷ್ಟ ಬೀಟ್ ಮತ್ತು ಸಂಗೀತ ಪ್ರತಿಭೆಯಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಸ್ಯಾಂಡಲ್‌ವುಡ್‌ನ ಹಲವು ಕಾರ್ಯಕ್ರಮಗಳು ಹಾಗೂ ವೇದಿಕೆಗಳಲ್ಲಿ ತಮ್ಮ ಸಂಗೀತದ ಮೂಲಕ ಗಮನ ಸೆಳೆದಿದ್ದರು.

ಆರ್​ಸಿಬಿ ತಂಡದ ಜೊತೆ ಡ್ರಮ್ಮರ್​ ದೇವ ನಂಟು!

ಅಷ್ಟೇ ಅಲ್ಲದೆ, ಆರ್‌ಸಿಬಿ ಪಂದ್ಯಗಳ ಸಂದರ್ಭದಲ್ಲೂ ಲೈವ್ ಬೀಟ್ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದರು. ಇನ್ನು ದೇವ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಸಂಗೀತ ಕ್ಷೇತ್ರದಲ್ಲಿ ದುಃಖದ ಛಾಯೆ ಆವರಿಸಿದೆ. ಅಪಾರ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಟಿ ರುಕ್ಮಿಣಿ ವಸಂತ್ ಫುಲ್ ಬ್ಯುಸಿ: ಕನ್ನಡದ ಬೆಡಗಿಯ ಕೈಯಲ್ಲಿವೆ ಸಾಲು ಸಾಲು ಸಿನಿಮಾಗಳು!
ಡಾ ವಿಷ್ಣುವರ್ಧನ್ ಅಮೃತ ಮಹೋತ್ಸವ ಅದ್ದೂರಿ ಕಾರ್ಯಕ್ರಮ; ಎಲ್ಲಿ..? ಯಾರೆಲ್ಲಾ ಬರ್ತಿದಾರೆ?