ನಟಿ ರಮ್ಯಾ ಅವರ ಮದುವೆಯ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಕೇಳದೆ ಯಾವುದೇ ಸುದ್ದಿ ಮಾಡಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು (ಸೆ.10): ಸ್ಯಾಂಡಲ್‌ವುಡ್ ಕ್ವೀನ್ ಖ್ಯಾತಿಯ ನಟಿ ರಮ್ಯಾ (Ramya alias Divya Spandana) ಅವರು ಮದುವೆಯಾಗುತ್ತಿದ್ದಾರೆ. ನವೆಂಬರ್‌ನಲ್ಲಿ ಮದುವೆ ನಡೆಯಲಿದೆ. ಬಹುಕಾಲದ ಉದ್ಯಮಿ ಗೆಳೆಯನ ಜೊತೆ ನಟಿ ರಮ್ಯಾ, ದಿವ್ಯ ಸ್ಪಂದನ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೊಟೆಲ್ ಒಂದರಲ್ಲಿ ಎಂಗೇಜ್‌ಮೆಂಟ್ ನಡೆದಿದೆ. ಅವರ ಹುಟ್ಟುಹಬ್ಬದ ದಿನ (ನವೆಂಬರ್ 29) ಮದುವೆ ನಡೆಯಲಿದೆ ಎಂದು ಸುದ್ದಿ ಹರಡಿತ್ತು.
ಸೆಪ್ಟೆಂಬರ್ 8 ರಂದು ನಟಿ ರಮ್ಯಾ ಅವರು ಆಪ್ತರೊಬ್ಬರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಾಗ ಸುದ್ದಿ ಹಬ್ಬಿತು. ಈ ಸುದ್ದಿ ಹಬ್ಬಿದಾಗ ಬಹಳಷ್ಟು ಮಂದಿ ಸೋಷಿಯಲ್ ಮೀಡಿಯಾಗಳಲ್ಲಿ ಕೂಡ ಚರ್ಚೆ ಮಾಡ ತೊಡಗಿದ್ದರು. ಯಾರು ವರ? ಏನು ಮಾಡುತ್ತಿದ್ದಾರೆ? ಎಲ್ಲಿಯವರು? ಎಂದೆಲ್ಲ. ಯಾವಾಗ ಈ ಸುಳ್ಳು ಎಂದು ತಿಳಿಯಿತೋ ಅಭಿಮಾನಿಗಳಿಗೆ ನಿರಾಸೆಯಾಗಿತ್ತು.
ಇದೀಗ ಈ ಸುದ್ದಿಗೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಮೋಹಕ ತಾರೆ ರಮ್ಯಾ ಅವರು ನನ್ನನ್ನು ಕೇಳದೆ ಯಾವುದೇ ಸುದ್ದಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
"ಮಾಧ್ಯಮಗಳಿಂದ ನಾನು ಹಲವಾರು ಬಾರಿ ಮದುವೆಯಾಗಿದ್ದೇನೆ, ನಾನು ಲೆಕ್ಕ ಕಳೆದುಕೊಂಡಿದ್ದೇನೆ. ನಾನು ಮದುವೆಯಾದರೆ ಮತ್ತು ಯಾವಾಗ ಎಂದು ನೀವು ನನ್ನನ್ನು ಕೇಳಿ ತಿಳಿಯಿರಿ. ದಯವಿಟ್ಟು ಪರಿಶೀಲಿಸದ ಮೂಲಗಳ ಇಂತಹ ವದಂತಿಗಳನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ."
ಹೀಗಾಗಿ ನಟಿ ಮದುವೆಯಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 41 ವರ್ಷದ ನಟಿ ರಮ್ಯಾ ಅವರು ಕನ್ನಡದಲ್ಲಿ ಒಂದು ದಶಕಗಳಿಗೂ ಹೆಚ್ಚು ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು ಚಿತ್ರರಂಗದಲ್ಲೂ ಮಿಂಚಿದ್ದಾರೆ. ಮಾತ್ರವಲ್ಲ ರಾಜಕಾರಣದಲ್ಲಿ ಕೂಡ ಹೆಸರು ಮಾಡಿದವರು. ಮಂಡ್ಯದ ಮಾಜಿ ಸಂಸದೆಯಾಗಿದ್ದರು.
ದರ್ಶನ್ ಪತ್ನಿ ವಿಜಯಲಕ್ಷ್ಮೀ ಜತೆ ಸಿಎಂ ಸಿದ್ದರಾಮಯ್ಯ ಸೊಸೆ ಸ್ಮಿತಾ ಪಾರ್ಟಿ, ಕುತೂಹಲ ಕೆರಳಿಸಿದ ಫೋಟೋ!
ಸ್ಯಾಂಡಲ್‌ವುಡ್ ಚಿತ್ರರಂಗದಲ್ಲಿ ನಟಿ ರಮ್ಯಾ ಅವರು ಮತ್ತೆ ನಟಿಯಾಗಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾವನ್ನು ನಿರ್ಮಿಸಿ ತಾವು ಚಿತ್ರರಂಗದಿಂದ ದೂರವಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿದ್ದರು. ಭವಿಷ್ಯದಲ್ಲಿ ಅವರ ಮದುವೆ ಸುದ್ದಿ ಬಂದರೆ ಅವರೇ ಸ್ಪಷ್ಟಪಡಿಸಲಿದ್ದಾರೆ. ಕಾಯೋಣ!