'ದಿ ಡೆವಿಲ್' ಸೆಕೆಂಡ್ ಶೆಡ್ಯೂಲ್ ಶುರು, ಮುಂದಿನವಾರ ದರ್ಶನ್ ಶೂಟಿಂಗ್‌ನಲ್ಲಿ ಭಾಗಿ!

Published : Mar 08, 2025, 04:31 PM ISTUpdated : Mar 08, 2025, 04:42 PM IST
'ದಿ ಡೆವಿಲ್' ಸೆಕೆಂಡ್ ಶೆಡ್ಯೂಲ್ ಶುರು, ಮುಂದಿನವಾರ ದರ್ಶನ್ ಶೂಟಿಂಗ್‌ನಲ್ಲಿ ಭಾಗಿ!

ಸಾರಾಂಶ

ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ..

ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ‌ ಎರಡನೇ ಹಂತದ ಚಿತ್ರೀಕರಣ ಆರಂಭ.. ಮುಂದಿನವಾರದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರೀಕರಣದಲ್ಲಿ ಭಾಗಿ!
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ (ಮಿಲನಾ ಪ್ರಕಾಶ್)  ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಕನ್ನಡದ ಸ್ಟಾರ್ ನಟ ದರ್ಶನ್ (Darshan) ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ 'ದಿ ಡೆವಿಲ್' ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ. ಮೊನ್ನೆಯಿಂದಲೇ ಆ ಸಿನಿಮಾದ ಶೂಟಿಂಗ್ ಶುರುವಾಗಿದೆ. 

 'ದಿ ಡೆವಿಲ್' ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಮುಂದಿನವಾರದಿಂದ ಚಿತ್ರೀಕರಣದಲ್ಲಿ ದರ್ಶನ್ ಅವರು ಭಾಗಿಯಾಗಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ  ಮಾಡುವುದಿಲ್ಲ ಎಂದು ತಿಳಿಸಿರುವ ನಿರ್ದೇಶಕ ಪ್ರಕಾಶ್ ವೀರ್, ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ.  

ದರ್ಶನ್‌ ಬಗ್ಗೆ ರಮ್ಯಾ 'ನೋ ಕಾಮೆಂಟ್ಸ್'.. ಹಳೆಯ ಟ್ವೀಟ್ ಮರೆಯದ ನೆಟ್ಟಿಗರ ಟ್ರೋಲ್‌ ರಗಳೆ..!?  

ನಾಯಕ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಯಕಿ ರಚನ ರೈ, ತುಳಸಿ,‌ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದ ಕಲಾವಿದರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ 'ದಿ ಡೆವಿಲ್'  ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್  ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

ಸದ್ಯಕ್ಕೆ ನಟ ದರ್ಶನ್ ಅವರು ಮೈಸೂರಿನಲ್ಲಿ ರೆಸ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಬೆನ್ನು ನೋವಿಗೆ ಚಿಕತ್ಸೆ ಹಾಗೂ ವಿಶ್ರಾಂತಿ ಎರಡನ್ನೂ ಮಾಡುತ್ತಿರುವ ನಟ ದರ್ಶನ್ ಅವರು ಮುಂಬರುವ ಶೂಟಿಂಗ್‌ ಶೆಡ್ಯೂಲ್‌ಗೆ ರೆಡಿ ಆಗುತ್ತಿದ್ದಾರೆ ಎನ್ನಲಾಗಿದೆ. ಕೇಸ್ ಆರೋಪದಲ್ಲಿ ವಿಚಾರಣೆ ಸಾಗುತ್ತಿದ್ದರೂ, ಅನಾರೋಗ್ಯದ ನಿಮಿತ್ತ ನಟ ದರ್ಶನ್‌ ಅವರಿಗೆ ಕೋರ್ಟ್ ಜಾಮೀನು ನೀಡಿದೆ. ಇದೀಗ ಶೂಟಿಂಗ್‌ಗೆ ಕೂಡ ಪರ್ಮಿ‍ಷನ್ ಸಿಕ್ಕಿದ್ದು, ನಟ ದರ್ಶನ್ ಅವರು ಮುಂದಿನವಾರದಿಂದ ಶೂಟಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಿಂದ ಅವರ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. 

ಟ್ರೋಲರ್ಸ್ ಕೈಗೆ ಕೆಂಡ ಇಟ್ಟ ರಮ್ಯಾರ ಚೆಂದದ ಫೋಟೋ ನೋಡಿ ಕೂಲ್ ಆಗಿ..!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಿಗ್ ಬಜೆಟ್ '45' ಅದ್ದೂರಿ ಇವೆಂಟ್, ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನೇರ ಪ್ರಸಾರ!
ಸೂರ್ಯನಿಗೆ ಬಹಳ ಹೊತ್ತು ಗ್ರಹಣ ಹಿಡಿಯಲ್ಲ.. ನಾನ್ ಬರ್ತಿದ್ದೀನಿ ಚಿನ್ನ: ದರ್ಶನ್‌ ಟ್ರೈಲರ್ ಡೈಲಾಗ್‌ಗೆ ಅಪಾರ್ಥ?