
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ ಸಲಗ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ ರೋಮ್ಯಾನ್ಸ್ ಮಾಡಲು ಒಕೆ ಎಂದಿದ್ದಾರೆ.
'ತ್ರಿವಿಕ್ರಮ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಮುಧೋಳ್ ಮೂಲಕ ಸಖತ್ ಮಾಸ್ ಅವತಾರ ತಾಳಿರುವ ವಿಕ್ಕಿಗೆ ನಾಯಕಿಯಾಗಿ ರಾಯಲ್ ಹುಡುಗಿ ನಟಿಸುತ್ತಿದ್ದಾರೆ.ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷ್ಯ ಹರಿದಾಡಿತ್ತು. ಆದ್ರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.
ಮತ್ತೆ ಒಂದಾಯ್ತು 'ರಂಗಸ್ಥಳಂ' ಜೋಡಿ, ಬರಲಿದೆ ರಾಮ್ ಚರಣ್-ಸುಕುಮಾರ್ ಸಂಗಮದ ಮತ್ತೊಂದು ಸಿನಿಮಾ!
ವಿಕ್ರಮ್ ರವಿಚಂದ್ರನ್ ನಟನೆಯ ಮುಂಬರುವ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಸೌಂಡ್ ಮಾಡಲು ಸಜ್ಜಾದ 'ಖಾಲಿ ಡಬ್ಬ',ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ ನಾಗೇಂದ್ರ ಪ್ರಸಾದ್
ಸಂಜನಾ ಆನಂದ್ ಮುಧೋಳ್ ಸಿನಿಮಾ ಜೊತೆಗೆ ದಿನಕರ್ ತೂಗುದೀಪ ನಿರ್ದೇಶನದ ರಾಯಲ್ ಹಾಗೂ ತೆಲುಗಿನ ಫುಲ್ ಬಾಟೆಲ್ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ಹಯಗ್ರೀವ್ ಗೂ ನಾಯಕಿಯಾಗಿರುವ ರಾಯಲ್ ಕ್ವೀನ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.