
Golden Movies Production 'Picture' Release:
ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ಶಿಲ್ಪಾ ಗಣೇಶ್ ಅವರು ನಿರ್ಮಾಣ ಮಾಡಿರುವ 'ಪಿಚ್ಚರ್' (Pitcher) ಸಿನಿಮಾ ಇದೇ ಆ.7ರಂದು ತೆರೆ ಕಾಣಲಿದೆ. ಹಲವು ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಗೋಲ್ಡನ್ ಮೂವೀಸ್ ಇದೀಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣ ಮಾಡಿದೆ. ಸಂದೀಪ್ ಬೆದ್ರ ಆಕ್ಷನ್ ಕಟ್ ಹೇಳಿರುವ 'ಪಿಚ್ಚರ್' ಚಿತ್ರವು ತುಳು ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
ಈ ಬಗ್ಗೆ ಮಂಗಳೂರಿನಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಇತರೆ ಕಲಾವಿದರ ಜೊತೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ರು. ಹೊಸ ಪ್ರತಿಭೆ ನಿತ್ಯಪ್ರಕಾಶ್ ಬಂಟ್ವಾಳ ಮತ್ತು ಒಂದು ಮೊಟ್ಟೆಯ ಕಥೆ ಖ್ಯಾತಿಯ ಅಮೃತಾ ಸುದು ಅವರು ಪಿಚ್ಚರ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಾಸ್ಯವೇ ಹೆಚ್ಚಾಗಿರುವ ಕೌಟುಂಬಿಕ ಕಥಾನಕವಾಗಿರುವ ಪಿಚ್ಚರ್ ಸಿನಿಮಾದಲ್ಲಿ ತುಳು ರಂಗದ ಬಹುತೇಕ ಕಲಾವಿದರು ನಟಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, ತುಳುನಾಡ ಭಾಗದ ಎಲ್ಲಾ ದೊಡ್ಡ ಕಲಾವಿದರು ನಮ್ಮ ಸಿನಿಮಾದಲ್ಲಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್ ರಂತಹ ಘಟಾನುಘಟಿ ಕಲಾವಿದರಿದ್ದಾರೆ. ಅವರ ಅನುಭವದಷ್ಟು ನಮಗೆ ವಯಸ್ಸೂ ಆಗಿಲ್ಲ. ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಹೀಗಾಗಿ ವಿಶೇಷ ಏನಾದರು ಇರಬೇಕು ಎಂದು ಕಾಶ್ಮೀರದಲ್ಲಿ ಶೂಟಿಂಗ್ ಮಾಡಿದ್ದೇವೆ. ಆ ಹಾಡು ಉತ್ತಮವಾಗಿ ಮೂಡಿಬಂದಿದೆ ಎಂದರು.
ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ, ರವಿ ರಾಮಕುಂಜ, ಪುಷ್ಪರಾಜ್ ಬೊಳಾರ್, ಅನಿಲ್ ಉಪ್ಪಳ ಮುಂತಾದವರು ಪಿಚ್ಚರ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಗೋಲ್ಡನ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ ಪಿಚ್ಚರ್ ಸಿನಿಮಾಗೆ ನಿರ್ದೇಶಕ ಸಂದೀಪ್ ಬೆದ್ರ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ - ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ -ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಗ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.