
ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅನೇಕ ವರ್ಷಗಳ ಬಳಿಕ ಸ್ಯಾಂಡಲ್‌ವುಡ್ ಕಡೆ ಮುಖ ಮಾಡಿರುವ ಶಿಲ್ಪಾ ಶೆಟ್ಟಿಯನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಯುಗಾದಿ ಹಬ್ಬದ ಪ್ರಯುಕ್ತ ಶಿಲ್ಪಾ ಶೆಟ್ಟಿ ಫಸ್ಟ್ ಲುಕ್ ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಶಿಲ್ಪಾ ಶೆಟ್ಟಿ ಕೆಡಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಇದೀಗ ಫಸ್ಟ್ ಲುಕ್ ಅನಾವರಣವಾಗಿದೆ.
ಕೆಡಿ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ, ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿಲ್ಪಾ ಶೆಟ್ಟಿ ರೆಟ್ರೋ ಶೈಲಿಯಲ್ಲಿ ಮಿಂಚಿದ್ದಾರೆ. ಬಳಿ ಬಣ್ಣದ ಕೆಂಪು ಚುಕ್ಕಿಗಳಿರುವ ಸೀರೆಯಲ್ಲಿ ಶಿಲ್ಪಾ ಕಾಣಿಸಿಕೊಂಡಿದ್ದಾರೆ. ಉದ್ದ ಕೂದಲು, ಕನ್ನಡಕ ಧರಿಸಿದ್ದಾರೆ. ಬ್ಯಾಗ್ರೌಂಡ್‌ನಲ್ಲಿ ದುಬಾರಿ ಕಾರು ಇದೆ. ಶಿಲ್ಪಾ ಶೆಟ್ಟಿ ಬಳಕುವ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಈ ಪೋಸ್ಟರ್ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಸ್ಟರ್ ಹಂಚಿಕೊಂಡು ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಕೆಡಿ ಬಗ್ಗೆ ಬರೆದುಕೊಂಡಿದ್ದಾರೆ.
ಅಕುಲ್‌ನನ್ನು ಎತ್ತಿ ಕೆಳಗೆ ಬೀಳಿಸಿದ ಶಿಲ್ಪಾ ಶೆಟ್ಟಿ ಬಾಡಿಗಾರ್ಡ್; ಹಳೆಯ ವಿಡಿಯೋ ವೈರಲ್
ಕೆಡಿ ನಿರ್ದೇಶಕ ಪ್ರೇಮ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಬಾಲಿವುಡ್ ಸ್ಟಾರ್ ಸಂಜಯ್ ದತ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕೆಜಿಎಫ್-2 ಬಳಿಕ ಸಂಜಯ್ ದತ್ ಮತ್ತೆ ಕನ್ನಡದಲ್ಲಿ ನಟಿಸುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಕ್ರೇಜಿ ಸ್ಟಾರ್ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅನೇಕ ವರ್ಷಗಳ ಬಳಿಕ ರವಿಚಂದ್ರನ್ ಮತ್ತು ಶಿಲ್ಪಾ ಶೆಟ್ಟಿ ಒಟ್ಟಿಗೆ ಸಿನಿಮಾ ಮಾಡುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
KD: 20 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ ರವಿಚಂದ್ರನ್- ಶಿಲ್ಪಾ ಶೆಟ್ಟಿ?
ಕೆಡಿ ಪಕ್ಕಾ ಮಾಸ್ ಸಿನಿಮಾ. 1970 ರ ದಶಕದಲ್ಲಿ ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾ ತಂಡ ಹೆಚ್ಚು ಏನು ರಿವೀಲ್ ಮಾಡಿಲ್ಲ. ದೊಡ್ಡ ಮಟ್ಟದಲ್ಲಿ ಕೆಡಿ ಸಿನಿಮಾ ಮೂಡಿಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತಯಾರಾಗುತ್ತಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಸದ್ಯ ಸತ್ಯವತಿ ಲುಕ್ ರಿಲೀಸ್ ಮಾಡಿರುವ ಸಿನಿಮಾತಂಡ ಇನ್ನು ಉಳಿದ ಪಾತ್ರಗಳ ಲುಕ್‌ಅನ್ನು ಸದ್ಯದಲ್ಲೇ ಅನಾವರಣ ಮಾಡುವ ಸಾಧ್ಯತೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.